ಪ್ಲಾಸ್ಟಿಕ್​ ಉಪಯೋಗದಿಂದಾಗುವ ದುಷ್ಪರಿಣಾಮದ ಕುರಿತು ಅರಿವು ಮೂಡಿಸಲು ಪ್ರಧಾನಿ ನರೇಂದ್ರ ಮೋದಿ ಹೀಗಾ ಮಾಡೋದು?

2022ರ ವೇಳೆಗೆ ಮರು ಬಳಕೆ ಮಾಡಲಾಗದ ಪ್ಲಾಸ್ಟಿಕ್ ವಸ್ತುಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

MAshok Kumar | news18-kannada
Updated:September 11, 2019, 4:16 PM IST
ಪ್ಲಾಸ್ಟಿಕ್​ ಉಪಯೋಗದಿಂದಾಗುವ ದುಷ್ಪರಿಣಾಮದ ಕುರಿತು ಅರಿವು ಮೂಡಿಸಲು ಪ್ರಧಾನಿ ನರೇಂದ್ರ ಮೋದಿ ಹೀಗಾ ಮಾಡೋದು?
ಪೌರ ಕಾರ್ಮಿಕರ ಜೊತೆ ಪ್ಲಾಸ್ಟಿಕ್​ ತ್ಯಾಜ್ಯವನ್ನು ಬೇರ್ಪಡಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ.
MAshok Kumar | news18-kannada
Updated: September 11, 2019, 4:16 PM IST
ಉತ್ತರಪ್ರದೇಶ (ಸೆಪ್ಟೆಂಬರ್.11); ಇಲ್ಲಿನ ಮಥುರಾ ಎಂಬಲ್ಲಿ ಬುಧವಾರ ಆಯೋಜಿಸಲಾಗಿದ್ದ ‘ಸ್ವಚ್ಚ ಹೈ ಶಿವಾ’ ಎಂಬ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ, ಪೌರ ಕಾರ್ಮಿಕ ಮಹಿಳೆಯರ ಜೊತೆಗೆ ಕುಳಿತು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಬೇರ್ಪಡಿಸುವ ಮೂಲಕ ಮರು ಬಳಸಲಾಗದ ಪ್ಲಾಸ್ಟಿಕ್ ವಸ್ತುಗಳ ನಿಷೇಧದ ಕುರಿತು ಸಾಮಾನ್ಯ ಜನರಿಗೆ ಅರಿವು ಮೂಡಿಸುವ ಕೆಲಸಕ್ಕೆ ಮುಂದಾದರು.

ಈ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್​ನಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳನ್ನು ಜನರಿಗೆ ವಿವರಿಸಲಾಯಿತು. ಅಲ್ಲದೆ, ಕೆಲವೊಂದಿಷ್ಟು ಪೌರ ಕಾರ್ಮಿಕ ಮಹಿಳೆಯರು ಕೈಗೆ ಮತ್ತು ಮೂಗಿಗೆ ರಕ್ಷಣಾ ಕವಚವನ್ನು ಹಾಕಿಕೊಂಡು ಪ್ರಧಾನಿಗಳ ಪ್ರಶ್ನೆಗೆ ಉತ್ತರಿಸುತ್ತಾ, ಪ್ಲಾಸ್ಟಿಕ್ ತ್ಯಾಜ್ಯಗಳು ಎಲ್ಲಿ ಹೆಚ್ಚು ಉತ್ಪತ್ತಿಯಾಗುತ್ತವೆ? ಮತ್ತು ಇವನ್ನು ಬೇರ್ಪಡಿಸುವ ಬಗೆ ಹೇಗೆ? ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಮಹಿಳೆಯರ ಜೊತೆಗೆ ಕುಳಿತುಕೊಂಡು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಬೇರ್ಪಡಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಪ್ಲಾಸ್ಟಿಕ್ ಬಳಕೆಯಿಂದಾಗುವ ಅನಾನುಕೂಲಗಳು ಹಾಗೂ ನಿಷೇಧದಿಂದ ಆಗುವ ಉಪಯೋಗಗಳ ಕುರಿತು ಜನರಿಗೆ ಮಾಹಿತಿ ನೀಡಿದರು.

ಸೋಮವಾರ ನೋಯ್ಡಾದಲ್ಲಿ ವಿಶ್ವಸಂಸ್ಥೆ ಆಯೋಜಿಸಿದ್ದ ಹವಾಮಾನ ವೈಪರೀತ್ಯ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ್ದ ನರೇಂದ್ರ ಮೋದಿ, “ಭಾರತದ ನನ್ನ ನೇತೃತ್ವದ ಸರ್ಕಾರ ಮುಂಬರುವ ವರ್ಷಗಳಲ್ಲಿ ಮರು ಬಳಕೆ ಮಾಡಲು ಸಾಧ್ಯವಾಗದ ಪ್ಲಾಸ್ಟಿಕ್ ವಸ್ತುಗಳನ್ನು ಸಂಪೂರ್ಣವಾಗಿ ನಿಷೇಧಿಸಲಿದೆ. ಅಲ್ಲದೆ, ಪರಿಸರಕ್ಕೆ ಪೂರಕವಾಗುವ ರೀತಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ನಾಶಮಾಡುವ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗುತ್ತದೆ” ಎಂದು ಮಾಹಿತಿ ನೀಡಿದ್ದರು.

2022ರ ವೇಳೆಗೆ ಮರು ಬಳಕೆ ಮಾಡಲಾಗದ ಪ್ಲಾಸ್ಟಿಕ್ ವಸ್ತುಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ಪ್ಲಾಸ್ಟಿಕ್ ಬಳಕೆಗೆ ಇಡೀ ವಿಶ್ವ ವಿದಾಯ ಹೇಳಬೇಕು, ನೀರಿನ ಅಜೆಂಡಾ ಪಾಲಿಸಬೇಕು; ಪ್ರಧಾನಿ ನರೇಂದ್ರ ಮೋದಿ ಕರೆ

First published:September 11, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...