ಮೋದಿ ಮನ್​ ಕಿ ಬಾತ್​ ಭಾಷಣ ಮಾಡುವ ಬದಲು ತುಸು ನಮ್ಮ ಮಾತನ್ನೂ ಆಲಿಸಲಿ: ಜಾರ್ಖಂಡ್ ಸಿಎಂ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿ ತಮ್ಮ ಕರೆಯಲ್ಲಿ ಅವರಷ್ಟೇ ಮಾತನಾಡಿದ್ದು, ಮುಖ್ಯಮಂತ್ರಿ ಸೊರೆನ್‌ಗೆ ಮಾತನಾಡಲು ಹಾಗೂ ಅವರ ಕಳವಳವನ್ನು ವ್ಯಕ್ತಪಡಿಸಲು ಅವಕಾಶ ನೀಡಿಲ್ಲದ ಕಾರಣ ಅವರು ಅಸಮಾಧಾನಗೊಂಡಿದ್ದಾರೆ ಎಂದು ಪಿಟಿಐ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಹೇಮಂತ್ ಸೋರೆನ್-ನರೇಂದ್ರ ಮೋದಿ.

ಹೇಮಂತ್ ಸೋರೆನ್-ನರೇಂದ್ರ ಮೋದಿ.

 • Share this:
  ಜಾರ್ಖಂಡ್ (ಮೇ 07); "ದೇಶದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಕೈಮೀರುತ್ತಿದೆ. ಜಾರ್ಖಂಡ್​ ಸಹ ಇದಕ್ಕೆ ಹೊರತಾಗಿಲ್ಲ. ಕೋವಿಡ್​ ಕಾರಣಕ್ಕೆ ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳು ಉದ್ಭವವಾಗಿದೆ. ಆಕ್ಸಿಜನ್​ ಸೇರಿದಂತೆ ಸಾಕಷ್ಟು ವೈದ್ಯಕೀಯ ಸೌಲಭ್ಯಗಳ ಅಗತ್ಯ ಇದೆ. ಆದರೆ, ಕೇಂದ್ರ ಸರ್ಕಾರ ಈ ಯಾವುದರ ಬಗ್ಗೆಯೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಮನ್​ ಕಿ ಬಾತ್​ ಭಾಷಣ ಮಾಡುವ ಮೊದಲು ತುಸು ನಮ್ಮ ಮಾತುಗಳನ್ನೂ ಆಲಿಸಲಿ" ಎಂದು ಜಾರ್ಖಂಡ್​ ರಾಜ್ಯದ ಮುಖ್ಯಮಂತ್ರಿ ಹೇಮಂತ್ ಸೋರೆನ್​ ಆಕ್ರೋಶ ಹೊರಹಾಕಿದ್ದಾರೆ. ಅಸಲಿಗೆ ಕೋವಿಡ್​ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯದ ಸಿಎಂ ಗಳಿಗೆ ಕರೆ ಮಾಡಿ ವಿಚಾರಿಸುತ್ತಿದ್ದಾರೆ. ಆದರೆ, ತಮಗೆ ಕರೆ ಮಾಡಿದ್ದಾಗ ಅವರು ನನಗೆ ಮಾತನಾಡಲು ಅವಕಾಶವೇ ನೀಡಿಲ್ಲ ಎಂದುದು ಸಿಎಂ ಹೇಮಂತ್ ಸೋರೆನ್ ಆಕ್ರೋಶಕ್ಕೆ ಕಾರಣವಾಗಿದೆ.  ಪ್ರಧಾನಿ ನರೇಂದ್ರ ಮೋದಿ ನಿನ್ನೆ ಆಂಧ್ರಪ್ರದೇಶ, ಒಡಿಶಾ, ತೆಲಂಗಾಣ ಮತ್ತು ಜಾರ್ಖಂಡ್ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದರು. ಆದರೆ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಈ ಮಾತುಕತೆಯ ಬಗ್ಗೆ ತಮ್ಮ ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  ಅವರು ಟ್ವಿಟರ್‌ನಲ್ಲಿ, "ಇಂದು, ಗೌರವಾನ್ವಿತ ಪ್ರಧಾನ ಮಂತ್ರಿ ನನಗೆ ಕರೆ ಮಾಡಿದರು. ಆದರೆ, ಅವರು ಕರೆಯಲ್ಲಿ ತಮ್ಮ 'ಮನ್ ಕಿ ಬಾತ್' ಅನ್ನು ಮಾತ್ರ ಆಡಿದರೇ ಹೊರತು, ನಮ್ಮ ಮಾತುಗಳನ್ನು ಆಲಿಸುವ ಗೋಜಿಗೆ ಹೋಗಿಲ್ಲ. ಹೀಗಾಗಿ ಅವರು ನಮ್ಮ ಮಾತನ್ನು ಆಲಿಸುತ್ತಿದ್ದರೆ ಚೆನ್ನಾಗಿತ್ತು" ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

  ಪ್ರಧಾನಿ ನರೇಂದ್ರ ಮೋದಿ ತಮ್ಮ ಕರೆಯಲ್ಲಿ ಅವರಷ್ಟೇ ಮಾತನಾಡಿದ್ದು, ಮುಖ್ಯಮಂತ್ರಿ ಸೊರೆನ್‌ಗೆ ಮಾತನಾಡಲು ಹಾಗೂ ಅವರ ಕಳವಳವನ್ನು ವ್ಯಕ್ತಪಡಿಸಲು ಅವಕಾಶ ನೀಡಿಲ್ಲದ ಕಾರಣ ಅವರು ಅಸಮಾಧಾನಗೊಂಡಿದ್ದಾರೆ ಎಂದು ಪಿಟಿಐ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

  ಮುಖ್ಯಮಂತ್ರಿ ಹೇಮಂತ್ ಸೋರೆನ್ ಈ ಟ್ವೀಟ್‌ಗೆ ಬಿಜೆಪಿ ಮುಖಂಡರು ಟೀಕೆ ವ್ಯಕ್ತಪಡಿಸಿದ್ದಾರೆ. ಅಸ್ಸಾಂ ಬಿಜೆಪಿ ಮುಖಂಡ ಹಿಮಾಂತ ಬಿಸ್ವಾ ಶರ್ಮಾ ಇದನ್ನು ಕೀಳುಮಟ್ಟದ ಪ್ರಚಾರ ತಂತ್ರ ಎಂದು ಹೇಳಿದ್ದಾರೆ. ಜಾಖಾಂಡ್ ಬಿಜೆಪಿ ನಾಯಕ, ಬಾಬುಲಾಲ್ ಮರಂಡಿ, "ಹೇಮಂತ್ ಸೊರೆನ್ ಒಬ್ಬ ವಿಫಲ ಮುಖ್ಯಮಂತ್ರಿ" ಎಂದು ಕಿಡಿಕಾರಿದ್ದಾರೆ.

  ಈ ಬಗ್ಗೆ ಕಾಂಗ್ರೆಸ್ ಪ್ರಧಾನಿ ಮೋದಿಯನ್ನು ಗುರಿಯಾಗಿಸಿದ್ದು, ಸೊರೆನ್ ಅವರಿಗೆ ಬೆಂಬಲಿಸಿದ್ದಾರೆ. ಕಾಂಗ್ರೆಸ್ ನಾಯಕ ಪವನ್ ಖೇರಾ, "ಇದು ತುಂಬಾ ಗಂಭೀರ ಮತ್ತು ಆತಂಕಕಾರಿ ಸಂಗತಿಯಾಗಿದೆ, ಈ ಸಮಯದಲ್ಲಿ ಕೂಡಾ ಪ್ರಧಾನಿ ಮಾತನಾಡಲು ಬಯಸುತ್ತಾರೆಯೆ ವಿನಃ, ಸಮಸ್ಯೆಯನ್ನು ಕೇಳಿಸಿಕೊಳ್ಳುತ್ತಿಲ್ಲ" ಎಂದು ಎಂದು ಬರೆದಿದ್ದಾರೆ.

  ದೇಶದಲ್ಲಿ ದಿನನಿತ್ಯ ಸಂಭವಿಸುತ್ತಿರುವ ಕೊರೊನಾ ಸಾವುಗಳ ಪೈಕಿ ಶೇ.75 ಕ್ಕಿಂತಲೂ ಹೆಚ್ಚು ಪಾಲು ಹೊಂದಿರುವ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪಟ್ಟಿಯಲ್ಲಿ ಜಾರ್ಖಂಡ್ ಕೂಡ ಸೇರಿದೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ. ಈ ಪಟ್ಟಿಯಲ್ಲಿ ಉಳಿದವುಗಳು ಮಹಾರಾಷ್ಟ್ರ, ಉತ್ತರ ಪ್ರದೇಶ, ಕರ್ನಾಟಕ, ದೆಹಲಿ, ಛತ್ತೀಸ್‌ಗಡ, ಹರಿಯಾಣ, ಪಂಜಾಬ್, ತಮಿಳುನಾಡು ಮತ್ತು ರಾಜಸ್ಥಾನ ರಾಜ್ಯಗಳು ಸೇರಿವೆ.

  ಇದನ್ನೂ ಓದಿ: Siddaramaiah: ಸುಪ್ರೀಂ ತಪರಾಕಿಯಿಂದಲಾದರೂ ಪ್ರಾಣದ ಜೊತೆ ಚೆಲ್ಲಾಟವಾಡುವ‌ ಕ್ರೌರ್ಯವನ್ನು ನಿಲ್ಲಿಸಿ; ಸಿದ್ದರಾಮಯ್ಯ

  ಭಾರತದಲ್ಲಿ ಕೊರೋನಾ ಆಘಾತ:

  ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ‌.‌ ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು, ಏಪ್ರಿಲ್ 14ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ‌ಹೆಚ್ಚು‌ ಜನರು ಹಾಗೂ ಏಪ್ರಿಲ್ 17ರಿಂದ ದಿನ‌ ಒಂದರಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರಾಗುತ್ತಿದ್ದರು. ಈಗ ದೇಶದ ಕೊರೊನಾ ಪೀಡಿತರ ಸಂಖ್ಯೆ ಎರಡು ಕೋಟಿಯನ್ನೂ ದಾಟಿದೆ. ಅಲ್ಲದೆ ಇದೇ ಮೊದಲ ಬಾರಿಗೆ ನಾಲ್ಕು ಲಕ್ಷಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಗೋಚರಿಸಲು ಆರಂಭಿಸಿವೆ.

  ಗುರುವಾರ ಭಾರತದಲ್ಲಿ 4,14,188 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 3,31,507 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ ಎರಡು ಕೋಟಿ ದಾಟಿದ್ದು 2,14,91,598ಕ್ಕೆ ಏರಿಕೆ ಆಗಿದೆ.‌ ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದ್ದು ದೇಶದಲ್ಲಿ ಇದೀಗ ದಿನ ಒಂದರಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ‌ ಸಾವನ್ನಪ್ಪುತ್ತಿದ್ದಾರೆ. ಗುರುವಾರ 3,915 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆದವರ ಸಂಖ್ಯೆ 2,34,083ಕ್ಕೆ ಏರಿಕೆ ಆಗಿದೆ.

  ದೇಶದಲ್ಲಿ ಮೊತ್ತ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಅದಾದ ಬಳಿಕ ಅದು ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಒಂದು ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಈವರೆಗಿನ ದಾಖಲೆ ಆಗಿತ್ತು.
  Published by:MAshok Kumar
  First published: