ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರ (PM Modi Mother Health Update) ಆರೋಗ್ಯ ಉಲ್ಬಣಗೊಂಡಿದೆ. ಹೀರಾಬೆನ್ ಮೋದಿ ಅವರನ್ನು (Heeraben Modi Health Update) ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚಿಗಷ್ಟೇ ಮುಕ್ತಾಯವಾಗಿದ್ದ ಗುಜರಾತ್ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ತಮ್ಮ ತಾಯಿ ಹೀರಾಬೆನ್ ಮೋದಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ಅಲ್ಲದೇ ಹೀರಾಬೆನ್ ಮೋದಿ ಅವರ ಪಾದಸ್ಪರ್ಶಿಸಿ ಆಶೀರ್ವಾದವನ್ನೂ ಪಡೆದುಕೊಂಡಿದ್ದರು.
ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಕಳೆದ ಜೂನ್ 18 ರಂದು, 100 ನೇ ವರ್ಷಕ್ಕೆ ಕಾಲಿಟ್ಟಿದ್ದರು ಹೀರಾಬೆನ್ ಅವರು ಜೂನ್ 18, 1923 ರಂದು ಜನಿಸಿದ್ದು ಶತಾಯುಶಿ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ.
ಮಗ ಪ್ರಧಾನಿಯಾದ್ರೂ ತಾಯಿಯ ಸರಳ ಜೀವನ
ಪ್ರಧಾನಿಯವರ ತಾಯಿಯಾಗಿದ್ದರೂ ಹೀರಾಬೆನ್ ಅವರು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುತ್ತಿದ್ದರು. ಅತ್ಯಂತ ಸರಳ ಜೀವನ ಮಾಡುತ್ತಾ ಇವರು ಭಾರತದ ಪ್ರಧಾನಿಯ ತಾಯಿಯೇ ಎಂಬ ಪ್ರಶ್ನೆ ಮೂಡುವಂತೆ ಬದುಕು ಸಾಗಿಸುತ್ತಿದ್ದರು.
ಇದನ್ನೂ ಓದಿ: Heeraben Modi Birthday: 100 ನೇ ವರ್ಷಕ್ಕೆ ಕಾಲಿಟ್ಟ ಪ್ರಧಾನಿ ಮೋದಿ ತಾಯಿ ಹೀರಾಬೆನ್; ಅಮ್ಮ-ಮಗನ ಸಂಬಂಧ ಹೀಗಿದೆ ನೋಡಿ!
ಕಿರಿಯ ಮಗನ ಜೊತೆ ವಾಸ
ಹೀರಾಬೆನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪಂಕಜ್ ಮೋದಿ ಅವರೊಂದಿಗೆ ಗಾಂಧಿನಗರ ನಗರದ ಹೊರವಲಯದಲ್ಲಿರುವ ರೈಸನ್ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ.
ಪ್ರಧಾನಿಯಾದ ನಂತರ ತಮ್ಮ ಮೊದಲ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಮೋದಿ, ಯಾವುದೇ ಭದ್ರತೆಯಿಲ್ಲದೇ 17 ಸೆಪ್ಟೆಂಬರ್ 17, 2014 ರಂದು ತಮ್ಮ ತಾಯಿಯನ್ನು ಭೇಟಿ ಮಾಡಲು ಗಾಂಧಿನಗರಕ್ಕೆ ಭೇಟಿ ನೀಡಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ