PM Modi: ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಕೇಂದ್ರ ಬದ್ಧ; ಪ್ರಧಾನಿ ಮೋದಿ ಭರವಸೆ

ಇದೇ ವೇಳೆ ರಾಜಕೀಯ ನಾಯಕರ ನಡುವಿನ ಭಿನ್ನಾಭಿಪ್ರಾಯಗಳನ್ನು ಒಪ್ಪಿಕೊಂಡ ಅವರು ರಾಷ್ಟ್ರೀಯ ಹಿತಾಸಕ್ತಿಗಾಗಿ ನಾವು ಕೆಲಸ ಮಾಡಬೇಕಿದೆ ಎಂದರು

ಜಮ್ಮು ಮತ್ತು ಕಾಶ್ಮೀರ ನಾಯಕರೊಂದಿಗೆ ಪ್ರಧಾನಿ

ಜಮ್ಮು ಮತ್ತು ಕಾಶ್ಮೀರ ನಾಯಕರೊಂದಿಗೆ ಪ್ರಧಾನಿ

 • Share this:
  ನವದೆಹಲಿ (ಜೂ. 24):  ಜಮ್ಮು ಮತ್ತು ಕಾಶ್ಮೀರ ಮುಖಂಡರೊಂದಿಗೆ ಇಂದು ಸಭೆ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತೋಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟರ್​ನಲ್ಲಿ ತಿಳಿಸಿರುವ ಪ್ರಧಾನಿ, ಜಮ್ಮು ಮತ್ತು ಕಾಶ್ಮೀರಕ್ಕೆ ತಳಮಟ್ಟದ ಪ್ರಜಾಪ್ರಭುತ್ವವನ್ನು ಬಲಪಡಿಸುವುದು ನಮ್ಮ ಆದ್ಯತೆಯಾಗಿದೆ. ತ್ವರಿತಗತಿಯಲ್ಲಿ ಮತದಾನ ನಡೆಸಲಾಗುವುದು, ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರ ಚುನಾಯಿತ ಸರ್ಕಾರ ಪಡೆಯಲಿದ್ದು, ಅಭಿವೃದ್ಧಿಯತ್ತ ಸಾಗಲಿದೆ ಎಂದಿದ್ದಾರೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಚುನಾವಣೆ ಮುಂತಾದ ರಾಜಕೀಯ ಚಟುವಟಿಕೆಗಳ ಕುರಿತು ನಡೆದ ಸರ್ವಪಕ್ಷ ಸಭೆಯಲ್ಲಿ ಚುನಾವಣೆ ಕುರಿತು ಚರ್ಚೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ  ಪ್ರಜಾಪ್ರಭುತ್ವದ ಅತಿದೊಡ್ಡ ಶಕ್ತಿ ಎಂದರೇ ಒಂದೇ ಟೇಬಲ್​ ಮೇಲೆ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುವುದಾಗಿದೆ. ಜನರು ಅದರಲ್ಲೂ ಯುವಜನರಿಗೆ ರಾಜಕೀಯ ನಾಯಕತ್ವ ಒದಗಿಸಬೇಕು ಮತ್ತು ಅವರ ಆಕಾಂಕ್ಷೆಗಳನ್ನು ಈಡೇರಿಸಬೇಕು ಎಂದು ನಾನು ಜಮ್ಮು ಮತ್ತು ಕಾಶ್ಮೀರ ಮುಖಂಡರಿಗೆ ತಿಳಿಸಿದ್ದೇನೆ ಎಂದು ಮತ್ತೊಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ.

  ಇದನ್ನು ಓದಿ: ಹುಟ್ಟಹಬ್ಬದ ಸಂಭ್ರಮದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಮಗಳು; ಇಲ್ಲಿದೆ ಫೋಟೋಸ್​

  ಸಭೆ ಕುರಿತು ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್​ ಶಾ, ಜಮ್ಮು ಮತ್ತು ಕಾಶ್ಮೀರದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಇಲ್ಲಿ ನಡೆಯುವ ಚುನಾವಣೆಗಳು ಹೆಚ್ಚು ಪ್ರಮುಖ್ಯತೆ ಹೊಂದಿದೆ. ಕಾರಣ ರಾಜ್ಯಸ್ಥಾನವನ್ನು ಪುನಃ ಸ್ಥಾಪಿಸಲು ಇದು ಪ್ರಮುಖ ಮೈಲಿಗಲ್ಲಾಗಿದೆ ಎಂದಿದ್ದಾರೆ.

  ಇನ್ನು ಸಭೆ ಕುರಿತು ತಿಳಿಸಿರುವ ಕಾಂಗ್ರೆಸ್​ ನಾಯಕ ಗುಲಾಂ ನಬಿ ಆಜಾದ್​, ರಾಜ್ಯಕ್ಕೆ ಸ್ಥಾನಮಾನ ನೀಡುವುದು. ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸಲು ವಿಧಾನಸಭಾ ಚುನಾವಣೆ ನಡೆಸುವುದು. ಜಮ್ಮು ಮತ್ತು ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ನೀಡುವುದು. ಎಲ್ಲಾ ರಾಜಕೀಯ ನಾಯಕರನ್ನು ಗೃಹಬಂಧನದಿಂದ ಬಿಡುಗಡೆ ಮಾಡುವ ಕುರಿತು ಕೂಡ ಚರ್ಚೆ ನಡೆಸಲಾಗಿದೆ ಎಂದಿದ್ದಾರೆ.

  ಇದನ್ನು ಓದಿ: ವರ್ಷದೊಳಗೆ 2 ಮಿಲಿಯನ್ ಬಳಕೆದಾರರನ್ನು ಪಡೆದ ಜಿಯೋ ಫೈಬರ್​

  ಇದೇ ವೇಳೆ ಕಣಿವೆ ರಾಜ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಪ್ರಧಾನಿಗಳು ಬೇಸರ ವ್ಯಕ್ತಪಡಿಸಿದರು ಎನ್ನಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಒಂದು ಸಾವು ಕೂಡ ನೋವು ಉಂಟು ಮಾಡುತ್ತದೆ. ಯುವ ಪೀಳಿಗೆಯನ್ನು ರಕ್ಷಿಸುವುದು ನಮ್ಮೆಲ್ಲರ ಸಾಮೂಹಿಕ ಕರ್ತವ್ಯವಾಗಿದೆ. ಯುವಜನತೆಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಬೇಕಿದೆ ಎಂದು ಅವರು ತಿಳಿಸಿದ್ದಾರೆ.

  ಇದೇ ವೇಳೆ ರಾಜಕೀಯ ನಾಯಕರ ನಡುವಿನ ಭಿನ್ನಾಭಿಪ್ರಾಯಗಳನ್ನು ಒಪ್ಪಿಕೊಂಡ ಅವರು ರಾಷ್ಟ್ರೀಯ ಹಿತಾಸಕ್ತಿಗಾಗಿ ನಾವು ಕೆಲಸ ಮಾಡಬೇಕಿದೆ. ಇದರಿಂದ ಅಂತಿಮವಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ಅನುಕೂಲವಾಗಲಿದೆ ಎಂದರು.

  ಜಮ್ಮು ಕಾಶ್ಮೀರದ 14 ವಿವಿಧ ಪಕ್ಷಗಳ ನಾಯಕರೊಂದಿಗೆ ಇಂದು ಮೋದಿ ಸಭೆ ನಡೆಸಿದ್ದರು. ರಾಜ್ಯದ ಮಾಜಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು, ಜಮ್ಮು ಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ವೇಳೆ ಉಪಸ್ಥಿತರಿದ್ದರು. 2019ರ ಆಗಸ್ಟ್​ನಲ್ಲಿ ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು (ಆರ್ಟಿಕಲ್ 370) ತೆರವುಗೊಳಿಸಿದ ಬಳಿಕ ಪ್ರಧಾನಿ ಮೋದಿ ಅಲ್ಲಿನ ನಾಯಕರ ಜೊತೆ ನಡೆದ ಮೊದಲ ಸಭೆ ಇದಾಗಿದೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು
  Published by:Seema R
  First published: