HOME » NEWS » National-international » PM NARENDRA MODI CALLS ALL DCS MEETING AT MAY 20TH FOR DISCUSS CORONA VACCINE DBDEL LG

PM Narendra Modi: ಮೇ 20ರಂದು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಿರುವ ಪ್ರಧಾನಿ ಮೋದಿ

ಸಭೆಯಲ್ಲಿ ಜಿಲ್ಲೆಗಳಲ್ಲಿ ಕೊರೋನಾದ ಪರಿಸ್ಥಿತಿಯ ಪರಿಶೀಲನೆ ಮಾಡಲಾಗುತ್ತದೆ. ಅಲ್ಲದೆ ಮೇ 1ರಿಂದ ಆರಂಭವಾಗಿರುವ ಮೂರನೇ ಹಂತದ ಕೊರೋನಾ ಲಸಿಕೆ ನೀಡುವ ಕಾರ್ಯಕ್ರಮ ಹೇಗೆ ನಡೆಯುತ್ತಿದೆ ಎಂಬುದರ ಬಗ್ಗೆ ಮತ್ತು ಇನ್ನಷ್ಟು ಹೆಚ್ಚಿಸುವ ಕುರಿತು ಚರ್ಚೆ ನಡೆಯಲಿದೆ.

news18-kannada
Updated:May 13, 2021, 3:54 PM IST
PM Narendra Modi: ಮೇ 20ರಂದು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ.
  • Share this:
ನವದೆಹಲಿ (ಮೇ 13): ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸಿದೆ.‌ ಪ್ರತಿ ದಿನ ಮೂರುವರೆ ಲಕ್ಷದಷ್ಟು ಜನ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದಾರೆ. ಪ್ರತಿ ದಿನ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಕೊರೋನಾದಿಂದ ಸಾಯುತ್ತಿದ್ದಾರೆ. ಇಷ್ಟಾದರೂ ಕೇಂದ್ರ ಸರ್ಕಾರ ರಾಜ್ಯಗಳಿಗೆ ಅಗತ್ಯ ಇರುವಷ್ಟು ಕೊರೋನಾ ಲಸಿಕೆ ಪೂರೈಕೆ ಮಾಡುತ್ತಿಲ್ಲ. ಇದರಿಂದ ಮೂರನೇ ಹಂತದ ಕೊರೋನಾ ಲಸಿಕೆ ಹಾಕುವ ಕಾರ್ಯಕ್ರಮ ವಿಫಲವಾಗಿದೆ. ಇನ್ನೊಂದೆಡೆ ಆಮ್ಲಜನಕದ ಸಮಸ್ಯೆ ಆಕಾಶದೆತ್ತರಕ್ಕೆ ಬೆಳೆದು ನಿಂತಿದೆ. ಈ ಎಲ್ಲಾ ಸಮಸ್ಯೆಗಳ ನಡುವೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇ 20ರಂದು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಮೇ 20 ರಂದು ಅತ್ಯಂತ ಹೆಚ್ಚು ಕೊರೋನಾ ಪ್ರಕರಣಗಳಿರುವ 10 ರಾಜ್ಯಗಳ 54 ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ನಂತರ ಉಳಿದ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ. ಮೊದಲ ಸುತ್ತಿನಲ್ಲಿ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಛತ್ತೀಸ್‌ಘಡ, ಪಾಂಡಿಚೆರಿ, ರಾಜಸ್ಥಾನ, ಮಹಾರಾಷ್ಟ್ರ, ಜಾರ್ಖಂಡ್, ಒರಿಸ್ಸಾ, ಕೇರಳ ಮತ್ತು ಹರಿಯಾಣ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಭೆಯಲ್ಲಿ ಜಿಲ್ಲೆಗಳಲ್ಲಿ ಕೊರೋನದ ಪರಿಸ್ಥಿತಿಯ ಪರಿಶೀಲನೆ ಮಾಡಲಾಗುತ್ತದೆ. ಅಲ್ಲದೆ ಮೇ 1ರಿಂದ ಆರಂಭವಾಗಿರುವ ಮೂರನೇ ಹಂತದ ಕೊರೋನಾ ಲಸಿಕೆ ನೀಡುವ ಕಾರ್ಯಕ್ರಮ ಹೇಗೆ ನಡೆಯುತ್ತಿದೆ ಎಂಬುದರ ಬಗ್ಗೆ ಮತ್ತು ಇನ್ನಷ್ಟು ಹೆಚ್ಚಿಸುವ ಕುರಿತು ಚರ್ಚೆ ನಡೆಯಲಿದೆ.

ಸರ್ಕಾರದ ಕೈಯಲ್ಲಿ ಉಚಿತವಾಗಿ ಲಸಿಕೆ ಕೊಡೋಕೆ ಆಗಲಿಲ್ಲ ಅಂದ್ರೆ, ನಾವೇ ವ್ಯವಸ್ಥೆ ಮಾಡ್ತೀವಿ; ಡಿ.ಕೆ.ಶಿವಕುಮಾರ್

ಬುಧವಾರ 3,62,727 ಪ್ರಕರಣಗಳು ಪತ್ತೆಯಾಗಿವೆ. ಡಿಸ್ಚಾರ್ಜ್ ಆದವರು 3,52,181 ಜನ. ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,37,03,665ಕ್ಕೆ ಏರಿಕೆ ಆಗಿದೆ.‌ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದೆ. ಬುಧವಾರ  4,120 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 2,58,317ಕ್ಕೆ ಏರಿಕೆ ಆಗಿದೆ.

ಎರಡನೇ ಅಲೆ ಕೊರೋನಾ ಶುರುವಾದ ಮೇಲೆ ಏಪ್ರಿಲ್ 4ರಂದು 1,03,558, ಏಪ್ರಿಲ್ 5ರಂದು 96,982, ಏಪ್ರಿಲ್ ‌6ರಂದು 1,15,736, ಏಪ್ರಿಲ್ 7ರಂದು 1,26,789, ಏಪ್ರಿಲ್ 8ರಂದು 1,31,968, ಏಪ್ರಿಲ್ 9ರಂದು 1,45,384, ಏಪ್ರಿಲ್ 10ರಂದು 1,52,879, ಏಪ್ರಿಲ್ 11ರಂದು 1,68,912, ಏಪ್ರಿಲ್ 12ರಂದು 1,61,736, ಏಪ್ರಿಲ್ 13ರಂದು 1,84,372, ಏಪ್ರಿಲ್ 14ರಂದು 2,00,739, ಏಪ್ರಿಲ್ 15ರಂದು 2,17,353, ಏಪ್ರಿಲ್ 16ರಂದು 2,34,692, ಏಪ್ರಿಲ್ 17ರಂದು 2,61,500 ಏಪ್ರಿಲ್ 18ರಂದು 2,73,810, ಏಪ್ರಿಲ್ 19ರಂದು 2,59,170, ಏಪ್ರಿಲ್ 20ರಂದು 2,95,041, ಏಪ್ರಿಲ್ 21ರಂದು 3,14,835, ಏಪ್ರಿಲ್ 22ರಂದು 3,32,730, ಏಪ್ರಿಲ್ 23ರಂದು 3,46,786, ಏಪ್ರಿಲ್ 24ರಂದು 3,49,691, ಏಪ್ರಿಲ್ 25ರಂದು 3,52,991, ಏಪ್ರಿಲ್ 26ರಂದು 3,23,144, ಏಪ್ರಿಲ್ 27ರಂದು 3,60,960, ಏಪ್ರಿಲ್ 28ರಂದು 3,23,144, ಏಪ್ರಿಲ್ 29ರಂದು 3,86,452, ಏಪ್ರಿಲ್ 30ರಂದು 4,01,993, ಮೇ 1ರಂದು 3,92,488, ಮೇ 2ರಂದು 3,68,147, ಮೇ 3ರಂದು 3,57,229, ಮೇ 4ರಂದು 3,82,315, ‌ಮೇ 5ರಂದು 4,12,262 ಪ್ರಕರಣಗಳು, ಮೇ 6ರಂದು 4,14,188, ಮೇ 7ರಂದು 4,01,078, ಮೇ 8ರಂದು 4,03,738, ಮೇ 9ರಂದು 3,66,161, ಮೇ 10ರಂದು 3,29,942 ಹಾಗೂ ಮೇ 11ರಂದು 3,48,421 ಪ್ರಕರಣಗಳು ಕಂಡುಬಂದಿದ್ದವು. ಮೇ 12ರಂದು 3,62,727 ಪ್ರಕರಣಗಳು ಪತ್ತೆಯಾಗಿವೆ.
Published by: Latha CG
First published: May 13, 2021, 3:53 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories