ಬಿಹಾರ ಚುನಾವಣೆ; ಇಂದು ಬೃಹತ್​ ಸಾರ್ವಜನಿಕ ರ‍್ಯಾಲಿಯಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ-ರಾಹುಲ್ ಗಾಂಧಿ

ಮುಂದಿನ ಬುಧವಾರ ಆರಂಭವಾಗಲಿರುವ ಮೂರು ಹಂತದ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೂಡ ಸಹ ಇಂದಿನಿಂದ ಬಿಹಾರದಲ್ಲಿ ರ‍್ಯಾಲಿಗಳನ್ನು ನಡೆಸಲು ಯೋಜನೆ ರೂಪಿಸಿದ್ದಾರೆ.

ನರೇಂದ್ರ ಮೋದಿ.

ನರೇಂದ್ರ ಮೋದಿ.

 • Share this:
  ಪಾಟ್ನಾ (ಅಕ್ಟೋಬರ್​ 23); ಬಹು ನಿರೀಕ್ಷಿತ ಬಿಹಾರ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಸಿಎಂ ನಿತೀಶ್ ಕುಮಾರ್ ನೇತೃತ್ವದ ಎನ್​ಡಿಎ ಮೈತ್ರಿಕೂಟ ಮತ್ತೊಂದು ಅವಧಿಗೆ ಅಧಿಕಾರದ ನಿರೀಕ್ಷೆಯಲ್ಲಿದ್ದರೆ ವಿರೋಧ ಪಕ್ಷಗಳು ಆರ್​​ಜೆಡಿ ನೇತೃತ್ವದಲ್ಲಿ ಒಂದಾಗಿ ನಿತೀಶ್ ಕುಮಾರ್ ಅವರಿಗೆ ಸೋಲುಣಿಸಲು ಒಂದಾಗಿವೆ. ಈ ಹಿನ್ನೆಲೆಯಲ್ಲಿ ಬಿಹಾರದಲ್ಲಿ ಚುನಾವಣಾ ಪ್ರಚಾರ ಗರಿಗೆದರಿದ್ದು, ಎನ್​ಡಿಎ ಪರ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪರ ರಾಹುಲ್ ಗಾಂಧಿ ಇಂದು ಬಿಹಾರದಲ್ಲಿ ಬೃಹತ್ ರ‍್ಯಾಲಿಯನ್ನು ನಡೆಸಲಿದ್ದಾರೆ. ಸಾರ್ವಜನಿಕ ಸಭೆಗಳಲ್ಲಿ ಭಾಗವಹಿ ಜನರನ್ನುದ್ದೇಶಿಸಿ ಮಾತನಾಡುವ ಮೂಲಕ ಮತಯಾಚನೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಕೊರೋನಾ ಸಾಂಕ್ರಾಮಿಯ ಭೀತಿಯ ನಡುವೆ ಈ ಸಾರ್ವಜನಿಕ ಸಭೆಗಳು ನಡೆಯುತ್ತಿದ್ದು ಎಲ್ಲಾ ಪಕ್ಷದವರೂ ಸಾಕಷ್ಟು ಮುಂಜಾಗ್ರತಾ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಂಘಟಕರು ಭರವಸೆ ನೀಡಿದ್ದಾರೆ.

  ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್​ಡಿಎ) ಒಕ್ಕೂಟದ ಪರ ಪ್ರಧಾನಿ ನರೇಂದ್ರ ಮೋದಿ ಅವರು ದೆಹ್ರಿ-ಆನ್ ಸೋನ್, ಗಯಾ ಮತ್ತು ಭಾಗಲ್ಪುರದಲ್ಲಿ ಮೂರು ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ವೇಳೆ ಸಿಎಂ ನಿತೀಶ್ ಕುಮಾರ್ ಅವರು ಡೆಹ್ರಿ ಮತ್ತು ಭಾಗಲ್ಪುರದಲ್ಲಿ ನಡೆಯುವ ರ‍್ಯಾಲಿಗಳಲ್ಲಿ ಪ್ರಧಾನಿ ಮೋದಿ ಅವರನ್ನು ಸೇರುವ ನಿರೀಕ್ಷೆಯಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

  ಈ ಸಂಬಂಧ ಗುರುವಾರ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, "ನಾಳೆ ನನಗೆ ಬಿಹಾರದ ನನ್ನ ಸಹೋದರ ಸಹೋದರಿಯರೊಂದಿಗೆ ಇರಲು ಅವಕಾಶ ಸಿಗಲಿದೆ. ನಾನು ಸಸಾರಂ, ಗಯಾ ಮತ್ತು ಭಾಗಲ್ಪುರದಲ್ಲಿ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡುತ್ತೇನೆ. ಈ ಸಮಯದಲ್ಲಿ ನಾನು ಎನ್ಡಿಎಯ ಅಭಿವೃದ್ಧಿ ಕಾರ್ಯಸೂಚಿಯನ್ನು ಜನರ ಮುಂದೆ ಇಡುತ್ತೇನೆ ಮತ್ತು ಜನರ ಆಶೀರ್ವಾದ ಕೇಳುತ್ತೇನೆ" ಎಂದಿದ್ದರು.

  ಮುಂದಿನ ಬುಧವಾರ ಆರಂಭವಾಗಲಿರುವ ಮೂರು ಹಂತದ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೂಡ ಸಹ ಇಂದಿನಿಂದ ಬಿಹಾರದಲ್ಲಿ ರ‍್ಯಾಲಿಗಳನ್ನು ನಡೆಸಲು ಯೋಜನೆ ರೂಪಿಸಿದ್ದಾರೆ. ಅವರು ನವಾಡಾದ ಹಿಸುವಾ ಮತ್ತು ಭಾಗಲ್ಪುರ್ ಜಿಲ್ಲೆಯ ಕಹಲ್ಗಾಂವ್ನಲ್ಲಿ ಎರಡು ರ‍್ಯಾಲಿಗಳನ್ನು ಉದ್ದೇಶಿಸಿ ಇಂದು ಮಾತನಾಡಲಿದ್ದಾರೆ.

  ರಾಷ್ಟ್ರೀಯ ಜನತಾದಳ (ಆರ್​​ಜೆಡಿ), ಕಾಂಗ್ರೆಸ್ ಮತ್ತು ಎಡ ಪಕ್ಷಗಳನ್ನು ಒಳಗೊಂಡ "ಗ್ರ್ಯಾಂಡ್ ಅಲೈಯನ್ಸ್" ನ ಮುಖ್ಯಮಂತ್ರಿ ಅಭ್ಯರ್ಥಿ ತೇಜಶ್ವಿ ಯಾದವ್ ಅವರು ಹಿಸುವಾದಲ್ಲಿ ರಾಹುಲ್ ಗಾಂಧಿಯನ್ನು ಸೇರುವ ಸಾಧ್ಯತೆ ಇದೆ ಎಂದು ಪಿಟಿಐ ವರದಿ ಮಾಡಿದೆ.

  ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಹಲವಾರು ಸಾರ್ವಜನಿಕ ರ‍್ಯಾಲಿಗಳನ್ನು ಉದ್ದೇಶಿಸಿ ಬಿಜೆಪಿ ಈಗಾಗಲೇ ಬಿಹಾರ ಚುನಾವಣೆಗೆ ತನ್ನ ಸ್ಟಾರ್ ಲೈನ್ ಅಪ್ ಮಾಡಿದೆ.

  ಇದನ್ನೂ ಓದಿ : 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ; ಆರೋಪಿ ಮನೆಯಲ್ಲಿ ಅರೆಬರೆ ಸುಟ್ಟ ಶವ ಪತ್ತೆ

  ರಾಜ್ಯದ ನಿವಾಸಿಗಳಿಗೆ ಉಚಿತ ಲಸಿಕೆಗಳ ಭರವಸೆ ಸೇರಿದಂತೆ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

  ನಿತೀಶ್ ಕುಮಾರ್ ಅವರೇ ಪ್ರತಿದಿನ ನಾಲ್ಕರಿಂದ ಐದು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ ಮತ್ತು ವರ್ಚುವಲ್ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರೆ, ಆರ್​ಜೆಡಿ ಪಕ್ಷದ ಅವರ ಪ್ರತಿಸ್ಪರ್ಧಿ ತೇಜಶ್ವಿ ಯಾದವ್ ಅವರು ಜೈಲಿನಲ್ಲಿರುವ ಅವರ ತಂದೆ ಲಾಲು ಯಾದವ್ ಅವರ ಅನುಪಸ್ಥಿತಿಯಲ್ಲಿ ದಿನಕ್ಕೆ ಎಂಟರಿಂದ ಒಂಬತ್ತು ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
  Published by:MAshok Kumar
  First published: