ಪೌರತ್ವದ ಕಿಚ್ಚು: ಖೇಲೋ ಇಂಡಿಯಾ ಉದ್ಘಾಟನೆಗೆ ಪ್ರಧಾನಿ ಮೋದಿ ಗೈರು ಸಾಧ್ಯತೆ

ದೇಶದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕು ಎಂಬ ಉದ್ದೇಶದಿಂದ 2018ರಲ್ಲಿ ಖೇಲೋ ಇಂಡಿಯಾ ಗೇಮ್ಸ್​ ಅನ್ನು ಪ್ರತಿವರ್ಷ ಆಚರಿಸಲಾಗುತ್ತಿದೆ. ಈ ಬಾರಿ ಮೂರನೇ ಖೇಲೋ ಇಂಡಿಯಾ ಅಸ್ಸಾಂನಲ್ಲಿ ನಡೆಯುತ್ತಿದೆ.

Seema.R | news18-kannada
Updated:January 8, 2020, 3:31 PM IST
ಪೌರತ್ವದ ಕಿಚ್ಚು: ಖೇಲೋ ಇಂಡಿಯಾ ಉದ್ಘಾಟನೆಗೆ ಪ್ರಧಾನಿ ಮೋದಿ ಗೈರು ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ.
  • Share this:
ಗುವಾಹಟಿ (ಜ.8): ದೇಶಾದ್ಯಾಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗಳು ನಡೆಯುತ್ತಲೇ ಇದ್ದು, ಈಶಾನ್ಯ ಭಾರತದಲ್ಲಿ ಈ ಕಿಚ್ಚು ಹೆಚ್ಚಾಗಿತ್ತು. ಈ ಹಿನ್ನೆಲೆ ಇಲ್ಲಿ ಆಯೋಜಿಸಲಾಗಿರುವ ಖೇಲೋ ಇಂಡಿಯಾ ಯೂಥ್​ ಗೇಮ್​ 2020 ಉದ್ಘಾಟನೆಗೆ  ಪ್ರಧಾನಿ ಮೋದಿ ಗೈರಾಗುವ ಸಾಧ್ಯತೆ ಹೆಚ್ಚಿದೆ.

ಗುವಾಹಟಿಯಲ್ಲಿ ಇದೇ ಜನವರಿ 10 ರಿಂದ ಖೇಲೋ ಇಂಡಿಯಾ ಯೂಥ್​​ ಗೇಮ್ಸ್​ ಆಯೋಜಿಸಲಾಗಿದೆ. ಈ ಕುರಿತು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ಕೂಡ ನೀಡಲಾಗಿದೆ. ಆದರೆ, ಇಲ್ಲಿಯವರೆಗೂ ಕಾರ್ಯಕ್ರಮಕ್ಕೆ ಹಾಜರಾಗುವ ಕುರಿತು ಪ್ರಧಾನಿ ಕಚೇರಿಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಆದರೆ, ಅನೌಪಚಾರಿಕವಾಗಿ ಅವರು ಕಾರ್ಯಕ್ರಮಕ್ಕೆ ಹಾಜರಾಗುವುದು ಅನುಮಾನ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಖೇಲೋ ಇಂಡಿಯಾ ಗೇಮ್ಸ್​ ಸಿಇಒ ಅವಿನಾಶ್​ ಜೋಷಿ ತಿಳಿಸಿದ್ದಾರೆ.

ಇನ್ನು ಈ ಕಾರ್ಯಕ್ರಮಕ್ಕೆ ಹಾಜರಾದರೆ ದೊಡ್ಡ ಮಟ್ಟಿನ ಪ್ರತಿಭಟನೆ ನಡೆಸುವುದಾಗಿ ಅಖಿಲ ಅಸ್ಸಾಂ ವಿದ್ಯಾರ್ಥಿ ಸಂಘಟನೆ (ಎಎಎಸ್​ಯು) ಎಚ್ಚರಿಕೆ ನೀಡಿದೆ.

ಕಳೆದ ತಿಂಗಳು ಆಯೋಜಿಸಲಾಗಿದ್ದ ಜಪಾನ್​ ಪ್ರಧಾನಿ ಶಿಂಜೋ ಅಬೆ ಹಾಗೂ ಪ್ರಧಾನಿ ನರೇಂದ್ರ ಮೋದಿ ನಡುವೆ ಉಭಯರಾಷ್ಟ್ರಗಳ ಮಾತುಕತೆ ಕೂಡ ರದ್ದಾಗಿತ್ತು.

ಕಳೆದ ಎರಡು ವರ್ಷಗಳಿಂದ ಅಸ್ಸಾಂನಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ವಿರೋಧ ವ್ಯಕ್ತವಾಗುತ್ತಲೇ ಇದೆ. ಕಳೆದ ಡಿಸೆಂಬರ್​ನಲ್ಲಿ ಚಳಿಗಾಲದ ಅಧಿವೇಶನದಲ್ಲಿ ಈ ಕಾಯ್ದೆಯನ್ನು ಜಾರಿಗೆ ತಂದ ಬಳಿಕ ವಿರೋಧಗಳು ಹೆಚ್ಚಾಯಿತು. ಇದನ್ನು ವಿರೋಧಿಸಿ ಬೀದಿಗಳಿದ ಜನರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಇನ್ನು ಪ್ರತಿಭಟನೆ ನಿಯಂತ್ರಿಸಲು ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ನಾಲ್ವರು ಸಾವನ್ನಪ್ಪಿದರು.

ಇದನ್ನು ಓದಿ: ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನೆ ; ಭಾರತದ ಪ್ರವಾಸ ರದ್ದುಗೊಳಿಸಿದ ಜಪಾನ್​ ಪ್ರಧಾನಿ

ದೇಶದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕು ಎಂಬ ಉದ್ದೇಶದಿಂದ 2018ರಲ್ಲಿ ಖೇಲೋ ಇಂಡಿಯಾ ಗೇಮ್ಸ್​ ಅನ್ನು ಪ್ರತಿವರ್ಷ ಆಚರಿಸಲಾಗುತ್ತಿದೆ. ಈ ಬಾರಿ ಮೂರನೇ ಖೇಲೋ ಇಂಡಿಯಾ ಅಸ್ಸಾಂನಲ್ಲಿ ನಡೆಯುತ್ತಿದೆ.
First published:January 8, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ