ಜನಸಂಖ್ಯಾ ನಿಯಂತ್ರಣದ ಬಗ್ಗೆ ಸ್ಥಳೀಯ ಮುಸ್ಲಿಂ ನಾಯಕರೊಂದಿಗೆ ಚರ್ಚಿಸಿದ ಅಸ್ಸಾಂ ಸಿಎಂ

ಸಭೆಯಲ್ಲಿ ಭಾಗವಹಿಸಿದವವರು ಜನಸಂಖ್ಯೆಯ ಸ್ಫೋಟವು ರಾಜ್ಯದ ಅಭಿವೃದ್ಧಿಗೆ, ವಿಶೇಷವಾಗಿ ಆರ್ಥಿಕತೆಗೆ ಪ್ರಮುಖ ಬೆದರಿಕೆಯಾಗಿದೆ ಎಂದು ಒಪ್ಪಿಕೊಂಡಿದ್ದು, ಉಪ-ಗುಂಪುಗಳ ರಚನೆಗೆ ಹೆಚ್ಚಿನ ಒತ್ತು ನೀಡಿದ್ದಾರೆ ಎಂದು ಹಿಮಾಂತ್‌ ಬಿಸ್ವಾ ಹೇಳಿದ್ದಾರೆ.

ಹಿಮಂತ್ ಬಿಸ್ವಾ ಶರ್ಮಾ.

ಹಿಮಂತ್ ಬಿಸ್ವಾ ಶರ್ಮಾ.

 • Share this:
  ಅಸ್ಸಾಂ; ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಗುವಾಹಟಿಯ ಮುಸ್ಲಿಂ ಸಮುದಾಯದ ಸುಮಾರು 150 ಬುದ್ಧಿಜೀವಿಗಳನ್ನು ಭೇಟಿ ಮಾಡಿ ಜನಸಂಖ್ಯಾ ನಿಯಂತ್ರಣ ನೀತಿ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಸಭೆ ಅಸ್ಸಾಂನ ಅಲ್ಪಸಂಖ್ಯಾತ ಸಮುದಾಯದ ಅತಿದೊಡ್ಡ ಕಾರ್ಯಕ್ರಮ ಎಂದು ಹೇಳಲಾಗುತ್ತಿದೆ. ತನ್ನ ಜನಸಂಖ್ಯಾ ನಿಯಂತ್ರಣ ನೀತಿಯನ್ನು ಮುಂದಿಟ್ಟುಕೊಂಡು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಜನಸಂಖ್ಯೆಯ ಸ್ಫೋಟವನ್ನು ಸ್ಥಿರಗೊಳಿಸುವುದು ಸೇರಿದಂತೆ ಇತರ ಸಮಸ್ಯೆಗಳನ್ನು ನೀಗಿಸಲು ಎಂಟು ಉಪ ಗುಂಪುಗಳನ್ನು ರಚಿಸುವುದಾಗಿ ಪ್ರಕಟಿಸಿದ್ದಾರೆ. ಸ್ಥಳೀಯ ಮುಸ್ಲಿಂ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಹಿಮಾಂತ ಬಿಸ್ವಾ ಈ ಘೋಷಣೆ ಮಾಡಿದ್ದಾರೆ.

  ಸಭೆಯಲ್ಲಿ ಭಾಗವಹಿಸಿದವವರು ಜನಸಂಖ್ಯೆಯ ಸ್ಫೋಟವು ರಾಜ್ಯದ ಅಭಿವೃದ್ಧಿಗೆ, ವಿಶೇಷವಾಗಿ ಆರ್ಥಿಕತೆಗೆ ಪ್ರಮುಖ ಬೆದರಿಕೆಯಾಗಿದೆ ಎಂದು ಒಪ್ಪಿಕೊಂಡಿದ್ದು, ಉಪ-ಗುಂಪುಗಳ ರಚನೆಗೆ ಹೆಚ್ಚಿನ ಒತ್ತು ನೀಡಿದ್ದಾರೆ ಎಂದು ಹಿಮಾಂತ್‌ ಬಿಸ್ವಾ ಹೇಳಿದ್ದಾರೆ. “ನಾವು ಅಗ್ರ ಐದು ರಾಜ್ಯಗಳಲ್ಲಿ ಇರಬೇಕಾದರೆ, ನಮ್ಮ ಜನಸಂಖ್ಯೆಯ ಸ್ಫೋಟವನ್ನು ನಾವು ನಿರ್ವಹಣೆ ಮಾಡಬೇಕು” ಎಂದು ಹಿಮಾಂತ ಬಿಸ್ವಾ ಹೇಳಿದ್ದಾರೆ.

  ಜನಸಂಖ್ಯೆ ಸ್ಥಿರೀಕರಣ, ಆರೋಗ್ಯ, ಶಿಕ್ಷಣ, ಸಾಂಸ್ಕೃತಿಕ ಗುರುತು, ಮಹಿಳಾ ಸಬಲೀಕರಣ ಮುಂತಾದ ಕ್ಷೇತ್ರಗಳಲ್ಲಿ ಈ ಉಪ ಗುಂಪುಗಳು ಕಾರ್ಯನಿರ್ವಹಿಸುತ್ತವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. “ಉಪ-ಗುಂಪುಗಳಲ್ಲಿ ಸಂಪೂರ್ಣ ಸಮಸ್ಯೆಗಳನ್ನು ಚರ್ಚಿಸಲಾಗುವುದು. ಮೂರು ತಿಂಗಳ ನಂತರ, ಐದು ವರ್ಷದ ಮಾರ್ಗಸೂಚಿಯನ್ನು ಸಿದ್ಧಪಡಿಸಲು ನಾವು ಮತ್ತೆ ಸಭೆ ನಡೆಸುತ್ತೇವೆ” ಎಂದು ಅವರು ಹೇಳಿದ್ದಾರೆ.

  ಇದನ್ನೂ ಓದಿ: Rafale Deal| ರಪೇಲ್ ಅಕ್ರಮ ವಿವಾದ, ತನಿಖೆಗೆ ಆದೇಶಿಸಿದ ಫ್ರೆಂಚ್ ಸರ್ಕಾರ; ಆದರೂ, ಬಿಜೆಪಿ ಮೌನವೇಕೆ? ಕಾಂಗ್ರೆಸ್ ಕಿಡಿ

  ಸ್ವಾತಂತ್ರ್ಯದ ನಂತರ ಸ್ಥಳೀಯ ಮುಸ್ಲಿಂ ನಾಯಕರೊಂದಿಗೆ ಅಸ್ಸಾಂ ಸರ್ಕಾರ ನಡೆಸಿದ ಮೊದಲ ಸಭೆ ಇದಾಗಿದೆ ಎಂದು TNIE ತನ್ನ ವರದಿಯಲ್ಲಿ ಉಲ್ಲೇಖ ಮಾಡಿದೆ. ಈ ಸಭೆಯ ನಂತರ, ವಲಸೆ ಬಂದ ಮುಸ್ಲಿಂ ಪ್ರತಿನಿಧಿಗಳೊಂದಿಗೂ ಚರ್ಚಿಸುವುದಾಗಿ ಹಿಮಾಂತ ಬಿಸ್ವಾ ಹೇಳಿದ್ದಾರೆ. ಅವರು ನಡೆಸುತ್ತಿರುವ ಸರಣಿ ಸಭೆಯು, ಜನಸಂಖ್ಯಾ ನಿರ್ವಹಣೆ ಕುರಿತು ರಾಜಕೀಯ ಮತ್ತು ಸಾಮಾಜಿಕ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲಿದೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: