Dharamshala flood; ಕೇಂದ್ರದಿಂದ ಅಗತ್ಯ ನೆರವು: ಪ್ರಧಾನಿ ಮೋದಿ

ನೈಸರ್ಗಿಕ ವಿಕೋಪದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ವರದಿ ಪಡೆದಿದ್ದು, ಅಗತ್ಯ ನೆರವು ಒದಗಿಸುವ ಭರವಸೆ ನೀಡಿದ್ದಾರೆ.

ಪ್ರವಾಹದ ದೃಶ್ಯ

ಪ್ರವಾಹದ ದೃಶ್ಯ

 • Share this:
  ಹಿಮಾಚಲ ಪ್ರದೇಶದ ಪ್ರಸಿದ್ಧ ಪ್ರವಾಸಿ  ಸ್ಥಳ ಧರ್ಮಶಾಲಾದ ಭುಗ್ಸುನಾಗ್ ಪ್ರದೇಶದಲ್ಲಿ​​ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನೈಸರ್ಗಿಕ ವಿಕೋಪದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ವರದಿ ಪಡೆದಿದ್ದು, ಅಗತ್ಯ ನೆರವು ಒದಗಿಸುವ ಭರವಸೆ ನೀಡಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಪ್ರಧಾನಿಗಳು, ಹಿಮಾಚಲ ಪ್ರದೇಶದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು, ಅಧಿಕಾರಿಗಳು ಈಗಾಗಲೇ ಹಿಮಾಚಲ ಪ್ರದೇಶ ರಾಜ್ಯ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು,  ಅಗತ್ಯ ಕ್ರಮಹಿಸುವಂತೆ ತಿಳಿಸಿದ್ದು, ಹಾನಿಯಾದ ಪ್ರದೇಶಗಳ ಜನರ ಸುರಕ್ಷತೆ ಕ್ರಮ ವಹಿಸಲಾಗಿದೆ ಎಂದಿದ್ದಾರೆ.   ಭುಗ್ಸ್​ನಾಗ್​ನಲ್ಲಿ ಅತಿ ಹೆಚ್ಚು ಮಳೆಯಾದ ಪರಿಣಾಮ ಕಟ್ಟಡಗಳು ಧರೆ ಉರುಳಿದ್ದು, ಕಾರುಗಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದೆ. ಭಾರೀ ಮಳೆ ನೀರಿನಿಂದಾಗಿ ಇಲ್ಲಿನ ಚರಂಡಿಯೊಂದು ತನ್ನ ದಿಕ್ಕ ಬದಲಾಯಿಸಿದ್ದು, ರಸ್ತೆಯಲ್ಲಿಯೇ ಹರಿಯುತ್ತಿದೆ. ಇದರಿಂದ ರಸ್ತೆ ಬದಿ ನಿಲ್ಲಿಸಿದ ವಾಹನಗಳು ಕೊಚ್ಚಿ ಹೋಗಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಭಾರೀ ಪ್ರಮಾಣದ ಮಳೆಯಿಂದಾಗಿ ಈಗಾಗಲೇ ಅಪಾರ ಪ್ರಮಾಣದ ಆಸ್ತಿ-ಪಾಸ್ತಿಗಳು ಹಾನಿಯಾಗಿವೆ. ಸ್ಥಳೀಯರಿಗೆ, ಪ್ರವಾಸಿಗರಿಗೆ ನದಿ ತೀರದ ಪ್ರದೇಶಕ್ಕೆ ತೆರಳದಂತೆ ಎಚ್ಚರಿಕೆ ವಹಿಸಲಾಗಿದೆ.  ಭಾರೀ ಮಳೆಯಿಂದಾಗಿ ಅನೇಕ ಮನೆಗಳು ಕೂಡ ಜಲಾವೃತ್ತವಾಗಿದೆ. ಧರ್ಮಶಾಲದ ಬಳಿಯಿರುವ ಮಾಂಝಿ ನದಿ ಉಕ್ಕಿ ಹರಿಯುತ್ತಿದ್ದು, ಜನರು ಕಂಗಾಲಾಗಿದ್ದಾರೆ. ಕಾಂಗ್ರಾ ಜಿಲ್ಲೆ ಸೇರಿದಂತೆ ಹಿಮಾಚಾಲ ಪ್ರದೇಶದ ಅನೇಕ ಜಿಲ್ಲೆಗಳಲ್ಲಿ ಕೂಡ ಭಾರೀ ಮಳೆಯಾಗಿದೆ.
  ಕಾಂಗ್ರಾ ಜಿಲ್ಲೆಯಲ್ಲಿ ಭಾರೀ ಮಳೆಗೆ ಇಬ್ಬರು ವ್ಯಕ್ತಿಗಳು ಕಣ್ಮರೆಯಾಗಿದ್ದಾರೆ ಎಂದು ಇಲ್ಲಿನ ಜಿಲ್ಲಾಧಿಕಾರಿ ನಿಪುಣ್​ ಜಿಂದಾಲ್​ ತಿಳಿಸಿದ್ದಾರೆ. ಭುಗ್ಸ್​ ನಾಗ್​ನಲ್ಲಿ ಮೇಘ ಸ್ಪೋಟವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ, ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ ಎಂದು ಉಪ ಜಿಲ್ಲಾಧಿಕಾರಿ ತಿಳಿಸಿದ್ದಾರೆ.  ಹಿಮಾಚಲ ಪ್ರದೇಶ ಮಾತ್ರವಲ್ಲದೇ ಉತ್ತರ ಭಾರತದ ಅನೇಕ ಕಡೆ ಭಾರೀ ಮಳೆಯಾಗಿದೆ. ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಮಿಂಚಿನ ಹೊಡೆತಕ್ಕೆ 60 ಜನರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

  ಜಮ್ಮು ಕಾಶ್ಮೀರದಲ್ಲೂ ಮಳೆ ಅಬ್ಬರ

  ಇಂದು ಜಮ್ಮು ಮತ್ತು ಕಾಶ್ಮೀರದಲ್ಲೂ ಭಾರೀ ಮಳೆಯಾಗಿದ್ದು, ತಪಮಾನ ಕನಿಷ್ಠಕ್ಕೆ ಇಳಿದಿದೆ, ಇಲ್ಲಿನ ಗಂಡರ್​ಬಾಲ್​ನಲ್ಲಿ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ, ದೆಹಲಿ, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ, ಪಶ್ಚಿಮ ರಾಜಸ್ಥಾನ ಹೊರತು ಪಡಿಸಿ ದೇಶದ ಬಹುತೇಕ ಪ್ರದೇಶದಲ್ಲಿ ಮೋಡ ಕವಿದ ವಾತವಾರಣವಿದ್ದು, ಮಳೆಯಾಗುತ್ತಿದೆ.

  ಇದನ್ನು ಓದಿ: ಕೇರಳ, ಕರ್ನಾಟಕದಲ್ಲಿ ಬಿರುಸಿನ ಮಳೆ, ವರುಣನ ಆಗಮನದ ನಿರೀಕ್ಷೆಯಲ್ಲಿ ದೆಹಲಿ

  ದೇಶದೆಲ್ಲೆಡೆ ನೈರುತ್ಯ ಮುಂಗಾರು ಅಬ್ಬರ ಜೋರಾಗಿದ್ದು, ದಕ್ಷಿಣ ಭಾರತ ಸೇರಿದಂತೆ ಉತ್ತರ ಭಾರದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಿದೆ. ಭಾನುವಾರ ಸುರಿದ ಭಾರಿ ಮಳೆಗೆ ಉತ್ತರ ಪ್ರದೇಶ ಮತ್ತು ರಾಜಸ್ಥಾನ್​, ಗುಜರಾತ್​, ಹಿಮಾಚಲ ಪ್ರದೇಶದ ಜನ ಜೀವನ ಅಸ್ತ ವ್ಯಸ್ತವಾಗಿದೆ. ಈ ನಡುವೆ ಸುಡುವ ಬಿಸಿಲಿನಿಂದ ತತ್ತರಿಸಿರುವ ದೆಹಲಿ ಜನರು ಮಳೆಗಾಗಿ ಎದುರು ನೋಡುತ್ತಿದ್ದಾರೆ. ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಸಲಾಗಿದೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
  Published by:Seema R
  First published: