PM Narendra Modi: ಇಂದು ಸಂಜೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

ದೇಶದಲ್ಲಿ ಕಳೆದ 2 ತಿಂಗಳ ಅವಧಿಯಲ್ಲಿ ಇಂದು ಅತೀ ಕಡಿಮೆ ಕೊರೋನಾ ಕೇಸುಗಳು ದಾಖಲಾಗಿರುವೆ. ಕೇವಲ 1 ಲಕ್ಷ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಅಂತೆಯೇ ಸಾವಿನ ಸಂಖ್ಯೆ ಕೂಡ ಕಡಿಮೆಯಾಗಿದೆ. ಸದ್ಯ ದೇಶದಲ್ಲಿ 14 ಲಕ್ಷ ಸಕ್ರಿಯ ಪ್ರಕರಣಗಳಿವೆ.

ಪ್ರಧಾನಿ ಮೋದಿ

ಪ್ರಧಾನಿ ಮೋದಿ

 • Share this:
  ನವದೆಹಲಿ(ಜೂ.07): ಪ್ರಧಾನಿ ಮೋದಿ ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಬಗ್ಗೆ ಪ್ರಧಾನ ಮಂತ್ರಿ ಕಚೇರಿಯ(PMO) ಟ್ವಿಟರ್​​ ಖಾತೆಯಲ್ಲಿ ತಿಳಿಸಲಾಗಿದೆ ಪ್ರಸ್ತುತ ದೇಶದಲ್ಲಿನ ಕೊರೋನಾ ಪರಿಸ್ಥಿತಿ ಹಾಗೂ ಅನ್​ಲಾಕ್​ ಕುರಿತಾಗಿ ಮೋದಿ ಮಾತನಾಡಲಿದ್ದಾರೆ ಎನ್ನಲಾಗುತ್ತಿದೆ.

  ದೇಶದಲ್ಲಿ ಕಳೆದ 2 ತಿಂಗಳ ಅವಧಿಯಲ್ಲಿ ಇಂದು ಅತೀ ಕಡಿಮೆ ಕೊರೋನಾ ಕೇಸುಗಳು ದಾಖಲಾಗಿರುವೆ. ಕೇವಲ 1 ಲಕ್ಷ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಅಂತೆಯೇ ಸಾವಿನ ಸಂಖ್ಯೆ ಕೂಡ ಕಡಿಮೆಯಾಗಿದೆ. ಸದ್ಯ ದೇಶದಲ್ಲಿ 14,01,609 ಸಕ್ರಿಯ ಪ್ರಕರಣಗಳಿವೆ.

  ಇದನ್ನೂ ಓದಿ:Karnataka Politics: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ; ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ; ನಳಿನ್​ಕುಮಾರ ಕಟೀಲ್

  ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,00,636 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಕಳೆದ 61 ದಿನಗಳಲ್ಲೇ ಇಂದು ಅತೀ ಕಡಿಮೆ ಕೇಸ್​ಗಳು ದಾಖಲಾಗಿವೆ. ಆ ಮೂಲಕ ಒಟ್ಟು ಕೊರೋನಾ ಪ್ರಕರಣಗಳ ಸಂಖ್ಯೆ 2,89, 09, 975ಕ್ಕೆ ಏರಿದೆ. ನಿನ್ನೆ 2,427 ಮಂದಿ ಸಾವನ್ನಪ್ಪಿದ್ದು, ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 3,49,186ಕ್ಕೆ ಏರಿಕೆಯಾಗಿದೆ.

  ದೇಶೀಯ ಕೊರೋನಾ ಲಸಿಕೆ ಉತ್ಪಾದಿಸುವಂತೆ ಪ್ರಧಾನಿ ಮೋದಿ ಭಾನುವಾರ ದೇಶದ ವಿಜ್ಞಾನಿಗಳಿಗೆ ಕರೆ ನೀಡಿದರು. ಆ ಮೂಲಕ ಕೊರೋನಾ ವೈರಸ್​​ ವಿರುದ್ಧ ಹೋರಾಡುವ ಶಪಥ ಮಾಡಿದರು.

  ಕಳೆದ 10 ದಿನಗಳಿಂದ ನಿರಂತರವಾಗಿ ದೇಶದಲ್ಲಿ ಕೊರೋನಾ ಸೋಂಕು ಪೀಡಿತರಾಗುವವರ ಸಂಖ್ಯೆ ಎರಡು ಲಕ್ಷಕ್ಕಿಂತ ಕಡಿಮೆ ಆಗಿವೆ. ಕೊರೋನಾದಿಂದ ಸಾಯುವವರ ಸಂಖ್ಯೆ ಇಳಿಮುಖವಾಗಿದೆ. ಇನ್ನೊಂದೆಡೆ ಕೊರೋನಾದಿಂದ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆ ಚಿಗರುತ್ತಿದ್ದು, ಕಳೆದ 61 ದಿನಗಳ ಬಳಿಕ ದೇಶದಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ 15 ಲಕ್ಷಕ್ಕಿಂತ ಕಡಿಮೆಯಾಗಿದೆ.

  ಇದನ್ನೂ ಓದಿ:ಹೊಸ Income Tax E-Filing Portal‌ಗೆ ಇಂದು ಚಾಲನೆ; ಟ್ಯಾಕ್ಸ್​​ ಕಟ್ಟೋರಿಗೆ ಏನೆಲ್ಲಾ ಲಾಭ?

  ದೇಶದಲ್ಲಿ 61 ದಿನಗಳ ಬಳಿಕ 14,01,609 ಸಕ್ರಿಯ ಪ್ರಕರಣಗಳಿವೆ. ಶೇಕಡಾವಾರು ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ. 40ಕ್ಕೆ ಇಳಿದಿದೆ. ಮೇ 8ರಂದು 37.8 ಲಕ್ಷ ಸಕ್ರಿಯ ಪ್ರಕರಣಗಳಿದ್ದವು. ಸದ್ಯ ದೇಶದಲ್ಲಿ ಇರುವ ಸಕ್ರಿಯ ಪ್ರಕರಣಗಳ ಸಂಖ್ಯೆ 14,01,609 ಮಾತ್ರ.

  ಮೇ ತಿಂಗಳ ಮಧ್ಯ ಭಾಗದಲ್ಲಿ ಕೊರೋನ ಎರಡನೇ ಅಲೆ ತಾರಕಕ್ಕೇ ಏರುತ್ತದೆ. ತಿಂಗಳ ಕೊನೆಯಲ್ಲಿ ಕಡಿಮೆ ಆಗುತ್ತದೆ ಎಂಬ ತಜ್ಞರು ಅಭಿಪ್ರಾಯ ಪಟ್ಟಿದ್ದರು. ಅದೇ ರೀತಿ ಮೇ 6ರಂದು 4,14,188 ಪ್ರಕರಣಗಳು ಕಂಡುಬಂದಿದ್ದು ದೇಶದಲ್ಲಿ ದಿನ ಒಂದರಲ್ಲಿ ದಾಖಲಾದ ಅತಿ ಹೆಚ್ಚು ಪ್ರಕರಣಗಳಾಗಿದ್ದವು. ನಂತರ ಕೆಳಮುಖವಾಗಿ ಸಾಗಿ ಮೇ 16ರಂದು ಮೊದಲ ಬಾರಿಗೆ ಮೂರು ಲಕ್ಷಕ್ಕೂ ಕಡಿಮೆ ಪ್ರಕರಣಗಳು (2,81,386) ಕಂಡು ಬಂದಿದ್ದವು.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
  Published by:Latha CG
  First published: