LIVE NOW

LIVE Narendra Modis Swearing-In Ceremony: ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ; ಮೊದಲ ಬಾರಿ ಸಂಪುಟ ಸೇರಿದ ಅಮಿತ್​ ಶಾ

Narendra Modis swearing-in ceremony Live Updates: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೂತನ ಸರ್ಕಾರದ ನೂತನ ಪ್ರಧಾನಿಗಳಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಜತೆಗೆ ಮೋದಿಯವರ ಬಲಗೈ ಬಂಟ ಅಮಿತ್​ ಶಾ, ರಾಜನಾಥ್​ ಸಿಂಗ್​, ನಿರ್ಮಲಾ ಸೀತಾರಾಮನ್​, ಸದಾನಂದ ಗೌಡ ಸೇರಿದಂತೆ ಒಟ್ಟೂ 57 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.

Kannada.news18.com | May 30, 2019, 9:51 PM IST
facebook Twitter Linkedin
Last Updated May 30, 2019
auto-refresh
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಎನ್​ಡಿಎ ನಾಯಕ ನರೇಂದ್ರ ಮೋದಿ ಅವರು ಸತತ ಎರಡನೇ ಬಾರಿ ಪ್ರಧಾನಿಯಾಗಿ ಇಂದು ಪದಗ್ರಹಣ ಮಾಡಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೂತನ ಪ್ರಧಾನಿಗಳಿಗೆ ಪ್ರಮಾಣ ವಚನವನ್ನು ಬೋಧಿಸಿದರು. ಇದೇ ವೇಳೆ, ಸಚಿವ ಸಂಪುಟದ ಕೆಲ ಸದಸ್ಯರೂ ಪ್ರಮಾಣ ವಚನ ಸ್ವೀಕರಿಸಿದರು. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಅಮಿತ್​ ಶಾ ಸಂಪುಟ ಸೇರ್ಪಡೆಗೂ ಉತ್ತರ ಸಿಕ್ಕಿದ್ದು ಅವರೂ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ ಪದಗ್ರಹಣ ಸಮಾರಂಭದಲ್ಲಿ ಸಾಕಷ್ಟು ಗಣ್ಯರು ಪಾಲ್ಗೊಂಡಿದ್ದಾರೆ. ಈ ಕುರಿತ ಕ್ಷಣ-ಕ್ಷಣದ ಮಾಹಿತಿಯನ್ನು ನಿಮ್ಮ ನ್ಯೂಸ್​ 18 ಕನ್ನಡದಲ್ಲಿ ಪಡೆಯಿರಿ..... Read More
9:51 pm (IST)

ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಪ್ರಧಾನಿ ಮೋದಿಗೆ ಅಭಿನಂದನೆ

 


Load More