Covid-19 Surg: ಸಿಎಂಗಳ ಸಭೆಯಲ್ಲಿ ಪರೋಕ್ಷವಾಗಿ ಲಾಕ್ಡೌನ್ ಪ್ರಸ್ತಾಪ ನಿರಾಕರಿಸಿದ ಪ್ರಧಾನಿ

ದೇಶದ ಆರ್ಥಿಕತೆಯ ವೇಗವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳುವ ಮೂಲಕ ಪರೋಕ್ಷವಾಗಿ ಲಾಕ್ಡೌನ್ ಮಾಡುವ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ ಎನ್ನಲಾಗಿದೆ. 

ಹಲವು ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಕೋವಿಡ್ ಸಭೆ

ಹಲವು ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಕೋವಿಡ್ ಸಭೆ

  • Share this:
ನವದೆಹಲಿ, ಜ. 13: ಕೋವಿಡ್ ‌-19  (Covid-19) ಮತ್ತು ಓಮೈಕ್ರಾನ್ (Omicron) ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಈ ಸೋಂಕು ಇನ್ನಷ್ಟು ತೀವ್ರವಾಗಿ ಹರಡಲಿದೆ ಎಂಬ ಮಾತುಗಳು ಕೂಡ ಆರೋಗ್ಯ ಕ್ಷೇತ್ರದ ತಜ್ಞರಿಂದ (Health Experts) ಕೇಳಿಬರುತ್ತಿದೆ. ಕೊರೋನಾ ಮೂರನೇ ಅಲೆ (Corona Third Wave) ತೀವ್ರವಾಗಿ ಅಪ್ಪಳಿಸಿ ಅಪಾರ ಪ್ರಮಾಣದ ದುಷ್ಪರಿಣಾಮ ಬೀರಲಿದೆ ಎಂಬ ಭಯ ಕೂಡ ಸೃಷ್ಟಿಯಾಗಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minister Narendara Modi) ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ (Chief Ministers Meet) ನಡೆಸಿದರು. ಈ ಸಭೆಯಲ್ಲಿ ಅವರು ಪರೋಕ್ಷವಾಗಿ ಲಾಕ್ಡೌನ್ ಮಾಡುವ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ.

ಪರಿಸ್ಥಿತಿಯ ಅವಲೋಕನ
ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಕೊರೋನಾ ಸೋಂಕು ಯಾವ್ಯಾವ ರಾಜ್ಯಗಳಲ್ಲಿ ಯಾವ ಪ್ರಮಾಣದಲ್ಲಿದೆ? ಸೋಂಕು ತಡೆಯಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಏನೇನು ಕ್ರಮಗಳನ್ನು ಕೈಗೊಳ್ಳಲಾಗಿದೆ? ದಿನದ ಮತ್ತು ವಾರದ ಪಾಸಿಟಿವ್ ರೇಟ್ ಹೇಗಿದೆ? ಸೋಂಕಿನಿಂದ ಸಾಯುವವರ ಪ್ರಮಾಣ ಹೇಗಿದೆ? ಕೊರೋನಾ ಅಲ್ಲದೆ ಓಮೈಕ್ರಾನ್ ಸೋಂಕು ಹರಡುವಿಕೆ ಪ್ರಮಾಣ ಹೇಗಿದೆ? ಕೊರೋನಾ ಮತ್ತು ಓಮೈಕ್ರಾನ್ ಸೋಂಕು ಹರಡುವಿಕೆ ತಡೆಯಲು ಮುಂದೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ಯಾವುವು ಎಂಬ ವಿಷಯಗಳ ಬಗ್ಗೆ ಸಮಗ್ರವಾದ ಸಮಾಲೋಚನೆ ನಡೆಯಲಿದೆ. ಇದೇ ವೇಳೆ ಮುಖ್ಯಮಂತ್ರಿಗಳಿಂದ ರಾಜ್ಯಗಳ ಪರಿಸ್ಥಿತಿ ಮತ್ತು ಅವು ಕೈಗೊಂಡಿರುವ ಕ್ರಮಗಳೇನು ಎಂಬ ಬಗ್ಗೆ ಚರ್ಚೆ ನಡೆಸಲಾಯಿತು.

ಲಾಕ್ಡೌನ್ ನಿರಾಕರಣೆ
ಇದಾದ ಮೇಲೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೊರೋನಾ ನಿರ್ಮೂಲನೆ ಮಾಡಲು ಕಠಿಣ ಪರಿಶ್ರಮವೊಂದೇ ನಮ್ಮ ಮುಂದಿರುವ ಏಕೈಕ ಮಾರ್ಗ. ಕಳೆದ ಬಾರಿ ಅನುಸರಿಸಿದ ಕ್ರಮಗಳನ್ನೇ ಈಗಲೂ ಮಾಡಬೇಕು. ದೇಶದಲ್ಲಿ ಈಗ ಶೇಕಡಾ 92 ರಷ್ಟು ಮೊದಲ ಡೋಸ್ ಆಗಿದೆ.‌ ಸುಮಾರು ಶೇಕಡಾ 70ರಷ್ಟು ಸೆಕೆಂಡ್ ಡೋಸ್ ಆಗಿದೆ.‌ ಈಗ ನಾವು ಆರ್ಥಿಕತೆಯ ವೇಗವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಈ ಮೂಲಕ ಪರೋಕ್ಷವಾಗಿ ಲಾಕ್ಡೌನ್ ಮಾಡುವ ಪ್ರಸ್ತಾಪವನ್ನು ಅವರು ನಿರಾಕರಿಸಿದರು‌. ಇದಲ್ಲದೆ ಕೊರೋನಾ ಜೊತೆಗೆ ಪ್ರತಿ ಹೊಸ ರೂಪಾಂತರವನ್ನೂ ಎದುರಿಸುವುದಕ್ಕೂ ನಾವು ತಯಾರಿ ನಡೆಸಬೇಕು ಎಂದು ಹೇಳಿದರು.

ಇದನ್ನು ಓದಿ: ಮಹಿಳಾ ಪೊಲೀಸ್ ಕನಸಿಗೆ ಸಿಎ ಕೆಲಸ ಬಿಟ್ಟ ಮೇಸ್ತ್ರಿಯ ಮಗಳು; ಕಡೆಗೂ ಗೆದ್ದೆಬಿಟ್ಟಳು

ಪ್ರಗತಿ ಪರಿಶೀಲನಾ ಸಭೆ
ಇದಕ್ಕೂ ಮೊದಲು ಜನವರಿ 9ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದರು. ಆ ಮಹತ್ವದ ಸಭೆಯಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಭಾಯ್ ಮಾಂಡೋವಿಯಾ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಖಾತೆ ಸಚಿವೆ ಭಾರತಿ ಪ್ರವೀಣ್ ಪವಾರ್, ನೀತಿ ಆಯೋಗದ ಆರೋಗ್ಯ ವಿಭಾಗದ ಸದಸ್ಯ ಡಾ. ವಿ ಕೆ ಪಾಲ್, ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೀವ್ ಗೌಬಾ, ಸಂಪುಟ ಕಾರ್ಯದರ್ಶಿ, ಅಜಯ್ ಭಲ್ಲಾ, ಗೃಹ ಕಾರ್ಯದರ್ಶಿ, ರಾಜೇಶ್ ಭೂಷಣ್, ಔಷಧೀಯ ಇಲಾಖೆ ಕಾರ್ಯದರ್ಶಿ ರಾಜೇಶ್ ಗೋಖಲೆ, ಜೈವಿಕ ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಡಾ. ಬಲರಾಮ್ ಭಾರ್ಗವ, ಐಸಿಎಂಆರ್ ಡಿಜಿ ಆರ್.ಎಸ್. ಶರ್ಮಾ ಮತ್ತಿತರ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. ಇದರ ಬೆನ್ನಲ್ಲೇ ಜನವರಿ 10ರಂದು ಆರೋಗ್ಯ ಸಚಿವ ಮುನ್ಸುಖ್ ಭಾಯ್ ಮಾಂಡೋವಿಯಾ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜೊತೆ ಸಭೆ ನಡೆಸಿದ್ದರು.

ಇದನ್ನು ಓದಿ: ಆತಂಕ ಬೇಡ; ಕಂಟೈನ್‌ಮೆಂಟ್, ಹೋಮ್ ಐಸೋಲೇಶನ್ ಚಿಕಿತ್ಸೆಗೆ ಹೆಚ್ಚಿನ ಗಮನ ಇರಲಿ

ಅಧಿಕಾರಿಗಳಿಗೆ ಕ್ರಮಕ್ಕೆ ಸೂಚನೆ
ಜನವರಿ 9ರಂದು ನಡೆದ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಬೇಕು.‌ ಮಿಷನ್ ಮೋಡ್‌ನಲ್ಲಿ ವ್ಯಾಕ್ಸಿನೇಷನ್‌ ಅಭಿಯಾನ ಮಾಡಬೇಕು. ಜೀನೋಮ್ ಸೀಕ್ವೆನ್ಸಿಂಗ್ ಮತ್ತು ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಬೇಕು.

ಔಷಧೀಯ ವಿಚಾರದಲ್ಲಿ ನಿರಂತರವಾದ ವೈಜ್ಞಾನಿಕ ಸಂಶೋಧನೆಗಳನ್ನು ನಡೆಸುವುದು ಅಗತ್ಯವಾಗಿದೆ. ಕೋವಿಡ್ ಹೊರತಾದ ಆರೋಗ್ಯ ಸೇವೆಗಳನ್ನು ನೀಡುವ ಬಗ್ಗೆಯೂ ಗಮನವಿಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬಗ್ಗೆ ಜಾಗೃತಿ ಮೂಡಿಸಬೇಕು. ಟೆಲಿಮೆಡಿಸಿನ್ ವ್ಯವಸ್ಥೆ ಮೂಲಕ ಎಲ್ಲೆಡೆ ಕೋವಿಡ್ ಪರಿಸ್ಥಿತಿಯನ್ನು ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಿದ್ದರು‌.
Published by:Seema R
First published: