Kedarnath: ಇಂದು ಕೇದಾರನಾಥಕ್ಕೆ ಪ್ರಧಾನಿ ಮೋದಿ ಭೇಟಿ: ಶಂಕರಾಚಾರ್ಯರ ಸಮಾಧಿ ಸ್ಥಳದ ಅನಾವರಣ

Kedarnath: ಈ ಆದಿಗುರು ಶಂಕರಾಚಾರ್ಯರ ಸುಂದರ ಪುತ್ಥಳಿಯನ್ನು ಕೆತ್ತಿದ್ದು ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌. ಸ್ವತಃ ಪ್ರಧಾನಿ ಕಾರ್ಯಾಲಯವೇ ದೇಶದೆಲ್ಲೆಡೆ ಶಿಲ್ಪಿಗಾಗಿ ಹುಡುಕಾಡಿ, ಕೊನೆಗೆ ಮೈಸೂರಿನ ಕಲಾವಿದನಿಂದ ಈ ಪುತ್ಥಳಿಯನ್ನು ಕೆತ್ತಿಸಿದೆ.

ಇಂದು ಪ್ರಧಾನಿ ಮೋದಿ ಅವರಿಂದ ಪುತ್ಥಳಿ ಅನಾವರಣ

ಇಂದು ಪ್ರಧಾನಿ ಮೋದಿ ಅವರಿಂದ ಪುತ್ಥಳಿ ಅನಾವರಣ

  • Share this:
ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಇಂದು ಉತ್ತರಾಖಂಡ(Uttarakhand) ರಾಜ್ಯದ ಕೇದಾರನಾಥ(Kedarnath)ಕ್ಕೆ ಭೇಟಿ ನೀಡಲಿದ್ದಾರೆ. ಕೇದಾರನಾಥದಲ್ಲಿ ಶಂಕರಾಚಾರ್ಯ(Shankaracharya)ರ ಸಮಾಧಿ ಸ್ಥಳವನ್ನು ಭಕ್ತರ ದರ್ಶನಕ್ಕೆ ಅನಾವರಣಗೊಳಿಸಲಿದ್ದಾರೆ. ಕೇದಾರನಾಥ ದೇವಾಲಯದಲ್ಲಿ ಪ್ರಧಾನಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ನಂತರ ಶ್ರೀ ಆದಿ ಶಂಕರಾಚಾರ್ಯ ಸಮಾಧಿ ಉದ್ಘಾಟನೆ ಮತ್ತು ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. 2013 ರ ಪ್ರವಾಹ(Flood)ದಲ್ಲಿ ನಾಶವಾದ ನಂತರ ಸಮಾಧಿಯನ್ನು ಪುನರ್ನಿರ್ಮಿಸಲಾಯಿತು. ಇನ್ನು ಇಂದು  ಬಿಜೆಪಿ ನಾಯಕರು(BJP Leaders) ದೇಶದ ನೂರು ಪವಿತ್ರ ಸ್ಥಳಗಳಿ(Holy Places)ಗೆ ಭೇಟಿ ನೀಡಲಿದ್ದಾರೆ. ಶ್ರೀನಗರದ ಪ್ರಸಿದ್ಧ ಶಂಕರಾಚಾರ್ಯ ದೇವಸ್ಥಾನದಿಂದ ಹಿಡಿದು ಕೇರಳದ ಎರ್ನಾಕುಲಂನ(Ernakulam) ಆದಿ ಶಂಕರಾಚಾರ್ಯರ ಜನ್ಮಸ್ಥಳ(Birthpalce) ಮತ್ತು ಗುಜರಾತ್‌ನ ಸೋಮನಾಥ ದೇವಸ್ಥಾನ(Somanatha Temple)ದವರೆಗೆ ಹಲವಾರು ಕೇಂದ್ರ ಸಚಿವರು, ಬಿಜೆಪಿ ಸಂಸದರು ಮತ್ತು ಬಿಜೆಪಿಯ ಹಿರಿಯ ನಾಯಕರು ಇಂದು ದೇಶದ 100ಕ್ಕೂ ಹೆಚ್ಚು ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಕೇದಾರನಾಥದಿಂದ ಪ್ರಧಾನಮಂತ್ರಿ ಕಾರ್ಯಕ್ರಮದ ನೇರಪ್ರಸಾರಕ್ಕಾಗಿ ಈ ಎಲ್ಲಾ ಸ್ಥಳಗಳಲ್ಲಿ ಎಲ್‌ಇಡಿಗಳು ಮತ್ತು ದೊಡ್ಡ ಪರದೆಗಳನ್ನು ಹಾಕಲಾಗಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಭಾಷಣವನ್ನೂ ಮಾಡಲಿದ್ದಾರೆ.

ಶಂಕರಾಚಾರ್ಯರ ಪುತ್ಥಳಿ ಅನಾವರಣ

ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಕ್ಕೆ 6.30ಕ್ಕೆ ಉತ್ತರಖಂಡಕ್ಕೆ ಆಗಮಿಸಿದ್ದಾರೆ. ಬಳಿಕ ನೇರವಾಗಿ ಕೇದಾರನಾಥ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಪೂಜೆ ಬಳಿಕ ಕೇದಾರನಾಥದಲ್ಲಿರುವ ಆದಿಗುರು ಶಂಕಾರಚಾರ್ಯರ ಸಾಮಾಧಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಶಂಕರಾರಾಚಾರ್ಯರ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಬಳಿಕ 180 ಕೋಟಿ ರೂಪಾಯಿ ವೆಚ್ಚದ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೋದಿ ಉದ್ಘಾಟಿಸಲಿದ್ದಾರೆ. ಇತ್ತ ಪೂರ್ಣಗೊಂಡಿರುವ ಹಲವು ಕಾಮಾಗಾರಿಗಳ ಉದ್ಘಾಟನೆಯನ್ನು ಮೋದಿ ಮಾಡಲಿದ್ದಾರೆ.

ಇದನ್ನು ಓದಿ : ನಿಮ್ಮಿಂದಾಗಿ ದೇಶದ ಜನರು ಶಾಂತಿ-ನೆಮ್ಮದಿಯಿಂದ ಹಬ್ಬ ಆಚರಿಸುತ್ತಿದ್ದಾರೆ; ಯೋಧರ ಜೊತೆ ಪ್ರಧಾನಿ ದೀಪಾವಳಿ

ಶಂಕರಾಚಾರ್ಯ ಪ್ರತಿಮೆ ಕೆತ್ತಿದ್ದು ಮೈಸೂರು ಶಿಲ್ಪಿ!

ವಿಶೇಷ ಜೊತೆಗೆ ಹೆಮ್ಮೆಯ ವಿಚಾರ ಅಂದರೆ ಈ  ಆದಿಗುರು ಶಂಕರಾಚಾರ್ಯರ ಸುಂದರ ಪುತ್ಥಳಿಯನ್ನು ಕೆತ್ತಿದ್ದು ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌. ಸ್ವತಃ ಪ್ರಧಾನಿ ಕಾರ್ಯಾಲಯವೇ ದೇಶದೆಲ್ಲೆಡೆ ಶಿಲ್ಪಿಗಾಗಿ ಹುಡುಕಾಡಿ, ಕೊನೆಗೆ ಮೈಸೂರಿನ ಕಲಾವಿದನಿಂದ ಈ ಪುತ್ಥಳಿಯನ್ನು ಕೆತ್ತಿಸಿದೆ.  ಯೋಗಿರಾಜ್‌ ಶಿಲ್ಪಿ ಅವರ ಕುಟುಂಬ ಐದು ತಲೆಮಾರಿನಿಂದ ಕಲ್ಲಿನ ಕೆತ್ತನೆಯಲ್ಲಿ ನೈಪುಣ್ಯ ಪಡೆದಿದೆ. ಯೋಗಿರಾಜ್‌ ಅವರು ತಮ್ಮ ಪುತ್ರ ಅರುಣ್‌ ಜೊತೆ ಸೇರಿ ಶಂಕರರ ಪುತ್ಥಳಿ ಕೆತ್ತಿದ್ದಾರೆ. 2020ರ ಸೆಪ್ಟೆಂಬರ್‌ನಲ್ಲಿ ಕೆತ್ತನೆ ಆರಂಭಿಸಿದ ಅವರು ಇತ್ತೀಚೆಗೆ ಪೂರ್ಣಗೊಳಿಸಿದ್ದರು. ಮೈಸೂರಿನಿಂದ ಪ್ರತಿಮೆಯನ್ನು ಚಮೋಲಿ ಏರ್‌ಬೇಸ್‌ವರೆಗೆ ರಸ್ತೆಯ ಮೂಲಕ ಸಾಗಿಸಲಾಯಿತು. ಅಲ್ಲಿಂದ ಕೇದಾರನಾಥಕ್ಕೆ ಭಾರತೀಯ ವಾಯುಪಡೆ ವಿಮಾನದ ಮೂಲಕ ಸಾಗಿಸಲಾಗಿದೆ.



 12 ಅಡಿ ಎತ್ತರ, 35 ಟನ್‌ ತೂಕ


ಕೇದಾರನಾಥದಲ್ಲಿ ಪ್ರಧಾನಿ ಮೋದಿ ಅನಾವರಣಗೊಳಿಸಲಿರುವ ಶಂಕರಾಚಾರ್ಯರ ಪುತ್ಥಳಿ 12 ಅಡಿ ಎತ್ತರವಿದ್ದು, ಕುಳಿತ ಭಂಗಿಯಲ್ಲಿದೆ. 35 ಟನ್‌ ತೂಕದ ಪುತ್ಥಳಿ ಕೆತ್ತಲು ಹೆಗ್ಗಡ ದೇವನಕೋಟೆಯಿಂದ ತರಲಾದ 120 ಟನ್‌ನ ಕೃಷ್ಣಶಿಲೆ ಬಳಸಲಾಗಿದೆ. . ಈ ಕಲ್ಲು ಮಳೆ, ಗಾಳಿ, ಬಿಸಿಲು ಹಾಗೂ ಕಠಿಣ ಹವಾಮಾನವನ್ನು ತಡೆಯುವ ಸಾಮರ್ಥ್ಯ ಹೊಂದಿದೆ. ಪುತ್ಥಳಿಗೆ ಹೊಳಪು ಬರಲು ತೆಂಗಿನಕಾಯಿಯ ನೀರಿನಿಂದ ಪಾಲಿಶ್‌ ಮಾಡಲಾಗಿದೆ.




2013ರ ಪ್ರವಾಹಕ್ಕೆ ನಾಶವಾಗಿದ್ದ ಸಮಾಧಿ ಸ್ಥಳ 



2013ರಲ್ಲಿ ಉತ್ತರಖಂಡ ಕಂಡು ಕೇಳರಿಯದ ಪ್ರವಾಹಕ್ಕೆ ತುತ್ತಾಗಿತ್ತು. ಈ ಪ್ರವಾಹದಲ್ಲಿ ಶಂಕಾರಾಚಾರ್ಯರ ಸಮಾಧಿ ಸ್ಥಳವೂ ನಾಶವಾಗಿತ್ತು. ಈ ಸಮಾಧಿ ಸ್ಥಳದಲ್ಲಿದ್ದ ಶಂಕರಾಚಾರ್ಯರ ಪ್ರತಿಮೆ ಕೂಡ ನಾಶವಗೊಂಡಿತ್ತು. ಇದೀಗ ಶಂಕರಾಚರ್ಯರ ಸಮಾಧಿ ಸ್ಥಳವನ್ನು ಮತ್ತೆ ನಿರ್ಮಿಸಲಾಗಿದೆ. ಇನ್ನು 12 ಅಡಿ ಎತ್ತರದ ಪ್ರತಿಮೆಯನ್ನು ಕೆತ್ತನೆ ಮಾಡಿ ಸ್ಥಾಪಿಸಲಾಗಿದೆ. ಸ್ವತಃ ಪ್ರಧಾನಿ ಮೋದಿ ಇಂದು ಈ ಪುತ್ಥಳಿಯನ್ನು ನಿರ್ಮಾಣ ಮಾಡಲಿದ್ದಾರೆ.

Published by:Vasudeva M
First published: