ಎಎಪಿ ಭರ್ಜರಿ ಗೆಲುವು; ಸಿಎಂ ಅರವಿಂದ್ ಕೇಜ್ರಿವಾಲ್​ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರ ಶುಭಾಶಯಕ್ಕೆ ಸಿಎಂ ಕೇಜ್ರಿವಾಲ್ ಕೂಡ ಧನ್ಯವಾದ ಅರ್ಪಿಸಿದ್ದಾರೆ. ಅಲ್ಲದೇ ರಾಷ್ಟ್ರ ರಾಜಧಾನಿ ದೆಹಲಿಯನ್ನು ಅಕ್ಷರಶಃ ವಿಶ್ವ ದರ್ಜೆಯ ನಗರವನ್ನಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಪ್ರಧಾನಿ ಮೋದಿ ಮತ್ತು ಅರವಿಂದ್ ಕೇಜ್ರಿವಾಲ್.

ಪ್ರಧಾನಿ ಮೋದಿ ಮತ್ತು ಅರವಿಂದ್ ಕೇಜ್ರಿವಾಲ್.

  • Share this:
ನವದೆಹಲಿ: ಮತ್ತೊಮ್ಮೆ ರಾಷ್ಟ್ರ ರಾಜಧಾನಿ ದೆಹಲಿ ಅಧಿಕಾರದ ಗದ್ದುಗೆ ಹಿಡಿಯುವ ಮೂಲಕ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಹ್ಯಾಟ್ರಿಕ್ ಗೆಲುವು ದಾಖಲಿಸಿದೆ. ರಾಷ್ಟ್ರದ ಎಲ್ಲ ನಾಯಕರು ಪಕ್ಷಬೇಧ ಮರೆತು ಸಿಎಂ ಕೇಜ್ರಿವಾಲ್ ಅವರಿಗೆ ಶುಭಾಶಯ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಆಪ್ ಗೆಲುವಿಗೆ ಶುಭಾಶಯ ಕೋರಿದ್ದಾರೆ. ಅದಕ್ಕೆ ಪ್ರತಿಯಾಗಿ ಕೇಜ್ರಿವಾಲ್ ಕೂಡ ಪ್ರಧಾನಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಆಮ್​ ಆದ್ಮಿ ಪಕ್ಷ ಬರೋಬ್ಬರಿ 62 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಎಎಪಿಗೆ ಸೆಡ್ಡು ಹೊಡೆದು ಅಧಿಕಾರ ಪಡೆಯಲು ಭಾರೀ ಪೈಪೋಟಿ ನೀಡಿದ್ದ ಬಿಜೆಪಿ ಕೇವಲ 8 ಸ್ಥಾನ ಗಳಿಸಲ್ಲಷ್ಟೇ ಶಕ್ತವಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಕಾಂಗ್ರೆಸ್​ ಶೂನ್ಯ ಸಾಧನೆ ಮಾಡಿದೆ.

ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಪ್ರಧಾನಿ ಮೋದಿ ಅವರು ಟ್ವೀಟ್ ಮೂಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಶುಭಾಶಯ ಕೋರಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಅರವಿಂದ್ ಕೇಜ್ರಿವಾಲ್ ಅವರಿಗೆ ಶುಭಾಶಯಗಳು. ದೆಹಲಿ ಜನರ ಎಲ್ಲ ಆಶೋತ್ತರಗಳನ್ನು ಈಡೇರಿಸುವಂತೆ ಶುಭ ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಶುಭ ಕೋರಿದ್ದಾರೆ.

Congratulations to AAP and Shri @ArvindKejriwal Ji for the victory in the Delhi Assembly Elections. Wishing them the very best in fulfilling the aspirations of the people of Delhi.ಇದನ್ನು ಓದಿ: ಮತ್ತೊಮ್ಮೆ ದೆಹಲಿ ಗದ್ದುಗೆಗೆ ಆಮ್ ಆದ್ಮಿ; ಇದು ದೆಹಲಿ ಜನರ ದಿಗ್ವಿಜಯ ಎಂದ ಕೇಜ್ರಿವಾಲ್

ಪ್ರಧಾನಿ ಮೋದಿ ಅವರ ಶುಭಾಶಯಕ್ಕೆ ಸಿಎಂ ಕೇಜ್ರಿವಾಲ್ ಕೂಡ ಧನ್ಯವಾದ ಅರ್ಪಿಸಿದ್ದಾರೆ. ಅಲ್ಲದೇ ರಾಷ್ಟ್ರ ರಾಜಧಾನಿ ದೆಹಲಿಯನ್ನು ಅಕ್ಷರಶಃ ವಿಶ್ವ ದರ್ಜೆಯ ನಗರವನ್ನಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.


First published: