ದೆಹಲಿ ವಿಧಾನಸಭಾ ಚುನಾವಣೆ: ಇಂದಿನಿಂದ ಪ್ರಧಾನಿ ಮೋದಿ ಬಿಜೆಪಿ ಪರ ಮತಬೇಟೆ

ಹೌದು, ಇಂದು ಮತ್ತು ನಾಳೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಮಾಡಲಿದ್ಧಾರೆ. ಇಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ನಂತರ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ

  • Share this:
    ನವದೆಹಲಿ(ಫೆ.03): ರಾಷ್ಟ್ರೀಯ ನಾಗರಿಕ ನೋಂದಣಿ ಮತ್ತು ಪೌರತ್ವ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಸಿಎಎ ಮತ್ತು ಎನ್​​ಆರ್​ಸಿ ಪರ-ವಿರೋಧದ ಚರ್ಚೆ ನಡುವೆಯೇ ಈಗ ದೆಹಲಿ ವಿಧಾನಸಭೆ ಚುನಾವಣೆ ನಿಗದಿಯಾಗಿದೆ. ಈಗಾಗಲೇ ಮುಖ್ಯಮಂತ್ರಿ ಅರವಿಂದ್​​ ಕೇಜ್ರಿವಾಲ್​​​​​ ನೇತೃತ್ವದ ಆಪ್​​ ಮತ್ತು ಕಾಂಗ್ರೆಸ್​ ಸೇರಿದಂತೆ ಬಿಜೆಪಿಯೂ ಬಿರುಸಿನ ಪ್ರಚಾರ ಕಾರ್ಯ ಕೈಗೊಂಡಿದೆ. ಈ ಮಧ್ಯೆಯೇ ಪ್ರಧಾನಿ ಮೋದಿ ಬಿಜೆಪಿ ಪರ ಮತಯಾಚನೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.

    ಹೌದು, ಇಂದು ಮತ್ತು ನಾಳೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಮಾಡಲಿದ್ಧಾರೆ. ಇಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ನಂತರ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡಲಿದ್ದಾರೆ.

    ಇನ್ನು, ಫೆ.3ರಂದು ಮಧ್ಯಾಹ್ನ 2.30 ರ ವೇಳೆಗೆ ಕರ್ಕೊಡೂಮಾದ ಸಿಬಿಡಿ ಮೈದಾನದಲ್ಲಿ ಚುಣಾವಣಾ ಪ್ರಚಾರದ ಭಾಗವಾಗಿ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ. ನಂತರ ಮುಂದಿನ ಸಭೆ ಫೆ.4ರಂದು ದ್ವಾರಕದ ರಾಮ್ ಲೀಲಾ ಮೈದಾನದಲ್ಲಿ ನಡೆಯಲಿದೆ.

    ಇದನ್ನೂ ಓದಿ: ಸೋನಿಯಾ ಗಾಂಧಿ ಅನಾರೋಗ್ಯ: ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲು

    ದೆಹಲಿಯ ಆರನೇ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗಿದೆ. ಫೆಬ್ರವರಿ 8ರಂದು ಏಕ ಹಂತದಲ್ಲಿ ಚುನಾವಣೆ ನಡೆಯಲಿದೆ. ಫೆ. 11ರಂದು ಮತ ಎಣಿಕೆ ಆಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ತಿಳಿಸಿದ್ದಾರೆ. ಈ ಮಧ್ಯೆ ಇಲ್ಲಿನ ವಿಧಾನಸಭೆ ಚುನಾವಣೆ ಗೆಲ್ಲಲು ಮುಖ್ಯಮಂತ್ರಿ ಅರವಿಂದ್​​​ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ಮತ್ತು ಕಾಂಗ್ರೆಸ್​​​ ಕಸರತ್ತು ನಡೆಸುತ್ತಿದೆ.

    ಇಲ್ಲಿನ ವಿಧಾನಸಭೆ 70 ಸದಸ್ಯರ ಬಲ ಹೊಂದಿದೆ. 2015ರಲ್ಲಿ ನಡೆದ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಬರೋಬ್ಬರಿ 67 ಸ್ಥಾನಗಳನ್ನು ಗೆದ್ದು ಬಹುತೇಕ ಕ್ಲೀನ್ ಸ್ವೀಪ್ ಮಾಡಿತ್ತು. ಅದಕ್ಕೂ ಹಿಂದೆ 2013ರಲ್ಲಿ ನಡೆದ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿತ್ತು. ಬಿಜೆಪಿ 31, ಆಪ್ ಪಕ್ಷ 28 ಹಾಗೂ ಕಾಂಗ್ರೆಸ್ 8 ಸ್ಥಾನ ಗಳಿಸಿದ್ದವು. ಬಿಜೆಪಿ ಸರ್ಕಾರ ರಚಿಸಲು ಮುಂದೆ ಬರಲಿಲ್ಲ. ರಾಷ್ಟ್ರಪತಿ ಆಳ್ವಿಕೆ ಸನ್ನಿಹಿತ ಎಂದನಿಸುತ್ತಿರುವಂತೆಯೇ ಕಾಂಗ್ರೆಸ್ ಪಕ್ಷದ ಬಾಹ್ಯ ಬೆಂಬಲದೊಂದಿಗೆ ಆಮ್ ಆದ್ಮಿ ಅಧಿಕಾರ ರಚಿಸಿತ್ತು. ಕೆಲವೇ ತಿಂಗಳ ಹಿಂದಷ್ಟೇ ಜನ್ಮತಾಳಿದ್ದ ಆಮ್ ಆದ್ಮಿ ಪಕ್ಷ ಒಂದೇ ವರ್ಷದ ಅಂತರದಲ್ಲಿ ರಾಜ್ಯವೊಂದರ ಅಧಿಕಾರ ಹಿಡಿದು ಹೊಸ ಇತಿಹಾಸ ಸೃಷ್ಟಿಸಿತು. ಅರವಿಂದ್ ಕೇಜ್ರಿವಾಲ್ ದಿಲ್ಲಿ ‘ದೊರೆ’ಯಾದರು.
    First published: