ಕರುಣಾನಿಧಿ ಅಂತಿಮ ದರ್ಶನ ಪಡೆದ ಪ್ರಧಾನಿ ಮೋದಿ, ನಟ ರಜನಿಕಾಂತ್, ಕಮಲಹಾಸನ್ 

news18
Updated:August 8, 2018, 11:16 AM IST
ಕರುಣಾನಿಧಿ ಅಂತಿಮ ದರ್ಶನ ಪಡೆದ ಪ್ರಧಾನಿ ಮೋದಿ, ನಟ ರಜನಿಕಾಂತ್, ಕಮಲಹಾಸನ್ 
news18
Updated: August 8, 2018, 11:16 AM IST
ನ್ಯೂಸ್ 18 ಕನ್ನಡ

ಚೆನ್ನೈ (ಆ.8): ಮಾಜಿ ಸಿಎಂ ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ಇಲ್ಲಿನ ರಾಜಾಜಿ ಹಾಲ್ನಲ್ಲಿ ಇರಿಸಲಾಗಿದ್ದು, ಬೆಳಗ್ಗೆಯಿಂದ ರಾಜಕೀಯ ಹಾಗೂ ಸಿನಿಮಾ ಕ್ಷೇತ್ರದ ನಾಯಕರು ಆಗಮಿಸಿ, ಮೃತರ ಅಂತಿಮ ದರ್ಶನ ಪಡೆದರು.


ಬೆಳಗ್ಗೆ 11 ಗಂಟೆಗೆ ಚೆನ್ನೈಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಜಾಜಿ ಹಾಲ್ಗೆ ಆಗಮಿಸಿ ಅಂತಿಮ ದರ್ಶನ ಪಡೆದು, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಪ್ರಧಾನಿ ಆಗಮನಕ್ಕೂ ಮುನ್ನ, ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಹಾಗೂ ಅಳಿಯ ಧನುಷ್ ಸಮೇತ ಆಗಮಿಸಿ, ದರ್ಶನ ಪಡೆದರು. ನಟ ಕಮಲ ಹಾಸನ್, ನಟಿ ಬಿ.ಸರೋಜಾದೇವಿ, ಎಂ.ನಸ್ಸರ್, ಮುಖ್ಯಮಂತ್ರಿ ಇ.ಪಳನಿಸ್ವಾಮಿ ಅವರು ರಾಜಾಜಿ ಹಾಲ್ಗೆ ಆಗಮಿಸಿ, ಪಾರ್ಥಿವ ಶರೀರದ ದರ್ಶನ ಪಡೆದರು.


ಆಗಮಿಸಲಿರುವ ಗಣ್ಯರು:ಎಐಸಿಸಿ ಮುಖ್ಯಸ್ಥ ರಾಹುಲ್ ಗಾಂಧಿ, ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್, ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ದು, ಕರ್ನಾಟಕ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಕೇರಳ ಮಾಜಿ ಮುಖ್ಯಮಂತ್ರಿ ಉಮಾನ್ ಚಾಂಡಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಸೇರಿ ಹಲವು ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆಯಲಿದ್ದಾರೆ.
First published:August 8, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...