Pollachi Sexual Assault: ಸುಳ್ಳು ಸುದ್ದಿ ಹರಡಿದ ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅಳಿಯನ ವಿರುದ್ಧ ಚೆನ್ನೈನಲ್ಲಿ ದೂರು ದಾಖಲು

ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ಎಂಬಲ್ಲಿ ಯುವಕರ ಗ್ಯಾಂಗ್​ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬ್ಲಾಕ್​ಮೇಲ್ ಮಾಡುತ್ತಿದ್ದರು. ಆ ಕುರಿತು ಇತ್ತೀಚೆಗೆ 19 ವರ್ಷ ಯುವತಿಯೋರ್ವಳು ತನಗಾದ ದೌರ್ಜನ್ಯದ ಬಗ್ಗೆ ನೀಡಿದ ದೂರನ್ನು ಆಧರಿಸಿ ಪೊಲೀಸರು ಆರೋಪಿಗಳನ್ನು ಸೆರೆಹಿಡಿದಿದ್ದರು.

Sushma Chakre | news18
Updated:March 15, 2019, 10:54 AM IST
Pollachi Sexual Assault: ಸುಳ್ಳು ಸುದ್ದಿ ಹರಡಿದ ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅಳಿಯನ ವಿರುದ್ಧ ಚೆನ್ನೈನಲ್ಲಿ ದೂರು ದಾಖಲು
ಎಂ.ಕೆ. ಸ್ಟಾಲಿನ್
  • News18
  • Last Updated: March 15, 2019, 10:54 AM IST
  • Share this:
ಚೆನ್ನೈ (ಮಾ. 15): ದೇಶದೆಲ್ಲೆಡೆ ಭಾರೀ ಚರ್ಚೆಗೀಡಾಗಿದ್ದ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಡಿಎಂಕೆ ಅಧ್ಯಕ್ಷ ಎಂ. ಕೆ. ಸ್ಟಾಲಿನ್ ಅವರ ಅಳಿಯ ಸಬರೀಸನ್​ ವೇದಮೂರ್ತಿ ವಿರುದ್ಧ ಚೆನ್ನೈ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಆಡಳಿತ ಪಕ್ಷವಾದ ಎಐಎಡಿಎಂಕೆ ನಾಯಕ ಹಾಗೂ ತಮಿಳುನಾಡು ವಿಧಾನಸಭಾ ಸ್ಪೀಕರ್​ ಪೊಲ್ಲಾಚಿ ವಿ. ಜಯರಾಮನ್​ ಈ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ವದಂತಿಗಳನ್ನು ಹರಡಿದ ಆರೋಪದಲ್ಲಿ ಸಬರೀಸನ್​ ಅವರ ವಿರುದ್ಧ ದೂರು ದಾಖಲಾಗಿದೆ.

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ; ರಾತ್ರೋರಾತ್ರಿ ಬಿಡುಗಡೆಯಾಯ್ತು ಟಿಡಿಪಿ ಅಭ್ಯರ್ಥಿಗಳ ಮೊದಲ ಪಟ್ಟಿ

ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ಎಂಬಲ್ಲಿ ನಾಲ್ವರು ಯುವಕರು ಓರ್ವ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇತ್ತೀಚೆಗೆ 19 ವರ್ಷ ಯುವತಿಯೋರ್ವಳು ತನಗಾದ ದೌರ್ಜನ್ಯದ ಬಗ್ಗೆ ನೀಡಿದ ದೂರಿನಿಂದ ಈ ರೀತಿ ಲೈಂಗಿಕ ದೌರ್ಜನ್ಯ ನಡೆಸಿ ಬ್ಲಾಕ್​ಮೇಲ್​ ಮಾಡುತ್ತಿದ್ದ ಗ್ಯಾಂಗ್​ ಅನ್ನು ಪೊಲೀಸರು ಸೆರೆಹಿಡಿದಿದ್ದರು. ಈ ರೀತಿ 50ಕ್ಕೂ ಹೆಚ್ಚು ಯುವತಿಯರು, ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಂಡು ಆ ವಿಡಿಯೋವನ್ನು ಇಟ್ಟುಕೊಂಡು ಬ್ಲಾಕ್​ಮೇಲ್​ ಮಾಡುತ್ತಿದ್ದ ಸಂಗತಿ ನಂತರ ಬೆಳಕಿಗೆ ಬಂದಿತ್ತು. ಆರೋಪಿಗಳ ಮೊಬೈಲ್​ ಅನ್ನು ವಶಕ್ಕೆ ಪಡೆದಿದ್ದ ಪೊಲೀಸರು ಅದರಲ್ಲಿದ್ದ 40ಕ್ಕೂ ಹೆಚ್ಚು ಮಹಿಳೆಯರ ವಿಡಿಯೋ ಬಗ್ಗೆ ತನಿಖೆ ನಡೆಸಿದ್ದರು.

ತನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿರುವುದಾಗಿ ಸ್ಪೀಕರ್​ ಜಯರಾಮನ್ ಪೊಲೀಸರಿಗೆ ದೂರು ನೀಡಿದ್ದರು. ಆ ದೂರಿನ ಆಧಾರದಲ್ಲಿ ಸಬರೀಸನ್​ ಅವರ​ ವಿರುದ್ಧ ಸೈಬರ್​ ಕ್ರೈಮ್​ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ರಾಜಕೀಯ ಪ್ರಭಾವವಿರುವ ವ್ಯಕ್ತಿಯ ಕೈವಾಡವೂ ಇದೆ ಎನ್ನಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

First published:March 15, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading