ನವದೆಹಲಿ: ಸದಾ ಒಂದಿಲ್ಲೊಂದು ವಿವಾದಗಳ ಮೂಲಕ ಸುದ್ದಿಯಲ್ಲಿ ಇರುವ ಬಿಜೆಪಿ ಸಂಸದೆ (BJP MP) ಪ್ರಜ್ಞಾ ಸಿಂಗ್ ಠಾಕೂರ್ (Pragya Singh Thakur) ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧವೂ ಹರಿಹಾಯ್ದಿದ್ದಾರೆ. ಇತ್ತೀಚೆಗೆ ರಾಹುಲ್ ಗಾಂಧಿ ವಿದೇಶದಲ್ಲಿ ಮಾತನಾಡುತ್ತಾ ಭಾರತದ ಸಂಸತ್ತಿನಲ್ಲಿ (Lokasbha) ಪ್ರತಿಪಕ್ಷಗಳ (Opposition Party) ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ, ನಾಯಕರು ಮಾತನಾಡುವಾಗ ಅವರ ಮೈಕ್ಗಳನ್ನು ಆಫ್ ಮಾಡಲಾಗುತ್ತಿದೆ ಎಂದು ಭಾರತದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ್ದರು. ರಾಹುಲ್ ಗಾಂಧಿ ಭಾಷಣದ ವಿರುದ್ಧ ಹರಿಹಾಯ್ದಿದ್ದ ಬಿಜೆಪಿ (BJP) ವಿದೇಶದಲ್ಲಿ ಭಾರತದ ಮಾನ ಹರಾಜು ಹಾಕಿದ್ದಾರೆ ಎಂದು ಕಿಡಿಕಾರಿತ್ತು.
ಇದನ್ನೂ ಓದಿ: PM Modi: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಇಂದು ಲೋಕಾರ್ಪಣೆ, ಮೋದಿ ಆಗಮನ ಹಿನ್ನೆಲೆಯಲ್ಲಿ ಸಂಚಾರ ಮಾರ್ಗ ಬದಲಾವಣೆ
'ವಿದೇಶಿ ಮಹಿಳೆಗೆ ಜನಿಸಿದ ಮಗು ಎಂದಿಗೂ ದೇಶಭಕ್ತನಾಗಲು ಸಾಧ್ಯವಿಲ್ಲ'
ಇದೇ ವಿಚಾರವಾಗಿ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿರುವ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ರಾಹುಲ್ ಗಾಂಧಿಯನ್ನು ದೇಶದಿಂದ ಹೊರ ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದೇಶಿ ಮಹಿಳೆಗೆ ಜನಿಸಿದ ಮಗು ಎಂದಿಗೂ ದೇಶಭಕ್ತನಾಗಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ಈ ಮಾತು ನಿಜ ಎಂಬುದನ್ನು ಸಾಬೀತು ಮಾಡಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಅವರನ್ನು ದೇಶದಿಂದ ಹೊರ ಹಾಕಬೇಕು ಎಂದು ಪ್ರಜ್ಞಾ ಸಿಂಗ್ ಠಾಕೂರ್ ಆಗ್ರಹಿಸಿದ್ದಾರೆ.
'ವಿದೇಶದಲ್ಲಿ ರಾಹುಲ್ ಗಾಂಧಿ ಹೇಳಿದ್ದೇನು?'
ಭಾರತೀಯ ಮೂಲದ ಲೇಬರ್ ಪಕ್ಷದ ಸಂಸದ ವಿರೇಂದ್ರ ಶರ್ಮಾ ಅವರು ಬ್ರಿಟನ್‌ನಲ್ಲಿ ಆಯೋಜಿಸಿದ್ದ ಗ್ರಾಂಡ್ ಕಮಿಟಿ ರೂಮ್‌ನಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಲೋಕಸಭೆಯಲ್ಲಿ ಆಗಾಗ ವಿಪಕ್ಷಗಳ ವಿರುದ್ಧ ಮೈಕ್ರೋಫೋನ್‌ಗಳನ್ನು ನಿಶ್ಯಬ್ದಗೊಳಿಸಲಾಗುತ್ತದೆ. ನಾನು ಮಾತನಾಡುತ್ತಿದ್ದಾಗ ಹಲವು ಬಾರಿ ನನಗೆ ಇದರ ಅನುಭವ ಆಗಿದೆ ಎಂದು ಆರೋಪ ಮಾಡಿದ್ದರು. ಅಲ್ಲದೇ, ದುರಸ್ತಿಯಾಗಬೇಕಿದ್ದ ಮೈಕ್ರೋಫೋನ್ ಒಂದರ ಸಹಾಯದಿಂದ, ಆ ಪರಿಸ್ಥಿತಿಯನ್ನು ಭಾರತದಲ್ಲಿ ವಿಪಕ್ಷಗಳನ್ನು ತುಳಿಯಲಾಗುತ್ತಿರುವ ಬಗೆಯನ್ನು ವಿವರಿಸಿದ್ದರು.
'ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ನೊಂದಿಲ್ಲ'
ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ನಿಮ್ಮ ತಾಯಿ ಇಟಲಿಯವರಾದ ಕಾರಣ ನೀವು ಭಾರತೀಯರು ಅಲ್ಲ ಎಂದು ನಾವು ಭಾವಿಸುತ್ತೇವೆ ಎಂದರಲ್ಲದೇ, ನೀವು ವಿದೇಶಕ್ಕೆ ಹೋಗಿ ಸಂಸತ್ತಿನಲ್ಲಿ ಮಾತನಾಡಲು ನಿಮಗೆ ಅವಕಾಶ ನೀಡಿಲ್ಲ ಎಂದು ಹೇಳುತ್ತೀರಿ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ನೊಂದಿಲ್ಲ. ಹೀಗಾಗಿ ರಾಹುಲ್ ಗಾಂಧಿಗೆ ರಾಜಕೀಯದಲ್ಲಿ ಅವಕಾಶ ನೀಡಬಾರದು. ಅವರನ್ನು ದೇಶದಿಂದ ಹೊರ ಹಾಕಬೇಕು ಎಂದು ಪ್ರಜ್ಞಾ ಸಿಂಗ್ ಹರಿಹಾಯ್ದಿದ್ದಾರೆ.
ಸಂಸತ್ ಸುಗಮವಾಗಿ ನಡೆದರೆ ಹೆಚ್ಚಿನ ಕೆಲಸ ಕಾರ್ಯಗಳು ನಡೆಯುತ್ತವೆ. ಹೆಚ್ಚು ಕೆಲಸ ಮಾಡಿದರೆ ಕಾಂಗ್ರೆಸ್‌ಗೆ ಉಳಿಗಾಲ ಇರಲ್ಲ. ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುವ ಆತಂಕದಲ್ಲಿದೆ. ಇತ್ತೀಚೆಗೆ ಅವರ ಮನಸ್ಸು ಕೂಡ ಭ್ರಷ್ಟವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: Mandya: ಮೋದಿ ಆಗಮಿಸೋದು 10 ದಿನ ಮೊದಲೇ ಮಂಡ್ಯಕ್ಕೆ ಯುಗಾದಿ ಬಂದಂತಾಗಿದೆ! ಬಿಜೆಪಿಗೆ ಬೆಂಬಲ ಘೋಷಿಸಿದ ಬಳಿಕ ಸುಮಲತಾ ಗುಣಗಾನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ