ಇಂದು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಸಮಾವೇಶ: ಪ್ರಧಾನಿ ನರೇಂದ್ರ ಮೋದಿ ಭಾಷಣ

ಸಮಾವೇಶದಲ್ಲಿ ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿಯ ಪ್ರಯೋಜನೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಜನತೆಗೆ ತಿಳಿಸಲಿದ್ದಾರೆ. ಜತೆಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತಾದ ಸಮಗ್ರ ಮುನ್ನೋಟವನ್ನು ಬಿಚ್ಚಿಡಲಿದ್ದಾರೆ.

ನರೇಂದ್ರ ಮೋದಿ ಭಾಷಣ

ನರೇಂದ್ರ ಮೋದಿ ಭಾಷಣ

  • Share this:
    ನವದೆಹಲಿ(ಜು.07): ಇಂದು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಸಮಾವೇಶ ನಡೆಯಲಿದೆ. ಈ ಸಮಾವೇಶವನ್ನು ಉದ್ಘಾಟಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಈ ವಿಚಾರವನ್ನು ಖುದ್ದು ನರೇಂದ್ರ ಮೋದಿಯವರೇ ಟ್ವೀಟ್​ ಮಾಡುವ ಮೂಲಕ ಸ್ಪಷ್ಟಪಡಿಸಿದ್ಧಾರೆ.

    ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಸುಧಾರಣೆ ಕುರಿತಾದ ಸಮಾವೇಶ ಇದಾಗಿದೆ. ಸಮಾವೇಶದಲ್ಲಿ ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿಯ ಪ್ರಯೋಜನೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಜನತೆಗೆ ತಿಳಿಸಲಿದ್ದಾರೆ. ಜತೆಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತಾದ ಸಮಗ್ರ ಮುನ್ನೋಟವನ್ನು ಬಿಚ್ಚಿಡಲಿದ್ದಾರೆ.

    ಇನ್ನು, ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಮತ್ತು ವಿಶ್ವವಿದ್ಯಾಲಯ ಸಹಯೋಗದಲ್ಲಿ ಈ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದಲ್ಲಿ ಸಮಗ್ರ ಹಾಗೂ ಭವಿಷ್ಯದ ಶಿಕ್ಷಣ ಬಗ್ಗೆ ಚರ್ಚೆಯಾಗಲಿದೆ. ಹಾಗೆಯೇ ಗುಣಮಟ್ಟದ ಸಂಶೋಧನೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನದ ಅಳವಡಿಕೆ ಕುರಿತು ಮಹತ್ವದ ಚರ್ಚೆ ನಡೆಯಲಿದೆ.

    ಇದನ್ನೂ ಓದಿ: ಮಾನವ ಸಂಪನ್ಮೂಲ ಸಚಿವಾಲಯವನ್ನು ಶಿಕ್ಷಣ ಇಲಾಖೆಯಾಗಿ ಮರುನಾಮಕರಣಕ್ಕೆ ಕೇಂದ್ರ ಸಂಪುಟ ಒಪ್ಪಿಗೆ

    ಇತ್ತೀಚೆಗೆ ಜಾರಿಯಾದ ಹೊಸ ಶಿಕ್ಷಣ ನೀತಿಯಲ್ಲಿ ಮಕ್ಕಳ ಶೈಕ್ಷಣಿಕ ಹೊರೆಯನ್ನು ಕಡಿಮೆಗೊಳಿಸುವುದು, ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆಯ ವ್ಯಾಪ್ತಿಯನ್ನು ವಿಸ್ತರಿಸುವುದು, ಪಠ್ಯಕ್ರಮದಲ್ಲಿ ಪ್ರಮುಖ ಬದಲಾವಣೆ ಸೇರಿದಂತೆ ಹಲವು ಹೊಸ ನೀತಿಗಳನ್ನು ಇದರಲ್ಲಿ ಪ್ರಸ್ತಾಪಿಸಲಾಗಿದೆ.
    Published by:Ganesh Nachikethu
    First published: