• Home
  • »
  • News
  • »
  • national-international
  • »
  • PM Narendra Modi: ಆ್ಯಂಬುಲೆನ್ಸ್​ಗೆ ದಾರಿಬಿಟ್ಟುಕೊಟ್ಟ ಪಿಎಂ ಮೋದಿ

PM Narendra Modi: ಆ್ಯಂಬುಲೆನ್ಸ್​ಗೆ ದಾರಿಬಿಟ್ಟುಕೊಟ್ಟ ಪಿಎಂ ಮೋದಿ

ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ

ಇಂದು ಮಧ್ಯಾಹ್ನ ಅಹಮದಾಬಾದ್‌ನ ದೂರದರ್ಶನ ಕೇಂದ್ರದ ಬಳಿ ಸಾರ್ವಜನಿಕ ರ್ಯಾಲಿ ಮುಗಿಸಿ ಗಾಂಧಿನಗರದ ರಾಜಭವನಕ್ಕೆ ಪ್ರಧಾನಿ ಮೋದಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

  • Share this:

ಅಹಮದಾಬಾದ್: ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಬೆಂಗಾವಲು ಪಡೆ (PM Modis Convoy) ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟಿದೆ. ಗುಜರಾತ್ ಬಿಜೆಪಿ ಮತ್ತು ನಂತರ ಸುದ್ದಿ ಸಂಸ್ಥೆ ANI ಹಂಚಿಕೊಂಡಿದ್ದು ಈ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಬೆಂಗಾವಲು ಪಡೆಯ ಭಾಗವಾಗಿದ್ದ ಎರಡು SUV ಗಳು ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ಅಹಮದಾಬಾದ್-ಗಾಂಧಿನಗರ ರಸ್ತೆಯಲ್ಲಿ ನಿಧಾನವಾಗಿ ಎಡಭಾಗಕ್ಕೆ ಚಲಿಸುತ್ತಿರುವುದನ್ನು ತೋರಿಸುತ್ತದೆ.


ಇಂದು ಮಧ್ಯಾಹ್ನ ಅಹಮದಾಬಾದ್‌ನ ದೂರದರ್ಶನ ಕೇಂದ್ರದ ಬಳಿ ಸಾರ್ವಜನಿಕ ರ್ಯಾಲಿ ಮುಗಿಸಿ ಗಾಂಧಿನಗರದ ರಾಜಭವನಕ್ಕೆ ಪ್ರಧಾನಿ ಮೋದಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.


ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ಪ್ರಧಾನಿ ಮೋದಿ
ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ಹೋಗುವ ಮಾರ್ಗದಲ್ಲಿ, ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ಪ್ರಧಾನಿ ಮೋದಿಯವರು ಸಂಚರಿಸುತ್ತಿದ್ದ ವಾಹನವನ್ನು ನಿಲ್ಲಿಸಲಾಯಿತು ಎಂದು ಗುಜರಾತ್ ಬಿಜೆಪಿ ಹೇಳಿಕೆಯಲ್ಲಿ ತಿಳಿಸಿದೆ.


ತಮ್ಮ ಗುಜರಾತ್ ಭೇಟಿಯ ಎರಡನೇ ದಿನದಂದು ಪ್ರಧಾನಿ ಮೋದಿ ಅವರು ಗಾಂಧಿನಗರ-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಫ್ಲ್ಯಾಗ್ ಆಫ್ ಮಾಡಿದರು ಮತ್ತು ಅಹಮದಾಬಾದ್ ಮೆಟ್ರೋ ರೈಲು ಯೋಜನೆಗೆ ಮೊದಲ ಹಂತದ ಚಾಲನೆ ನೀಡಿದರು.


ದೇಶದ 3ನೇ ವಂದೇ ಭಾರತ್‌ ಎಕ್ಸ್‌ಪ್ರೆಸ್‌ಗೆ ಚಾಲನೆ, ರೈಲಿನಲ್ಲಿ ಪ್ರಧಾನಿ ಪ್ರಯಾಣ!
ದೇಶದ ಮೂರನೇ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ (Vande Bharat Express train) ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಚಾಲನೆ ನೀಡಿದ್ದಾರೆ. ವಂದೇ ಭಾರತ್ ರೈಲು ಸರಣಿಯ ಮೂರನೇ ರೈಲು ಇದಾಗಿದೆ. ಮೊದಲ ರೈಲು ದೆಹಲಿ ಹಾಗೂ ವಾರಣಾಸಿ ಮಾರ್ಗದಲ್ಲಿ ಸಂಚರಿಸುತ್ತಿದೆ. ಇನ್ನು 2ನೇ ರೈಲು ದೆಹಲಿಯಿಂದ ಶ್ರೀ ಮಾತಾ ವೈಷ್ಣೋದೇವಿಗೆ ಸಂಪರ್ಕ ಕಲ್ಪಿಸುವ ಕಾತ್ರಾ ನಿಲ್ದಾಣದವರೆಗೆ ಸಂಚರಿಸುತ್ತಿದೆ. ಇದೀಗ ಮೂರನೇ ರೈಲಿಗೆ ಗುಜರಾತ್‌ನ  ಗಾಂಧಿನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ.


ಇದನ್ನೂ ಓದಿ:  Crime News: ಡಾಕ್ಟರ್​​ಗಳಿಂದ ಮಹಿಳೆ ಮೇಲೆ ರೇಪ್, ಪೊಲೀಸರಿಂದ ತೀವ್ರ ತನಿಖೆ


ಈ ರೈಲು ಗುಜರಾತ್‌ನ ಗಾಂಧಿನಗರದಿಂದ ಮುಂಬೈಗೆ ಸಂಚರಿಸುತ್ತದೆ. ಇಂದು ಬೆಳಗ್ಗೆ 10.30ಕ್ಕೆ ಪ್ರಧಾನಿ ಮೋದಿ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದರು. ಬಳಿಕ ಇದೇ ರೈಲಿನಲ್ಲಿ ಪ್ರಧಾನಿ ಮೋದಿ ಅವರು ಸಂಚಾರವನ್ನೂ ಮಾಡಿದರು. ಗಾಂಧಿನಗರದಿಂದ ಅಹಮದಾಬಾದ್‌ನ ಕಲುಪುರ ರೈಲ್ವೆ ನಿಲ್ದಾಣದವರೆಗೆ ಪ್ರಧಾನಿ ಮೋದಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಸಂಚರಿಸಿದರು.


ಇದನ್ನೂ ಓದಿ: Mallikarjun Kharge: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಖರ್ಗೆ ನಾಮಪತ್ರ, ಕನ್ನಡಿಗನ 'ಕೈ'ಗೆ ಸಿಗುತ್ತಾ ಅಧಿಕಾರ?


ಗುಜರಾತ್-ಮಹಾರಾಷ್ಟ್ರ ನಡುವೆ ಸಂಪರ್ಕ
ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್, ಬಹು ನಿರೀಕ್ಷಿತ ಹೊಸದಾಗಿ ನಿರ್ಮಿಸಲಾದ ಸೆಮಿ-ಹೈ ಸ್ಪೀಡ್ ರೈಲು, ಅಂತಿಮವಾಗಿ ವಾಣಿಜ್ಯ ಚಾಲನೆ ಶುರು ಮಾಡಿದೆ. ಇದು ಆರಾಮದಾಯಕ ಮತ್ತು ವರ್ಧಿತ ರೈಲು ಪ್ರಯಾಣದ ಅನುಭವದ ಹೊಸ ಯುಗಕ್ಕೆ ನಾಂದಿ ಹಾಡಿದೆ. ಈ ರೈಲು ಗಾಂಧಿನಗರ ಮತ್ತು ಮುಂಬೈ ನಡುವೆ ಸಂಚರಿಸಲಿದ್ದು, ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳ ರಾಜಧಾನಿಗಳನ್ನು ಸಂಪರ್ಕಿಸುತ್ತದೆ.

Published by:ಗುರುಗಣೇಶ ಡಬ್ಗುಳಿ
First published: