PM Narendra Modi: 2024ರಲ್ಲೂ ನರೇಂದ್ರ ಮೋದಿಯೇ ಪ್ರಧಾನಿ ಅಭ್ಯರ್ಥಿ; ಅಮಿತ್ ಶಾ ಘೋಷಣೆ

Lok Sabha Election 2024: ಮುಂದಿನ ಲೋಕಸಭೆ ಮತ್ತು 2025ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಯು ಒಟ್ಟಾಗಿ ಹೋರಾಡಲಿದೆ. ಈ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ

 • Share this:
  2024ರ  ಲೋಕಸಭಾ ಚುನಾವಣೆಯಲ್ಲೂ ನರೇಂದ್ರ ಮೋದಿ (PM Narendra Modi) ಅವರೇ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿಯಾಗಲಿದ್ದಾರೆ. ಅಲ್ಲದೇ ಬಿಜೆಪಿ-ಜೆಡಿಯು 2024 ರಲ್ಲಿ ಒಟ್ಟಿಗೆ ಚುನಾವಣೆ ಎದುರಿಸಲಿದೆ  ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಘೋಷಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಭಾನುವಾರ ಪಾಟ್ನಾದಲ್ಲಿ ಬಿಜೆಪಿಯ ವಿವಿಧ ಮೋರ್ಚಾಗಳ ಎರಡು ದಿನಗಳ ಜಂಟಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪಾಟ್ನಾದಲ್ಲಿ ನಡೆದ ಬಿಜೆಪಿಯ ಯುನೈಟೆಡ್ ಫ್ರಂಟ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡುವಾಗ, ಬಿಹಾರದಲ್ಲಿ ಜನತಾ ದಳ ಯುನೈಟೆಡ್ ಅಥವಾ ಜೆಡಿಯು (JDU) ಜೊತೆಗಿನ ಪಕ್ಷದ ಮೈತ್ರಿ ಬಗ್ಗೆಯೂ ಚರ್ಚಿಸಲಾಗಿದೆ.

  ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮಾತನಾಡಿ, 2024ರ ಲೋಕಸಭೆ ಮತ್ತು 2025ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಯು ಒಟ್ಟಾಗಿ ಹೋರಾಡಲಿದೆ. ಈ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

  amit shah says narendra modi tolerates gujarat riots allegations for 19 years
  ಅಮಿತ್ ಶಾ ಮತ್ತು ನರೇಂದ್ರ ಮೋದಿ (ಸಂಗ್ರಹ ಚಿತ್ರ)


  ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ
  2024ರ ಚುನಾವಣೆಯು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿದ್ದು, ನರೇಂದ್ರ ಮೋದಿ ಅವರೇ ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿದ್ದಾರೆ. 2024ರಲ್ಲಿ ಹಾಗೂ 2025ರಲ್ಲಿ ಬಿಹಾರದಲ್ಲಿ ಒಟ್ಟಾಗಿ ಚುನಾವಣೆ ಎದುರಿಸಲು ನಿರ್ಧರಿಸಿದ್ದೇವೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಭರವಸೆ ವ್ಯಕ್ತಪಡಿಸಿದ್ದಾರೆ.

  ಜಮ್ಮು ಮತ್ತು ಕಾಶ್ಮೀರದ ಮಹಿಳೆಯರು ತಯಾರಿಸಿದ ರಾಷ್ಟ್ರಧ್ವಜ ವಿತರಣೆ
  ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಮಹಿಳೆಯರು ತಯಾರಿಸಿದ ರಾಷ್ಟ್ರಧ್ವಜವನ್ನು ಎಲ್ಲ ಸದಸ್ಯರಿಗೆ ವಿತರಿಸಲಾಯಿತು. ಈ ಮೂಲಕ ಆರ್ಟಿಕಲ್ 370 ರದ್ದಾದ ನಂತರ ಜಮ್ಮು ಮತ್ತು ಕಾಶ್ಮೀರದ ಜನರ ಆಲೋಚನೆ ಬದಲಾಗುತ್ತಿದೆ ಎಂಬ ಸಂದೇಶವನ್ನು ರವಾನಿಸುವ ಪ್ರಯತ್ನ ಮಾಡಲಾಗಿದೆ.

  ಇದನ್ನೂ ಓದಿ: LPG Price: ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಕೆ! ಆದರೆ ನಿಮಗೂ ಈ ಲಾಭವಾಗಲಿದೆಯೇ?

  ಗೃಹ ಸಚಿವ ಅಮಿತ್ ಶಾ ಈ ಘೋಷಣೆಯ ಮೂಲಕ ಬಿಜೆಪಿಯ ಮುಂದಿನ ಪ್ರಧಾನಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆಹಾಡಿದರು.

  ಕರ್ನಾಟಕವನ್ನು ಹೊಗಳಿದ ಪ್ರಧಾನಿ ನರೇಂದ್ರ ಮೋದಿ
  ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಜನಪ್ರಿಯ ಕಾರ್ಯಕ್ರಮಗಳಲ್ಲಿ ಮನ್ ಕೀ ಬಾತ್ (Mann Ki Baat) ಕಾರ್ಯಕ್ರಮ ಸಹ ಒಂದು. ಪ್ರತಿ ತಿಂಗಳ ಕೊನೆಯ ಭಾನುವಾರ ನಡೆಯುವ ಈ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿಯವರು ದೇಶದ ಜನರನ್ನು ಉದ್ದೇಶಿಸಿ ಮಾತನಾಡುತ್ತಾರೆ. ಈಗಾಗಲೇ 90 ಆವೃತ್ತಿಗಳನ್ನು ಯಶ್ವಸಿಯಾಗಿ ಪೂರೈಸಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ. 91 ನೇ ಮನ್ ಕೀ ಬಾತ್ ಕಾರ್ಯಕ್ರಮ ಇಂದು ನಡೆದಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ಬಾರಿ ಕರ್ನಾಟಕ (Karnataka)ದ 'ಅಮೃತ ಭಾರತಿಗೆ ಕನ್ನಡಾರತಿ' ಅಭಿಯಾನದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕರ್ನಾಟಕದ ಉತ್ತರ ಕನ್ನಡ (Utter Kannada) ಜಿಲ್ಲೆಯ ಶಿರಸಿ ತಾಲ್ಲೂಕಿನ ರೈತ ಮಧುಕೇಶ್ವರ ಹೆಗಡೆ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

  ಇದನ್ನೂ ಓದಿ: Mann Ki Baat: ಮನ್ ಕೀ ಬಾತ್‍ನಲ್ಲಿ ಕರ್ನಾಟಕವನ್ನು ಹೊಗಳಿದ ಪ್ರಧಾನಿ ಮೋದಿ

  ಅಮೃತ ಭಾರತಿಗೆ ಕನ್ನಡಾರತಿ
  ಪ್ರಧಾನಿಯವರು ಮನ್ ಕೀ ಬಾತ್ ನಲ್ಲಿ ಈ ಬಾರಿಯ ಸ್ವಾತಂತ್ರ್ಯ ಮಹೋತ್ಸವದ ಕುರಿತಾದ ಕರ್ನಾಟಕದ "ಅಮೃತ ಭಾರತಿಗೆ ಕನ್ನಡಾರತಿ" ಅಭಿಯಾನದ ಬಗ್ಗೆ ಮತ್ತು ಯಾವ ರೀತಿ ಕರ್ನಾಟಕದಲ್ಲಿ ಈ ಅಭಿಯಾನ ನಡೆಯುತ್ತಿದೆ ಎಂಬುದನ್ನು ಹೇಳಿದರು.ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕನ್ನಡ ಸಂಸ್ಕ್ರತಿ ಇಲಾಖೆ ಅಮೃತ ಭಾರತಿಗೆ ಕನ್ನಡಾರತಿ ಅಭಿಯಾನ ಆಯೋಜಿದೆ.
  Published by:guruganesh bhat
  First published: