10 Lakh Recruitment: 18 ತಿಂಗಳಲ್ಲಿ 10 ಲಕ್ಷ ನೇಮಕಾತಿಗೆ ಮೋದಿ ಸೂಚನೆ

ಮುಂದಿನ 18 ತಿಂಗಳಲ್ಲಿ ಹತ್ತು ಲಕ್ಷ ಜನರ ನೇಮಕಾತಿಯನ್ನು (Recruitment) ಕೈಗೊಳ್ಳಲಾಗುವುದು ಎಂದು ಪ್ರಧಾನಿ ಕಾರ್ಯಾಲಯ (PMO) ಟ್ವಿಟರ್ ಖಾತೆ ಟ್ವೀಟ್ ಮಾಡಿದೆ.

ನರೇಂದ್ರ ಮೋದಿ

ನರೇಂದ್ರ ಮೋದಿ

  • Share this:
ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಮಂಗಳವಾರ ಎಲ್ಲಾ ಸರ್ಕಾರಿ ಇಲಾಖೆಗಳು (Govt Departments) ಮತ್ತು ಸಚಿವಾಲಯಗಳಲ್ಲಿ ಮಾನವ ಸಂಪನ್ಮೂಲಗಳ (Human Resource) ಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಮೂಲಕ ಮುಂದಿನ 18 ತಿಂಗಳಲ್ಲಿ ಹತ್ತು ಲಕ್ಷ ಜನರ ನೇಮಕಾತಿಯನ್ನು (Recruitment) ಕೈಗೊಳ್ಳಲಾಗುವುದು ಎಂದು ಪ್ರಧಾನಿ ಕಾರ್ಯಾಲಯ (PMO) ಟ್ವಿಟರ್ ಖಾತೆ ಟ್ವೀಟ್ ಮಾಡಿದೆ. ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಈಗ ಇರುವಂತಹ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರದ ಕಾರ್ಯದರ್ಶಿಗಳಿಗೆ ಮೋದಿ ಎರಡು ತಿಂಗಳ ಹಿಂದೆ ಸೂಚನೆ ಕೊಟ್ಟಿದ್ದರು. ಅದಾದ ನಂತರ ಈಗ ಪರಿಶೀಲನಾ ಸಭೆ ನಡೆಯುತ್ತಿದೆ ಎಂದು ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಹೇಳಿದ್ದಾರೆ.

ಏಪ್ರಿಲ್ 2 ರಂದು ಕಾರ್ಯದರ್ಶಿಗಳೊಂದಿಗಿನ ಅವರ ಸಭೆಯ ಸಂದರ್ಭದಲ್ಲಿ, ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿರುವ ಎಲ್ಲಾ ಸರ್ಕಾರದ ಮಧ್ಯಸ್ಥಿಕೆಗಳಲ್ಲಿ ಉದ್ಯೋಗವು ಕೇಂದ್ರೀಕೃತವಾಗಿರಬೇಕು ಎಂದು ಪ್ರಧಾನಿ ಸ್ಪಷ್ಟವಾಗಿ ಹೇಳಿದ್ದರು.

ನಿರುದ್ಯೋಗದ ಬಗ್ಗೆ ಪ್ರತಿಪಕ್ಷಗಳಿಂದ ಪದೇ ಪದೇ ಟೀಕೆ

ಸಚಿವ ಸಂಪುಟ ಕಾರ್ಯದರ್ಶಿ ಕಾರ್ಯದರ್ಶಿಗಳಿಗೆ ಪತ್ರ ಬರೆದು ಪ್ರಧಾನಿಯವರ ಸಲಹೆ ಮೇರೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಪದೇ ಪದೇ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ನಿರ್ಧಾರ ಬಂದಿದೆ. ವಿವಿಧ ಸರ್ಕಾರಿ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳನ್ನು ಆಗಾಗ್ಗೆ ಫ್ಲ್ಯಾಗ್ ಮಾಡಲಾಗಿದೆ.
Published by:Divya D
First published: