ನಾಳೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಸಮಾವೇಶ: ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಸುಧಾರಣೆ ಕುರಿತಾದ ಸಮಾವೇಶ ಇದಾಗಿದೆ. ಈ ಸಮಾವೇಶವನ್ನುದ್ದೇಶಿಸಿ ಮಾತಾಡುವ ವೇಳೆ ಪ್ರಧಾನಿ ಮೋದಿ ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿಯ ಪ್ರಯೋಜನೆಗಳ ಕುರಿತು ಜನತೆಗೆ ತಿಳಿಸಲಿದ್ದಾರೆ.
ನವದೆಹಲಿ(ಜು.06): ನಾಳೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ನಡೆಯಲಿರುವ ಸಮಾವೇಶವನ್ನು ಉದ್ಘಾಟಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಈ ವಿಚಾರವನ್ನು ಖುದ್ದು ನರೇಂದ್ರ ಮೋದಿಯವರೇ ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ಧಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಸುಧಾರಣೆ ಕುರಿತಾದ ಸಮಾವೇಶ ಇದಾಗಿದೆ. ಈ ಸಮಾವೇಶವನ್ನುದ್ದೇಶಿಸಿ ಮಾತಾಡುವ ವೇಳೆ ಪ್ರಧಾನಿ ಮೋದಿ ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿಯ ಪ್ರಯೋಜನೆಗಳ ಕುರಿತು ಜನತೆಗೆ ತಿಳಿಸಲಿದ್ದಾರೆ. ಜತೆಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತಾದ ಸಮಗ್ರ ಮುನ್ನೋಟವನ್ನು ಬಿಚ್ಚಿಡಲಿದ್ದಾರೆ.
ಇನ್ನು, ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಮತ್ತು ವಿಶ್ವವಿದ್ಯಾಲಯ ಸಹಯೋಗದಲ್ಲಿ ಈ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದಲ್ಲಿ ಸಮಗ್ರ ಹಾಗೂ ಭವಿಷ್ಯದ ಶಿಕ್ಷಣ ಬಗ್ಗೆ ಚರ್ಚೆಯಾಗಲಿದೆ. ಹಾಗೆಯೇ ಗುಣಮಟ್ಟದ ಸಂಶೋಧನೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನದ ಅಳವಡಿಕೆ ಕುರಿತು ಮಹತ್ವದ ಚರ್ಚೆ ನಡೆಯಲಿದೆ.