Farm Laws: ಪ್ರಧಾನಿ ಮೋದಿ ಮಹತ್ವದ ಘೋಷಣೆ: ಮೂರು ಕೃಷಿ ಕಾಯ್ದೆಗಳು ರದ್ದು

Farm Laws: ‘ನಿಜವಾದ ಮತ್ತು ಶುದ್ಧ ಹೃದಯದಿಂದ ನಾನು ಭಾರತಕ್ಕೆ ಕ್ಷಮೆಯಾಚಿಸುತ್ತೇನೆ. ರೈತರಿಗೆ ಕೃಷಿ ಕಾನೂನುಗಳ ಬಗ್ಗೆ ಮನವರಿಕೆ ಮಾಡಲು ನಮಗೆ ಸಾಧ್ಯವಾಗಲಿಲ್ಲ. ಹೀಗಾಗಿ ನಾವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ’ ಎಂದು ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿ

ಪ್ರಧಾನಿ ಮೋದಿ

  • Share this:
ಕಳೆದ ಒಂದು ವರ್ಷದಿಂದ ವ್ಯಾಪಕ ವಿರೋಧ, ಪ್ರತಿಭಟನೆಗೆ ವಿವಾದಾತ್ಮಕ ಮೂರು ಕೃಷ್ಟಿ ಕಾಯ್ದೆ(Farm Laws) ಕಾರಣವಾಗಿತ್ತು. ಇದೀಗ ಆ ಮೂರು ಕೃಷ್ಟಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದು ಗೊಳಿಸಿದೆ. ಇಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಮೋದಿ(Modi) ಅವರು ಈ ಮೂರು ಕಾಯ್ದೆಗಳನ್ನು ರದ್ದು(Cancel)ಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಗುರು ಪೂರಬ್(Guru Purab) ಅಂಗವಾಗಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಈ ಮಹತ್ವದ ಘೋಷಣೆ ಮಾಡಿದ್ದಾರೆ. ರೈತರು(Farmers) ತಮ್ಮ ಪ್ರತಿಭಟನೆ(Protest)ಯನ್ನು ವಾಪಾಸು ಪಡೆದು ತಮ್ಮ ಹೊಲಗಳಿಗೆ ಹಿಂತಿರುಗಿ ಕೃಷಿ ಚಟುವಟಿಕೆಯಲ್ಲಿ ತೊಡಗುವಂತೆ ಈ ವೇಳೆ ಮನವಿ ಮಾಡಿದ್ದಾರೆ. ಕೃಷಿ ಕಾನೂನುಗಳ ಬಗ್ಗೆ ರೈತರ ಒಂದು ವರ್ಗವನ್ನು ಮನವರಿಕೆ ಮಾಡಲು ಸರ್ಕಾರ ವಿಫಲವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.  ‘ನಿಜವಾದ ಮತ್ತು ಶುದ್ಧ ಹೃದಯದಿಂದ ನಾನು ಭಾರತಕ್ಕೆ ಕ್ಷಮೆಯಾಚಿಸುತ್ತೇನೆ’ ರೈತರಿಗೆ ಕೃಷಿ ಕಾನೂನುಗಳ ಬಗ್ಗೆ ಮನವರಿಕೆ ಮಾಡಲು ನಮಗೆ ಸಾಧ್ಯವಾಗಲಿಲ್ಲ. ಹೀಗಾಗಿ ನಾವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ. ಈ ತಿಂಗಳು ಪ್ರಾರಂಭವಾಗುವ ಸಂಸತ್ತಿನ ಅಧಿವೇಶನದಲ್ಲಿ ನಾವು ಎಲ್ಲಾ ವಿಧಿವಿಧಾನಗಳನ್ನು ಪೂರ್ಣಗೊಳಿಸುತ್ತೇವೆ" ಹೇಳಿದ್ದಾರೆ.3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್​

ರೈತರ ಹಿತ ದೃಷ್ಟಿಯಲ್ಲಿಟ್ಟುಕೊಂಡೇ ಕಾಯ್ದೆ ಜಾರಿ ಮಾಡಲಾಗಿತ್ತು. ಆದರೆ ಈ ಯೋಜನೆ ಜಾರಿಯಾಗುತ್ತಿದ್ದಂತೆ ಅನ್ನದಾತರು ಸಿಡಿದೆದ್ದರು.ದೇಶಾದ್ಯಂತ ಉಗ್ರ  ಪ್ರತಿಭಟನೆಗಳನ್ನು ನಡೆಸಿದರು. ದೆಹಲಿಯಲ್ಲಿ ಇಂದಿಗೂ ಈ ಕಾಯ್ದೆ ವಿರುದ್ಧ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಅದೆಷ್ಟೋ ಮಂದಿ ರೈತರು ಈ ಕಾಯ್ದೆ ವಿರುದ್ಧ  ಪ್ರತಿಭಟನೆ ನಡೆಸುವ ವೇಳೆ ಮೃತಪಟ್ಟಿದ್ದಾರೆ. ಕೇಂದ್ರ ಸರ್ಕಾರದ ಈ ತಿದ್ದುಪಡೆ ಕಾಯ್ದೆಗಳನ್ನು ರೈತರು ಒಪ್ಪಿರಲಿಲ್ಲ.  ‘ಯೋಜನೆ ಬಗ್ಗೆ ರೈತರಿಗೆ ತಿಳಿಸುವಲ್ಲಿ ಸಾಕಷ್ಟು ಯತ್ನಿಸಿದ್ದೇವೆ. ಆದರೆ ಕೆಲವು ರೈತರು ಕಾಯ್ದೆಯನ್ನು ಅವರ ಸಲಹೆ ಒಪ್ಪಿಕೊಂಡಿದ್ದರೂ ವಿರೋಧಿಸುತ್ತಿದ್ದಾರೆ. ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ’ ಎಂದು ಪ್ರಧಾನಿ ಘೋಷಿಸಿದ್ದಾರೆ. ಹೋರಾಟ ಮಾಡುತ್ತಿರುವ ರೈತರು ಮನೆಗೆ ತೆರಳಲು ಪ್ರಧಾನಿ ಮನವಿ ಮಾಡಿದ್ದಾರೆ.

ಇದನ್ನು ಓದಿ :  ಭಾರತದ ಯುದ್ಧತಂತ್ರ ವಿಚಾರಗಳಿಗೆ ಆಧ್ಯಾತ್ಮಿಕ ಮಾರ್ಗದರ್ಶಿ

ಒಂದು ವರ್ಷಗಳಿಂದ ಸತತ  ಪ್ರತಿಭಟನೆ

ಪಂಜಾಬ್‌ ರಾಜ್ಯಾದ್ಯಂತ ಪ್ರಧಾನಿ ಮೋದಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ನೂತನ ಕೃಷಿ ಕಾಯ್ದೆಗೆ ವ್ಯಾಪಕ ಪ್ರತಿಭಟನೆಗಳು ವ್ಯಕ್ತವಾಗಿದ್ದವು. ಕೇಂದ್ರ ಸರ್ಕಾರ ರೈತರ ಮನವೊಲಿಸಲು ಸಾಕಷ್ಟು ಪ್ರಯತ್ನಿಸಿತಾದರೂ ಅದರಲ್ಲಿ ಯಶಸ್ವಿಯಾಗಲಿಲ್ಲ. ದೇಶಾದ್ಯಂತ ಪ್ರತಿಭಟನೆಗಳು ನಡೆದವು. ಇದರ ಬೆನ್ನಲ್ಲೇ ಗುರು ಪೂರಬ್ ದಿನದಂದು ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ ಮಾಡಿದ್ದು, ಮೂರು ಕೃಷಿ ಕಾನೂನುಗಳನ್ನು ವಾಪಾಸ್ ಪಡೆಯಲು ತೀರ್ಮಾನಿಸಿದೆ. ಇದರೊಂದಿಗೆ ವರ್ಷಗಳ ರೈತರ ಹೋರಾಟಕ್ಕೆ ಗೆಲುವು ಸಿಕ್ಕಿದೆ.

ಇದನ್ನು ಓದಿ :  ಏಕ ರೂಪ ಕಾಯ್ದೆ ಜಾರಿಗೊಳಿಸಲು 60 ಅಂಶಗಳಿರುವ ಕ್ರಿಯಾ ಯೋಜನೆ ಸಿದ್ಧಪಡಿಸಿದ ಕೇಂದ್ರ ಸರ್ಕಾರ!

ಭಾವುಕರಾದ ಪ್ರಧಾನಿ ಮೋದಿ!

ಇನ್ನೂ ಇದೇ ಭಾಷಣದ ವೇಳೆ ಪ್ರಧಾನಿ ಮೋದಿ ಭಾವುಕರಾಗಿದ್ದಾರೆ. ನನ್ನ ಸರಕಾರ ರೈತರಿಗೆ ನೆರವಾಗಲು ಅವರನ್ನು ಸ್ವಾವಲಂಬಿಗಳನ್ನಾಗಿಸುವ ಅನೇಕ ನಿರ್ಧಾರಗಳಿಗೆ ಮುಂದಾಗಿದೆ. ಈ ಕಾಯ್ದೆಯನ್ನು ಅದೇ ಉದ್ದೇಶದಿಂದ ಜಾರಿಗೊಳಿಸಲು ನಿರ್ಧರಿಸಲಾಗಿತ್ತು. ಆದರೆ, ಅದನ್ನು ಕೆಲ ವರ್ಗದ ಜನರ ಅರ್ಥ ಮಾಡಿಕೊಳ್ಳಲು ವಿಫಲವಾಗಿ, ದಂಧೆ ಎಬ್ಬಿಸುತ್ತಿದ್ದಾರೆ.  ಕೇಂದ್ರ ಸರಕಾರ ಯಾವಗಲೂ ರೈತರಿಗಾಗಿ ಕೆಲಸ ಮಾಡುತ್ತಿದೆ. ನಾನು ರೈತರ ಸಮಸ್ಯೆತನ್ನು ಹತ್ತಿರದಿಂದ ಅರಿತಿದ್ದೆ’ ಎಂದು ಭಾವುಕರಾಗಿ ಮಾತನಾಡಿರು.
Published by:Vasudeva M
First published: