• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • PM-KISAN: ಕಿಸಾನ್ ಸಮ್ಮಾನ್ ಯೋಜನೆಯಡಿ 9.5 ಕೋಟಿ ರೈತರಿಗೆ 20 ಸಾವಿರ ಕೋಟಿ ಹಣ ಬಿಡುಗಡೆ ಮಾಡಿದ ಪ್ರಧಾನಿ ಮೋದಿ!

PM-KISAN: ಕಿಸಾನ್ ಸಮ್ಮಾನ್ ಯೋಜನೆಯಡಿ 9.5 ಕೋಟಿ ರೈತರಿಗೆ 20 ಸಾವಿರ ಕೋಟಿ ಹಣ ಬಿಡುಗಡೆ ಮಾಡಿದ ಪ್ರಧಾನಿ ಮೋದಿ!

ನರೇಂದ್ರ ಮೋದಿ.

ನರೇಂದ್ರ ಮೋದಿ.

ದೇಶಾದ್ಯಂತ 9.5 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ಸುಮಾರು 19,000 ಕೋಟಿ ರೂ.ಗಳನ್ನು ಪಿಎಂ ಕಿಸಾನ್ ಯೋಜನೆಯಡಿ ವಿತರಿಸಲಾಗಿದೆ ಎಂದು ಮೋದಿ ಹೇಳಿದರು. ಹಾಗೂ ಸರಿಸುಮಾರು 11 ಕೋಟಿ ರೈತ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ಪ್ರಧಾನಿ ತಿಳಿಸಿದರು.

  • Share this:

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ 9.5 ಕೋಟಿಗೂ ಹೆಚ್ಚು ರೈತ ಫಲಾನುಭವಿಗಳಿಗೆ ಎಂಟನೇ ಕಂತು 20,000 ಕೋಟಿ ರೂ.ಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಇಂದು ಬಿಡುಗಡೆ ಮಾಡಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ಅವರು ಹಲವಾರು ರಾಜ್ಯಗಳ ಫಲಾನುಭವಿ ರೈತರೊಂದಿಗೆ ಸಂವಾದ ನಡೆಸಿದರು.


ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಪಶ್ಚಿಮ ಬಂಗಾಳದ ರೈತರು ಈ ಯೋಜನೆಯಿಂದ ಮೊದಲ ಬಾರಿಗೆ ಪ್ರಯೋಜನ ಪಡೆದಿದ್ದಾರೆ. ಪ್ರಸ್ತುತ ಎದುರಾಗಿರುವ ಸಾಂಕ್ರಾಮಿಕ ರೋಗದ ಬಗ್ಗೆಯೂ ಎಚ್ಚರಿಕೆ ವಹಿಸುವಂತೆಯೂ ಸೂಚನೆ ನೀಡಿದರು. ಮತ್ತು ಈ ಸಾಂಕ್ರಾಮಿಕ ರೋಗಕ್ಕೆ ಲಸಿಕೆ ಮಾತ್ರವೇ ಪರಿಹಾರವಾಗಿದೆ ಎಂದು ಹೇಳಿದರು. "ಲಸಿಕೆ ಹಾಕಿದ ನಂತರವೂ ಮಾಸ್ಕ್​ ಧರಿಸುವುದು ಅತ್ಯಗತ್ಯ" ಎಂದು ಮೋದಿ ಹೇಳಿದರು.


ಈ ಸಂದರ್ಭದಲ್ಲಿ ಹಾಜರಿದ್ದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಪಶ್ಚಿಮ ಬಂಗಾಳವು ಈ ಯೋಜನೆಗೆ ಸೇರಿಕೊಂಡಿದ್ದು, ರಾಜ್ಯದ 7 ಲಕ್ಷಕ್ಕೂ ಹೆಚ್ಚು ರೈತರು ಇಂದು ಇದರ ಲಾಭವನ್ನು ಪಡೆಯುತ್ತಿದ್ದಾರೆ.


ಸಿಎನ್‌ಎನ್-ನ್ಯೂಸ್ 18 ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಗೃಹ ಸಚಿವ ಅಮಿತ್ ಶಾ ಅವರು, ರೈತರಿಗಾಗಿ ಕೇಂದ್ರ ಸರ್ಕಾರ ಜಾರಿ ಮಾಡಿರುವ ಪಿಎಂ-ಕಿಸಾನ್ ಯೋಜನೆಯನ್ನು ಸಹ ರಾಜ್ಯ ಸರ್ಕಾರ ನಿಲ್ಲಿಸಿದೆ ಎಂದು ಆರೋಪಿಸಿದ್ದಾರೆ.


ಪಿಎಂ ಕಿಸಾನ್ ಯೋಜನೆಯಡಿ ಕೇಂದ್ರ ಸರ್ಕಾರವು ವಾರ್ಷಿಕವಾಗಿ 14 ಕೋಟಿ ರೈತರಿಗೆ ಮೂರು ಕಂತುಗಳಲ್ಲಿ 6,000 ರೂಪಾಯಿಯನ್ನು ನೇರ ವರ್ಗಾವಣೆ (ಡಿಬಿಟಿ)  ಮೂಲಕ ಮೊತ್ತವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ.  2019 ರ ಫೆಬ್ರವರಿ 24 ರಂದು ಪ್ರಾರಂಭಿಸಲಾದ ಪಿಎಂ-ಕಿಸಾನ್ ಯೋಜನೆಯಡಿ ಇದುವರೆಗೆ 1.15 ಲಕ್ಷ ಕೋಟಿ ರೂ.ಗಳನ್ನು ರೈತ ಫಲಾನುಭವಿಗಳಿಗೆ ವರ್ಗಾಯಿಸಲಾಗಿದೆ.


ಇದನ್ನು ಓದಿ: Oxygen Shortage: ಗೋವಾದಲ್ಲಿ ಪ್ರಾಣವಾಯುಗೆ ಹಾಹಾಕಾರ; ಇಂದೂ ಸಹ ಆಕ್ಸಿಜನ್ ಸಿಗದೆ 13ಕ್ಕೂ ಹೆಚ್ಚು ಮಂದಿ ಸಾವು


ರೈತರಿಗೆ ಹಣ ವರ್ಗಾವಣೆ ಮಾಡಿದ ಬಳಿಕ ಪ್ರಧಾನಿ ಮೋದಿ ಅವರು, ಉತ್ತರ ಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ಮೇಘಾಲಯ, ಜಮ್ಮು- ಕಾಶ್ಮೀರ, ಅಂಡಮಾನ್ ಮತ್ತು ನಿಕೋಬಾರ್ ರಾಜ್ಯಗಳ ರೈತರೊಂದಿಗೆ ಸಂವಾದ ನಡೆಸಿದರು.


ದೇಶಾದ್ಯಂತ 9.5 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಸುಮಾರು 19,000 ಕೋಟಿ ರೂ.ಗಳನ್ನು ಪಿಎಂ ಕಿಸಾನ್ ಯೋಜನೆಯಡಿ ವಿತರಿಸಲಾಗಿದೆ ಎಂದು ಮೋದಿ ಹೇಳಿದರು. ಹಾಗೂ ಸರಿಸುಮಾರು 11 ಕೋಟಿ ರೈತ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ಪ್ರಧಾನಿ ಮೋದಿ ಅವರು ತಿಳಿಸಿದರು.




ಇಂದು ಆರ್ಥಿಕ ವರ್ಷದ ಮೊದಲ ಕಂತನ್ನು ಹಾಗೂ ಪಿಎಂ ಕಿಸಾನ್ ಯೋಜನೆಯ ಎಂಟನೆ ಕಂತನ್ನು ಬಿಡುಗಡೆ ಮಾಡಲಾಯಿತು. ಈ ಯೋಜನೆಯ ಏಳನೇ ಕಂತನ್ನು ಕಳೆದ ವರ್ಷ ಅಂದರೆ 2020ರ ಡಿಸೆಂಬರ್ 25ರಂದು ಬಿಡುಗಡೆ ಮಾಡಲಾಗಿತ್ತು.

top videos
    First published: