ಸುಷ್ಮಾ ಸ್ವರಾಜ್ 68ನೇ ಜನ್ಮದಿನ: ‘ಆಕೆ ದೇಶಕ್ಕಾಗಿ ಪ್ರಾಣತೆತ್ತ ಮಹೋನ್ನತ ಮಂತ್ರಿ‘ ಎಂದ ಪ್ರಧಾನಿ ಮೋದಿ

ಸುಷ್ಮಾ ಸ್ವರಾಜ್ ಭಾರತೀಯ ರಾಜಕಾರಣಿ. ಭಾರತದ ಸರ್ವೋಚ್ಚ ನ್ಯಾಯಾಲಯದ ಮಾಜಿ ವಕೀಲೆ. ಇವರು ಸಂಸದೆಯಾಗಿ ಏಳು ಬಾರಿ ಮತ್ತು ವಿಧಾನ ಸಭಾ ಸದಸ್ಯೆಯಾಗಿ ಮೂರು ಬಾರಿ ಆಯ್ಕೆಯಾಗಿದ್ದಾರೆ. 1977ರಲ್ಲಿ ಉತ್ತರ ಭಾರತದ ಹರಿಯಾಣ ರಾಜ್ಯದ ಸಂಪುಟ ಸಚಿವೆಯಾದರು.

news18-kannada
Updated:February 14, 2020, 3:32 PM IST
ಸುಷ್ಮಾ ಸ್ವರಾಜ್ 68ನೇ ಜನ್ಮದಿನ: ‘ಆಕೆ ದೇಶಕ್ಕಾಗಿ ಪ್ರಾಣತೆತ್ತ ಮಹೋನ್ನತ ಮಂತ್ರಿ‘ ಎಂದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಜತೆ ಸುಷ್ಮಾ ಸ್ವರಾಜ್​​​​
  • Share this:
ನವದೆಹಲಿ(ಫೆ.14): ಮಾಜಿ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​ ಅವರಿಗೆ 68ನೇ ಜನ್ಮದಿನ. ಕಳೆದ ವರ್ಷ ಆಗಸ್ಟ್​​​​ 7ನೇ ತಾರೀಕಿನಂದು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದ ಬಿಜೆಪಿ ಕಟ್ಟಾಳು ಸುಷ್ಮಾರನ್ನು ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸ್ಮರಿಸಿದ್ದಾರೆ.

ಸುಷ್ಮಾ ಓರ್ವ ಅಸಾಧಾರಣ ಸಹೋದ್ಯೋಗಿ. ಬಹಳ ತಾಳ್ಮೆಯಿಂದ ತನ್ನ ಇಡೀ ಜೀವನವನ್ನೇ ಸಾರ್ವಜನಿಕ ಸೇವೆಗೆ ಮುಡಿಪಾಗಿರಿಸಿದ ಮಹೋನ್ನತ ಮಂತ್ರಿ. ಜೀವನದುದ್ದಕ್ಕೂ ಉತ್ತಮ ಮೌಲ್ಯ ಮತ್ತು ತತ್ವಗಳನ್ನು ಮೈಗೂಡಿಸಿಕೊಂಡಿದ್ದ ಸುಷ್ಮಾ ಭಾರತಕ್ಕೆ ಮತ್ತಷ್ಟು ಕೊಡುಗೆ ನೀಡಬೇಕೆಂಬ ಬಹುದೊಡ್ಡ ಕನಸುಗಳಿದ್ದವು ಎಂದು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದ್ದಾರೆ.


ಕಳೆದ ವರ್ಷ ಮಾಜಿ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​​​ ಅವರು, ಹೃದಯಾಘಾತದಿಂದ ಸಾವನ್ನಪ್ಪಿದ್ದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಕಟ್ಟಾಳು ಸುಷ್ಮಾ ಸ್ವರಾಜ್ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ನಮ್ಮನಗಲಿದರು. ಅಂದು ಬಿಜೆಪಿ ನಾಯಕರ ದಂಡೇ ಏಮ್ಸ್​​ ಆಸ್ಪತ್ರೆಯತ್ತ ತೆರಳಿತ್ತು. ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಜಕೀಯ ಗಣ್ಯರು ಸುಷ್ಮಾ ಸ್ವರಾಜ್​​ ಅವರ ಸಾವಿಗೆ ಸಂತಾಪ ಸೂಚಿದ್ದರು.

ಸುಷ್ಮಾ ಸ್ವರಾಜ್ ಭಾರತೀಯ ರಾಜಕಾರಣಿ. ಭಾರತದ ಸರ್ವೋಚ್ಚ ನ್ಯಾಯಾಲಯದ ಮಾಜಿ ವಕೀಲೆ. ಇವರು ಸಂಸದೆಯಾಗಿ ಏಳು ಬಾರಿ ಮತ್ತು ವಿಧಾನ ಸಭಾ ಸದಸ್ಯೆಯಾಗಿ ಮೂರು ಬಾರಿ ಆಯ್ಕೆಯಾಗಿದ್ದಾರೆ. 1977ರಲ್ಲಿ ಉತ್ತರ ಭಾರತದ ಹರಿಯಾಣ ರಾಜ್ಯದ ಸಂಪುಟ ಸಚಿವೆಯಾದರು.

ಇದನ್ನೂ ಓದಿ: ಉಮೇಶ್​ ಕತ್ತಿಗೂ ಸಚಿವ ಸ್ಥಾನ ಸಿಗಬೇಕು ಎಂಬುದೇ ನನ್ನ ಆಗ್ರಹ; ಸಚಿವ ರಮೇಶ್​ ಜಾರಕಿಹೊಳಿ

ಬಾಲ್ಯ ಮತ್ತು ಶಿಕ್ಷಣ: ಸುಷ್ಮಾ ಸ್ವರಾಜ್ ಅವರು 1959ರ ಫೆಬ್ರುವರಿ 14ರಂದು ಹರಿಯಾಣದ ಅಂಬಾಲಾ ಕ್ಯಾಂಟ್ನಲ್ಲಿ ಜನಿಸಿದರು. ಇವರ ತಂದೆ ಹಾರ್ದೇವ್ ಶರ್ಮಾ ಮತ್ತು ತಾಯಿ ಲಕ್ಷ್ಮಿ ದೇವಿ. ಅವರು ಅಂಬಾಲಾ ಕಂಟೋನ್ಮೆಂಟ್ನ ಸನಾತನ ಧರ್ಮ ಕಾಲೇಜಿನಲ್ಲಿ ಸಂಸ್ಕೃತ ಮತ್ತು ರಾಜ್ಯಶಾಸ್ತ್ರ ವಿಷಯಗಳಲ್ಲಿ ಪದವಿಯನ್ನು ಪಡೆದರು. ಅವರು ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಕಾನೂನು ಅಭ್ಯಾಸ ಮಾಡಿದರು. 1973ರಲ್ಲಿ ಭಾರತದ ಸುಪ್ರೀಂಕೋರ್ಟ್​​ನಲ್ಲಿ ವಕೀಲರಾಗಿ ಅಭ್ಯಾಸ ಆರಂಭಿಸಿದರು.

ರಾಜಕೀಯ ಜೀವನ: ಸುಷ್ಮಾ ಸ್ವರಾಜ್ ಅವರು ರಾಜಕೀಯ ವೃತ್ತಿಜೀವನವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್​​ನೊಂದಿಗೆ 1970ರಲ್ಲಿ ಆರಂಭಿಸಿದರು. ಅವರ ಪತಿ ಸ್ವರಾಜ್ ಕೌಶಲ್, ಸಮಾಜವಾದಿ ನಾಯಕ ಜಾರ್ಜ್ ಫರ್ನಾಂಡಿಸ್​​ನವರೊಂದಿಗೆ ನಿಕಟ ಸಂಬಂಧ ಹೊಂದಿದ್ದರು. ಸುಷ್ಮಾ ಸ್ವರಾಜ್ 1975ರಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಕಾನೂನು ರಕ್ಷಣಾ ತಂಡದ ಅಂಗವಾಗಿದ್ದರು. ಜಯಪ್ರಕಾಶ್ ನಾರಾಯಣರ ಒಟ್ಟು ಕ್ರಾಂತಿಯ ಚಳುವಳಿಯಲ್ಲಿ ಅವರು ಸಕ್ರಿಯವಾಗಿ ಪಾಲ್ಗೊಂಡರು. ತುರ್ತು ಪರಿಸ್ಥಿತಿಯ ನಂತರ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರಿದರು. ನಂತರ ಅವರು ಬಿಜೆಪಿಯ ರಾಷ್ಟ್ರೀಯ ನಾಯಕರಾದರು.

ಇನ್ನು 1977ರಿಂದ 1982ರವರೆಗೆ ಹರಿಯಾಣ ವಿಧಾನಸಭೆಯ ಸದಸ್ಯರಾಗಿದ್ದರು. 25ನೇ ವಯಸ್ಸಿನಲ್ಲಿ ಅಂಬಾಲಾ ಕಂಟೋನ್ಮೆಂಟ್ ಶಾಸನ ಸಭೆಗೆ ಅವಕಾಶ ಪಡೆದರು. 1977ರ ಜುಲೈನಲ್ಲಿ ಆಗಿನ ಮುಖ್ಯಮಂತ್ರಿ ದೇವಿ ಲಾಲ್ ಅವರ ನೇತೃತ್ವದಲ್ಲಿ ಜನತಾ ಪಕ್ಷದ ಸರಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಅವರು ಪ್ರಮಾಣವಚನ ಸ್ವೀಕರಿಸಿದರು. ಅವರು 1976ರಲ್ಲಿ ಹರಿಯಾಣ ರಾಜ್ಯದ ಜನತಾ ಪಕ್ಷದ ರಾಜ್ಯ ಅಧ್ಯಕ್ಷರಾದರು. ಅವರು 1987ರಿಂದ 1990ರ ಅವಧಿಯಲ್ಲಿ ಭಾರತೀಯ ಜನತಾ ಪಾರ್ಟಿ-ಲೋಕಸಭೆ ಒಕ್ಕೂಟದ ಸರಕಾರದಲ್ಲಿ ಹರಿಯಾಣದ ಶಿಕ್ಷಣ ಸಚಿವೆಯಾಗಿದ್ದರು.
First published: February 14, 2020, 3:28 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading