ಇಂದು ಸಂಜೆ 6 ಗಂಟೆಗೆ ಜನರಿಗೆ ವಿಶೇಷ ಸಂದೇಶ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ

ಹಬ್ಬ ಮತ್ತು ಹಬ್ಬದ ಸಂದರ್ಭದಲ್ಲಿ ಜನ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಎಚ್ಚರಿಕೆ ಮತ್ತು ಮಾಹಿತಿ ನೀಡುವ ಸಲುವಾಗಿ ಇಂದು ಸಂಜೆ 6 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಮನ್​ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ.

ಪ್ರಧಾನಿ ನರೇಂದ್ರ ಮೋದಿ.

 • Share this:
  ನವ ದೆಹಲಿ (ಅಕ್ಟೋಬರ್​ 20); ಇಂದು ಸಂಜೆ 6 ಗಂಟೆ ದೂರದರ್ಶನದಲ್ಲಿ ದೇಶದ ಜನರಿಗೆ ವಿಶೇಷ ಸಂದೇಶವನ್ನು ನೀಡಲಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಈ ಕುರಿತು ಟ್ವೀಟ್​ ಮೂಲಕ ಮಾಹಿತಿ ನೀಡಲಾಗಿದೆ.

  ಇತ್ತೀಚೆಗೆ ದೇಶದಲ್ಲಿ ಕೊರೋನಾ ವೈರಸ್​ ಹಾವಳಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ನಡುವೆ ದಸರಾ ದೀಪಾವಳಿ ಸೇರಿದಂತೆ ಅನೇಕ ಹಬ್ಬಗಳು ಎದುರಾಗಿದ್ದು ಈ ವೇಳೆ ಕೊರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಫೆಬ್ರವರಿ ವೇಳೆಗೆ ದೇಶದ ಶೇ.50 ರಷ್ಟು ಜನಕ್ಕೆ ಈ ಸೋಂಕು ತಗುಲಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.  ಹೀಗಾಗಿ ಹಬ್ಬ ಮತ್ತು ಹಬ್ಬದ ಸಂದರ್ಭದಲ್ಲಿ ಜನ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಎಚ್ಚರಿಕೆ ಮತ್ತು ಮಾಹಿತಿ ನೀಡುವ ಸಲುವಾಗಿ ಇಂದು ಸಂಜೆ 6 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಮನ್​ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

  ಇದನ್ನೂ ಓದಿ : ರಾಜ್ಯದ ದಿಟ್ಟ ರೈತ ಹೋರಾಟಗಾರ ಮಾರುತಿ ಮಾನ್ಪಡೆ ಕೊರೋನಾಗೆ ಬಲಿ!

  ಇತ್ತೀಚೆಗೆ ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಯೂಟ್ಯೂಬ್​ನಲ್ಲಂತೂ ಲೈಕ್​ಗಳಿಗಿಂತ ಡಿಸ್​ಲೈಕ್​ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅಲ್ಲದೆ, ಮೋದಿ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ಯುವ ಸಮುದಾಯ "ಮಾತನಾಡಿದ್ದು ಸಾಕು ನಮಗೆ ಉದ್ಯೋಗ ಕೊಡಿ, ಮನಸ್ಸಿನ ಮಾತು ಸಾಕು ನಮ್ಮ ಸಮಸ್ಯೆಗಳನ್ನು ಆಲಿಸಿ" ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನವನ್ನೇ ಆರಂಭಿಸಿದ್ದಾರೆ.

  ಹೀಗಾಗಿ ಇಂದಿನ ಕಾರ್ಯಕ್ರಮ ಮತ್ತು ಈ ಕಾರ್ಯಕ್ರಮದಲ್ಲಿ  ಪ್ರಧಾನಿ ನರೇಂದ್ರ ಮೋದಿ ಆಡಲಿರುವ ಮಾತು ಯುವ ಸಮಾಜದ ಮೇಲೆ ಎಂತಹ ಪರಿಣಾಮ ಬೀರಲಿದೆ? ಅಥವಾ ಈ ಕಾರ್ಯಕ್ರಮ ಸಹ ಮತ್ತೊಮ್ಮೆ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗುತ್ತಾ? ಎಂಬುದನ್ನು ಕಾದುನೋಡಬೇಕಿದೆ.
  Published by:MAshok Kumar
  First published: