ಅಮೆರಿಕ ಚುನಾವಣೆ; ಜೋ ಬಿಡೆನ್, ಕಮಲಾ ಹ್ಯಾರೀಸ್​ಗೆ ಅಭಿನಂದನೆ ಕೋರಿದ​ ನರೇಂದ್ರ ಮೋದಿ, ರಾಹುಲ್ ಗಾಂಧಿ

ಅಮೆರಿಕದ 4ನೇ ಅಧ್ಯಕ್ಷರಾಗಿ ಡೆಮಾಕ್ರಟಿಕ್ ಪಕ್ಷದ ಜೋ ಬಿಡೆನ್ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು ಜೋ ಬಿಡೆನ್​ಗೆ ಟ್ವಿಟ್ಟರ್​ನಲ್ಲಿ ಅಭಿನಂದನೆ ತಿಳಿಸಿದ್ದಾರೆ.

ನರೇಂದ್ರ ಮೋದಿ, ಜೋ ಬಿಡೆನ್

ನರೇಂದ್ರ ಮೋದಿ, ಜೋ ಬಿಡೆನ್

 • Share this:
  ನವದೆಹಲಿ (ನ. 8): ಡೊನಾಲ್ಡ್​ ಟ್ರಂಪ್ ಅವರನ್ನು ಹಿಂದಿಕ್ಕಿ ಅಮೆರಿಕದ 4ನೇ ಅಧ್ಯಕ್ಷರಾಗಿ ಡೆಮಾಕ್ರಟಿಕ್ ಪಕ್ಷದ ಜೋ ಬಿಡೆನ್ ಆಯ್ಕೆಯಾಗಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಅಮೆರಿಕದ ಚುನಾವಣೆಯಲ್ಲಿ ಡೊನಾಲ್ಡ್​ ಟ್ರಂಪ್ ಎರಡನೇ ಬಾರಿ ಅಧಿಕಾರಕ್ಕೇರಲು ಕನಸು ಕಂಡಿದ್ದರು. ಆದರೆ, ಆ ಕನಸು ಭಗ್ನವಾಗಿದ್ದು, ಜೋ ಬಿಡೆನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು ಜೋ ಬಿಡೆನ್​ಗೆ ಟ್ವಿಟ್ಟರ್​ನಲ್ಲಿ ಅಭಿನಂದನೆ ತಿಳಿಸಿದ್ದಾರೆ.

  ಜೋ ಬಿಡೆನ್ ಅವರ ಅದ್ಭುತವಾದ ಗೆಲುವಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅಧ್ಯಕ್ಷರಾಗಿ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧವನ್ನು ಗಟ್ಟಿಗೊಳಿಸಲು ನಿಮ್ಮ ಸಹಕಾರ ಬೇಕಾಗಿದೆ. ಭಾರತ ಮತ್ತು ಅಮೆರಿಕದ ಸಂಬಂಧವನ್ನು ಇನ್ನಷ್ಟು ಬಿಗಿಗೊಳಿಸಲು ನಾವು ನಿಮ್ಮೊಂದಿಗೆ ಕೆಲಸ ಮಾಡಲು ಕಾತುರರಾಗಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.  ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಭಾರತ ಮೂಲದ ಕಮಲಾ ಹ್ಯಾರೀಸ್​ ಅವರಿಗೂ ಅಭಿನಂದನೆ ತಿಳಿಸಿರುವ ಪ್ರಧಾನಿ ಮೋದಿ, ನಿಮ್ಮ ಗೆಲುವು ಎಲ್ಲ ಭಾರತೀಯ ಅಮೆರಿಕನ್ನರಿಗೆ ಹೆಮ್ಮೆಯ ವಿಷಯವಾಗಿದೆ. ನಿಮ್ಮ ಪ್ರೋತ್ಸಾಹ, ನಾಯಕತ್ವದಿಂದ ಅಮೆರಿಕ ಮತ್ತು ಭಾರತದ ನಂಟು ಇನ್ನಷ್ಟು ಬಿಗಿಯಾಗಲಿದೆ ಎಂಬ ವಿಶ್ವಾಸ ನನಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.  ಭಾರತ ಮೂಲದ ಮಹಿಳೆಯೊಬ್ಬರು ಮೊದಲ ಬಾರಿಗೆ ಅಮೆರಿಕದ ಉಪಾಧ್ಯಕ್ಷರಾಗುತ್ತಿರುವುದು ನಮಗೆಲ್ಲರಿಗೂ ಹೆಮ್ಮೆ ತಂದಿದೆ. ನಿಮಗೆ ಅಭಿನಂದನೆಗಳು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಮಲಾ ಹ್ಯಾರೀಸ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.  ಇನ್ನು, ತಮ್ಮ ಅಮೋಘವಾದ ಗೆಲುವಿಗೆ ಕಾರಣವಾದ ಅಮೆರಿಕನ್ನರಿಗೆ ಜೋ ಬಿಡೆನ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ನನ್ನನ್ನು ಅಧ್ಯಕ್ಷನನ್ನಾಗಿ ಮಾಡಿದ ನಿಮಗೆ ನಾನು ಅಭಾರಿಯಾಗಿದ್ದೇನೆ. ಅಧ್ಯಕ್ಷನಾಗಿ ಆಯ್ಕೆಯಾಧ ನನ್ನ ಮೇಲೆ ಬೆಟ್ಟದಷ್ಟು ಜವಾಬ್ದಾರಿಗಳಿವೆ. ನಿಮ್ಮೆಲ್ಲರ ಸಹಕಾರದಿಂದ ನಾನು ಎಲ್ಲ ಸವಾಲುಗಳನ್ನೂ ನಿಭಾಯಿಸುತ್ತೇನೆ ಎಂಬ ಭರವಸೆಯಿದೆ ಎಂದು ಜೋ ಬಿಡೆನ್ ಟ್ವೀಟ್ ಮೂಲಕ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.
  Published by:Sushma Chakre
  First published: