• Home
 • »
 • News
 • »
 • national-international
 • »
 • ಯುದ್ಧದ ಬೆನ್ನಿಗೆ ಇಸ್ರೇಲ್‌ನಲ್ಲಿ ರಾಜಕೀಯ ಅನಿಶ್ಚಿತತೆ: ಪ್ರಧಾನಿ ನೆತನ್ಯಾಹು ಬದಲಾವಣೆಗೆ ಕ್ಷಣಗಣನೆ

ಯುದ್ಧದ ಬೆನ್ನಿಗೆ ಇಸ್ರೇಲ್‌ನಲ್ಲಿ ರಾಜಕೀಯ ಅನಿಶ್ಚಿತತೆ: ಪ್ರಧಾನಿ ನೆತನ್ಯಾಹು ಬದಲಾವಣೆಗೆ ಕ್ಷಣಗಣನೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸರ್ಕಾರ ಉರುಳುವ ಸಾಧ್ಯತೆ ಹೆಚ್ಚಾಗಿದೆ. ನೆತನ್ಯಾಹು ಅವರ ವಿರೋಧಿ ನಾಯಕರು ಮೈತ್ರಿ ಮಾಡಿಕೊಂಡಿದ್ದು ಹೊಸ ಒಕ್ಕೂಟ ಸರ್ಕಾರವನ್ನು ರಚನೆ ಮಾಡಲು ಮುಂದಾಗಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸರ್ಕಾರ ಉರುಳುವ ಸಾಧ್ಯತೆ ಹೆಚ್ಚಾಗಿದೆ. ನೆತನ್ಯಾಹು ಅವರ ವಿರೋಧಿ ನಾಯಕರು ಮೈತ್ರಿ ಮಾಡಿಕೊಂಡಿದ್ದು ಹೊಸ ಒಕ್ಕೂಟ ಸರ್ಕಾರವನ್ನು ರಚನೆ ಮಾಡಲು ಮುಂದಾಗಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸರ್ಕಾರ ಉರುಳುವ ಸಾಧ್ಯತೆ ಹೆಚ್ಚಾಗಿದೆ. ನೆತನ್ಯಾಹು ಅವರ ವಿರೋಧಿ ನಾಯಕರು ಮೈತ್ರಿ ಮಾಡಿಕೊಂಡಿದ್ದು ಹೊಸ ಒಕ್ಕೂಟ ಸರ್ಕಾರವನ್ನು ರಚನೆ ಮಾಡಲು ಮುಂದಾಗಿದ್ದಾರೆ.

 • Share this:

  ಪ್ಯಾಲೆಸ್ಟೀನ್​ ವಿರುದ್ಧದ ಯುದ್ಧದ ಬೆನ್ನಿಗೆ ಇದೀಗ ಇಸ್ರೇಲ್‌ನಲ್ಲಿ ಮತ್ತೆ ರಾಜಕೀಯ ಅನಿಶ್ಚಿತತೆ ಪ್ರಾರಂಭವಾಗಿದ್ದು, ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸರ್ಕಾರ ಉರುಳುವ ಸಾಧ್ಯತೆ ಹೆಚ್ಚಾಗಿದೆ. ಪ್ರಧಾನಿ ನೆತನ್ಯಾಹು ಅವರ ವಿರೋಧಿ ನಾಯಕರು ಮೈತ್ರಿ ಮಾಡಿಕೊಂಡಿದ್ದು ಹೊಸ ಒಕ್ಕೂಟ ಸರ್ಕಾರವನ್ನು ರಚನೆ ಮಾಡಲು ಮುಂದಾಗಿದ್ದಾರೆ. ಪ್ರಮುಖ ವಿರೋಧ ಪಕ್ಷವಾದ ಯೆಸ್‌ ಅಟೈಡ್ ಪಕ್ಷದ ನಾಯಕ ಯೇರ್‌ ಲ್ಯಾಪಿಡ್ ಮತ್ತು ಯೆಮಿನ ಪಕ್ಷದ ನಾಯಕ, ಮಾಜಿ ರಕ್ಷಣಾ ಸಚಿವ ನಫ್ತಾಲಿ ಬೆನೆಟ್‌ ಅವರು ಬುಧವಾರ ಮಧ್ಯರಾತ್ರಿ ಸಭೆ ನಡೆಸಿದ್ದು, ಹೊಸ ಒಕ್ಕೂಟ ರಚಿಸುವ ವಿಚಾರವನ್ನು ಪ್ರಕಟಿಸಿದ್ದಾರೆ. ಈ ಮೂಲಕ ಎರಡು ವರ್ಷಗಳಲ್ಲಿ ದೇಶದಲ್ಲಿ ಮತ್ತೆ ಚುನಾವಣೆ ನಡೆಯುವುದು ತಪ್ಪಲಿದೆ ಎಂದು ಅವರು ಹೇಳಿದ್ದಾರೆ.


  "ಮುಂದೆ ರಚೆನೆಯಾಗುವ ಒಕ್ಕೂಟ (ಮೈತ್ರಿ) ಸರ್ಕಾರವು ತನ್ನ ಪರ ಮತ ಹಾಕಿದ ಮತ್ತು ಹಾಕದಿರುವ ಇಸ್ರೇಲ್‌ನ ಎಲ್ಲಾ ನಾಗರಿಕರ ಪರವಾಗಿ ಕೆಲಸ ಮಾಡುತ್ತದೆ. ಇಸ್ರೇಲ್ ಸಮಾಜವನ್ನು ಒಂದುಗೂಡಿಸಲು ಎಲ್ಲ ರೀತಿಯಲ್ಲೂ ಕೆಲಸ ಮಾಡಲಿದೆ" ಎಂದು ಲ್ಯಾಪಿಡ್ ಹೇಳಿದ್ದಾರೆ.


  ಇದನ್ನೂ ಓದಿ: Karnataka Lockdown Extension: ಲಾಕ್​ಡೌನ್ ವಿಸ್ತರಣೆ ಖಚಿತಪಡಿಸಿದ ಸಿಎಂ ಯಡಿಯೂರಪ್ಪ; 500 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ


  ಒಪ್ಪಂದದ ಪ್ರಕಾರ, ಹೊಸ ಸರ್ಕಾರದಲ್ಲಿ ಲ್ಯಾಪಿಡ್ ಮತ್ತು ಬೆನೆಟ್ ಪ್ರಧಾನಿ ಹುದ್ದೆಯನ್ನು ಪಾಳಿ ಆಧಾರದಲ್ಲಿ ವಿಭಜಿಸಿಕೊಳ್ಳಲಿದ್ದಾರೆ. ಬೆನೆಟ್ ಮೊದಲ ಎರಡು ವರ್ಷ ಸೇವೆ ಸಲ್ಲಿಸಲಿದ್ದಾರೆ. ನಂತರ ಲ್ಯಾಪಿಡ್ ಅಂತಿಮ ಎರಡು ವರ್ಷ ಕಾರ್ಯನಿರ್ವಹಿಸಲಿದ್ದಾರೆ. ಇಸ್ರೇಲ್‌‌ ಸಂಸತ್‌ನಲ್ಲಿ ಮುಂದಿನ ವಾರ ಈ ಸಂಬಂಧ ಮತದಾನ ನಡೆಯಲಿದೆ ಎಂದು ವರದಿಯಾಗಿದೆ.


  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.

  Published by:MAshok Kumar
  First published: