ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರು (PM Modi Mother) ಇಹಲೋಕ ತ್ಯಜಿಸಿದ್ದಾರೆ. ಶತಾಯುಶಿಯಾಗಿದ್ದ ಅವರನ್ನು (Heeraben Modi) ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ (Ahmedabad Hospital) ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಅಸುನೀಗಿದ್ದಾರೆ.
ಇತ್ತೀಚಿಗಷ್ಟೇ ಮುಕ್ತಾಯವಾಗಿದ್ದ ಗುಜರಾತ್ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ತಮ್ಮ ತಾಯಿ ಹೀರಾಬೆನ್ ಮೋದಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ಅಲ್ಲದೇ ಹೀರಾಬೆನ್ ಮೋದಿ ಅವರ ಪಾದಸ್ಪರ್ಶಿಸಿ ಆಶೀರ್ವಾದವನ್ನೂ ಪಡೆದುಕೊಂಡಿದ್ದರು.
ಇತ್ತ ಪ್ರಧಾನಿ ನರೇಂದ್ರ ಮೋದಿಯವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿಯವರ ಕಾರು ಮೈಸೂರು ಬಳಿ ಅಪಘಾತವಾಗಿದೆ. ಈ ಅವಘಡದಲ್ಲಿ ಪ್ರಹ್ಲಾದ್ ಮೋದಿ ಅವರ ಮಗ ಮತ್ತು ಸೊಸೆಗೆ ಗಾಯಗಳಾಗಿದೆ. ಸದ್ಯಕ್ಕೆ ಆಸ್ಪತ್ರೆಯಲ್ಲಿ ಇವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ
शानदार शताब्दी का ईश्वर चरणों में विराम... मां में मैंने हमेशा उस त्रिमूर्ति की अनुभूति की है, जिसमें एक तपस्वी की यात्रा, निष्काम कर्मयोगी का प्रतीक और मूल्यों के प्रति प्रतिबद्ध जीवन समाहित रहा है। pic.twitter.com/yE5xwRogJi
— Narendra Modi (@narendramodi) December 30, 2022
ತಾಯಿ ಪಾದ ತೊಳೆದು ಪೂಜೆ ಮಾಡಿದ್ದ ಮೋದಿ!
ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯ ತಿಳಿಸಿ, ಆಶೀರ್ವಾದ ಪಡೆದಿದ್ದರು. ತಾಯಿಯ ಪಾದ ತೊಳೆದು ಪೂಜಿಸಿದ್ದರು.
ಭಾವುಕರಾದ ಮೋದಿ!
ತಮ್ಮ ತಾಯಿ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, "ಭವ್ಯವಾದ ಶತಮಾನವು ದೇವರ ಪಾದದ ಮೇಲೆ ನಿಂತಿದೆ.. ತಾಯಿಯಲ್ಲಿ ನಾನು ಯಾವಾಗಲೂ ಆ ತ್ರಿಮೂರ್ತಿಗಳನ್ನು ಅನುಭವಿಸಿದ್ದೇನೆ, ಅದು ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿಯ ಸಂಕೇತ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನವನ್ನು ಒಳಗೊಂಡಿದೆ ಅಂತ ಬರೆದು ಪೋಸ್ಟ್ ಮಾಡಿದ್ದಾರೆ.
ನನ್ನ ತಾಯಿಯ 100 ನೇ ವರ್ಷದ ಹುಟ್ಟುಹಬ್ಬದಂದು ನಾನು ಅವರನ್ನು ಭೇಟಿಯಾದಾಗ, ಅವರು ಹೇಳಿದ್ದನ್ನು ಯಾವಾಗಲೂ ನೆನಪಿಸಿಕೊಳ್ಳುತ್ತಾರೆ, ಬುದ್ಧಿವಂತಿಕೆಯಿಂದ ಕೆಲಸ ಮಾಡಿ, ಪರಿಶುದ್ಧತೆಯಿಂದ ಜೀವನ ಮಾಡಿ, ಅಂದರೆ ಬುದ್ಧಿವಂತಿಕೆಯಿಂದ ಕೆಲಸ ಮಾಡಿ ಮತ್ತು ಜೀವನವನ್ನು ಪರಿಶುದ್ಧತೆಯಿಂದ ಬದುಕಿರಿ, ಎಂದು ಅವರು ಹೇಳಿದ್ದರು ಅಂತ ಪ್ರಧಾನಿ ಮೋದಿ ಸ್ಮರಿಸಿಕೊಂಡಿದ್ದಾರೆ.
ಪಂಕಜ್ ಮೋದಿ ಮನೆಯಿಂದ ಅಂತಿಮ ಯಾತ್ರೆ ನಡೆಯಲಿದೆ. ಇನ್ನೂ ಪ್ರಧಾನಿ ಮೋದಿ ಅಹಮದಾಬಾದ್ ಕಡೆ ಹೊರಟಿದ್ದಾರೆ. ಇಂದು ನಡೆಯಬೇಕಿದ್ದ ಕಾರ್ಯಕ್ರಮಗಳಲ್ಲಿ ಮೋದಿ ತಮ್ಮ ತಾಯಿಯ ಅಂತ್ಯಸಂಸ್ಕಾರ ನೆರವೇರಿಸಿ ಬಳಿಕ ವಿಡಿಯೋ ಕಾಲ್ ಮೂಲಕ ಭಾಗಿಯಾಗಲಿದ್ದಾರಂತೆ. ತನ್ನ ತಾಯಿಗೆ ಕೊಟ್ಟ ಮಾತಿನಂತೆ ಮೋದಿ ನಡೆದುಕೊಳ್ಳುತ್ತಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ