Pranab Mukherjee Death: ದೇಶದ ಅಭಿವೃದ್ಧಿ ಪಥದ ಅಳಿಸಲಾಗದ ಗುರುತು ಮರೆಯಾಗಿದೆ; ಪ್ರಣಬ್ ಸಾವಿಗೆ ಮೋದಿ ಸೇರಿದಂತೆ ಹಲವು ಗಣ್ಯರ ಕಂಬನಿ

ಭಾರತ ರತ್ನ ಶ್ರೀ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಇಡೀ ಭಾರತ ದುಃಖಿತಪ್ತವಾಗಿದೆ. ಅವರು ನಮ್ಮ ರಾಷ್ಟ್ರದ ಅಭಿವೃದ್ಧಿ ಪಥದಲ್ಲಿ ಅಳಿಸಲಾಗದ ಗುರುತು ಹಾಕಿದ್ದಾರೆ. ಅವರೊಬ್ಬ ಶ್ರೇಷ್ಠ ವಿದ್ವಾಂಶ, ಉನ್ನತ ರಾಜಕಾರಣಿ. ಅವರ ರಾಜಕೀಯ ಪಯಣವನ್ನು ಸಮಾಜದ ಎಲ್ಲಾ ವರ್ಗದವರು ಮೆಚ್ಚಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಪ್ರಶಂಶೆ ವ್ಯಕ್ತಪಡಿಸಿದ್ದಾರೆ.

ಪ್ರಣಬ್ ಮುಖರ್ಜಿ

ಪ್ರಣಬ್ ಮುಖರ್ಜಿ

  • Share this:
ದೇಶದ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಮತ್ತು ರಾಷ್ಟ್ರ ನಾಯಕರು ಕಂಬನಿ ಮಿಡಿದಿದ್ದಾರೆ.

ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ  ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ರಾಷ್ಟ್ರಪತಿ, ರಾಜಕೀಯ ಧುರೀಣ ಪ್ರಣಬ್‌ ಮುಖರ್ಜಿ ಚಿಕಿತ್ಸೆ ಫಲಕಾರಿಯಾಗದೆ ಕಳೆದ ವಾರ ಶಾಶ್ವತ ಕೋಮಾಕ್ಕೆ ಜಾರಿದ್ದರು. ಆದರೆ, ಇಂದು ಸಂಜೆ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಪ್ರಣಬ್‌ ಮುಖರ್ಜಿ ಅವರ ಸಾವಿನ ಸುದ್ದಿ ತಿಳಿಯುತ್ತಲೇ ಈ ಕುರಿತು ಸಂತಾಪ ಸೂಚಿಸಿರುವ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ, "ಭಾರತ ರತ್ನ ಶ್ರೀ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಇಡೀ ಭಾರತ ದುಖಃತಪ್ತವಾಗಿದೆ. ಅವರು ನಮ್ಮ ರಾಷ್ಟ್ರದ ಅಭಿವೃದ್ಧಿ ಪಥದಲ್ಲಿ ಅಳಿಸಲಾಗದ ಗುರುತು ಹಾಕಿದ್ದಾರೆ. ಅವರೊಬ್ಬ ಶ್ರೇಷ್ಠ ವಿದ್ವಾಂಶ, ಉನ್ನತ ರಾಜಕಾರಣಿ. ಅವರ ರಾಜಕೀಯ ಪಯಣವನ್ನು ಸಮಾಜದ ಎಲ್ಲಾ ವರ್ಗದವರು ಮೆಚ್ಚಿದ್ದಾರೆ" ಎಂದು ಟ್ವೀಟ್‌ ಮೂಲಕ ಪ್ರಶಂಶೆ ವ್ಯಕ್ತಪಡಿಸಿದ್ದಾರೆ.ಪ್ರಣಬ್ ಮುಖರ್ಜಿ ಸಾವಿಗೆ ಟ್ವೀಟ್‌ ಮೂಲಕ ಸಂತಾಪ ಸೂಚಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, "ಭಾರತದ ಮಾಜಿ ರಾಷ್ಟ್ರಪತಿ ಭಾರತ್ ರತ್ನ ಶ್ರೀ ಪ್ರಣಬ್ ಮುಖರ್ಜಿ ಅವರ ನಿಧನದಿಂದ ನಾನು ತೀವ್ರ ದುಖಃತಪ್ತನಾಗಿದ್ದೇನೆ. ಅವರು ಅತ್ಯಂತ ಅನುಭವಿ ನಾಯಕರಾಗಿದ್ದರು. ಅಲ್ಲದೆ, ಈ ದೇಶಕ್ಕೆ ಅತ್ಯಂಯ ಭಕ್ತಿಯಿಂದ ತಮ್ಮ ಸೇವೆಯನ್ನು ಮಾಡಿದ್ದಾರೆ. ಪ್ರಣಬ್ ಅವರ ವಿಶಿಷ್ಟ ವೃತ್ತಿಜೀವನವು ಇಡೀ ದೇಶಕ್ಕೆ ಬಹಳ ಹೆಮ್ಮೆಯ ವಿಷಯವಾಗಿದೆ" ಎಂದಿದ್ದಾರೆ.ಕಾಂಗ್ರೆಸ್‌ ಪಕ್ಷದ ಮಾಜಿ ರಾಷ್ಟ್ರಾಧ್ಯಕ್ಷ ಹಾಗೂ ಸಂಸದ ರಾಹುಲ್‌ ಗಾಂಧಿ ಟ್ವೀಟ್ ಮಾಡಿದ್ದು, "ನಮ್ಮ ಮಾಜಿ ಅಧ್ಯಕ್ಷ ಶ್ರೀ ಪ್ರಣಬ್ ಮುಖರ್ಜಿ ಅವರ ದುರದೃಷ್ಟಕರ ನಿಧನದ ಸುದ್ದಿಯನ್ನು ರಾಷ್ಟ್ರವು ಬಹಳ ದುಖಃದಿಂದ ಸ್ವೀಕರಿಸುತ್ತದೆ. ಈ ದೇಶದ ಎಲ್ಲಾ ಜನರೊಂದಿಗೆ ಸೇರಿ ನಾವು ಅವರಿಗೆ ಗೌರವ ಸಲ್ಲಿಸುತ್ತೇನೆ. ದುಃಖಿತ ಕುಟುಂಬ ಮತ್ತು ಅವರ ಸ್ನೇಹಿತರಿಗೆ ನನ್ನ ಆಳವಾದ ಸಂತಾಪ" ಎಂದು ತಿಳಿಸಿದ್ದಾರೆ.ಇನ್ನೂ ಸರಣಿ ಟ್ವೀಟ್‌ ಮೂಲಕ ಪ್ರಣಬ್‌ ಮುಖರ್ಜಿ ಅವರ ಸಾವಿಗೆ ಕಂಬನಿ ಮಿಡಿದಿರುವ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, "ಧೀಮಂತ ರಾಜಕಾರಣಿ ಭಾರತದ ಮಾಜಿ ರಾಷ್ಟ್ರಪತಿ, ಭಾರತರತ್ನ ಶ್ರೀ ಪ್ರಣಬ್ ಮುಖರ್ಜಿ ವಿಧಿವಶರಾದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಶ್ರೇಷ್ಠ ನೇತಾರರನ್ನು ಕಳೆದುಕೊಂಡ ಅನಾಥಪ್ರಜ್ಞೆ ಇಡೀ ದೇಶಕ್ಕೆ ಆವರಿಸಿದೆ. ಅವರೊಂದಿಗೆ ನನ್ನ ಒಡನಾಟದ ಕ್ಷಣಗಳನ್ನು ನೆನೆಯುತ್ತಾ, ಅವರಿಗೆ ಅಶ್ರುಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ.ಶ್ರೀ ಪ್ರಣಬ್ ರವರ ಸೇವೆ, ಸಾಧನೆಗಳು ಅನನ್ಯ. ದಶಕಗಳ ಕಾಲ ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ಪ್ರಧಾನ ಪಾತ್ರ ವಹಿಸಿ, ಯೋಜನಾ ಆಯೋಗದ ಉಪಾಧ್ಯಕ್ಷರಾಗಿ, ವಾಣಿಜ್ಯ, ವಿದೇಶಾಂಗ, ಹಣಕಾಸು, ರಕ್ಷಣಾ ಸಚಿವರಾಗಿ ಅವರು ಅವಿಸ್ಮರಣೀಯ ಸೇವೆ ಸಲ್ಲಿಸಿದ್ದರು. ರಾಷ್ಟ್ರಪತಿಗಳಾಗಿ ಅವರು ದೇಶದ ಗರಿಮೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದರು.

ಶ್ರೀ ಪ್ರಣಬ್ ರಷ್ಟು ಸುದೀರ್ಘ ಕಾಲ ಆಡಳಿತದ ಕೇಂದ್ರ ಸ್ಥಾನದಲ್ಲಿದ್ದು, ಪ್ರಾಮಾಣಿಕವಾಗಿ, ಕಳಂಕರಹಿತರಾಗಿ ಸೇವೆ ಸಲ್ಲಿಸಿದ ಮತ್ತೋರ್ವ ಸರ್ವಾದರಣೀಯ ನಾಯಕ ಇರಲಾರರು. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ದಯಪಾಲಿಸಲಿ, ಕುಟುಂಬದವರಿಗೆ, ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ!" ಎಂದಿದ್ದಾರೆ.ಪ್ರಣಬ್ ಮುಖರ್ಜಿ ಸಾವಿಗೆ ಕಂಬನಿ ಮಿಡಿದಿರುವ ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, "ಮಾಜಿ ರಾಷ್ಟ್ರಪತಿಗಳು, ಕೇಂದ್ರದ ಮಾಜಿ ಸಚಿವರು ಮತ್ತು ಹಿರಿಯ ಕಾಂಗ್ರೆಸ್ ನಾಯಕ ಪ್ರಣಬ್ ಮುಖರ್ಜಿ ಅವರ ನಿಧನದ ಸುದ್ದಿ ಅತೀವ ದುಖಃವನ್ನುಂಟು ಮಾಡಿದೆ. ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳ ಖಾತೆಗಳ ಸಚಿವರಾಗಿ‌ ಅವರು ಮಾಡಿರುವ ಸಾಧನೆಗೆ ದೇಶ‌ ಸದಾ ಋಣಿಯಾಗಿದೆ. ಅವರ‌ ಕುಟುಂಬ ಮತ್ತು ಬಂಧು ಮಿತ್ರರ‌ ಶೋಕದಲ್ಲಿ‌ ನಾನೂ ಭಾಗಿಯಾಗಿದ್ದೇನೆ" ಎಂದು ಟ್ವೀಟ್ ಮಾಡಿದ್ದಾರೆ.

Deeply saddened by the passing away of former President, Shri Pranab Mukherjee. The country has lost an elder statesman in his death. He rose from humble beginnings to occupy the country’s highest constitutional position through hard work, discipline and dedication. pic.twitter.com/pHFnbklT9O

— Vice President of India (@VPSecretariat) August 31, 2020ಉಪ ರಾಷ್ಟ್ರಪತಿ ವೆಂಕಯ್ಯಾ ನಾಯ್ಡು ಸಹ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದು, "ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರ ನಿಧನದಿಂದ ತೀವ್ರ ದುಃಖತಪ್ತನಾಗಿದ್ದೇನೆ. ಅವರ ಸಾವಿನಿಂದಾಗಿ ಭಾರತ ದೇಶವು ಹಿರಿಯ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಅವರ ಶ್ರಮ, ಶಿಸ್ತು ಮತ್ತು ಸಮರ್ಪಣೆಯ ಭಾವದ ಮೂಲಕ ದೇಶದ ಅತ್ಯುನ್ನತ ಸಾಂವಿಧಾನಿಕ ಸ್ಥಾನವನ್ನು ಪಡೆದುಕೊಳ್ಳವ ಮಟ್ಟಕ್ಕೆ ಏರಿದ್ದರು" ಎಂದು ಪ್ರಶಂಶೆ ವ್ಯಕ್ತಪಡಿಸಿದ್ದಾರೆ.ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಪ್ರಣಬ್ ಮುಖರ್ಜಿ ಅವರ ಸಾವಿಗೆ ಸಂತಾಪ ಸೂಚಿಸಿದ್ದು, "ಭಾರತದ ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಜಿ ಅವರ ನಿಧನದಿಂದಾಗಿ ನಾನು ತೀವ್ರವಾಗಿ ನೊಂದುಕೊಂಡಿದ್ದೇನೆ. ಅವರನ್ನು ಸಮಾಜದ ಎಲ್ಲ ವರ್ಗದ ಜನರು ವ್ಯಾಪಕವಾಗಿ ಗೌರವಿಸುತ್ತಿದ್ದರು. ಅವರ ನಿಧನವು ನನಗೆ ವೈಯಕ್ತಿಕ ನಷ್ಟವಾಗಿದೆ. ಅವರು ಭಾರತದ ಇತಿಹಾಸ, ರಾಜತಾಂತ್ರಿಕತೆ, ಸಾರ್ವಜನಿಕ ನೀತಿ ಮತ್ತು ರಕ್ಷಣೆಯ ಬಗ್ಗೆ ಅಪಾರ ಜ್ಞಾನ ಹೊಂದಿದ್ದರು" ಎಂದಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಹ ಪ್ರಣಬ್‌ ಸಾವಿಗೆ ಸಂತಾಪ ಸೂಚಿಸಿದ್ದು, "ಭಾರತದ ಮಾಜಿ ರಾಷ್ಟ್ರಪತಿ ಭಾರತ ರತ್ನ ಶ್ರೀ ಪ್ರಣಬ್ ಅವರ ನಿಧನದಿಂದಾಗಿ ತೀವ್ರ ದುಖಃವಾಗಿದೆ. ಅವರ ಕುಟುಂಬ ಮತ್ತು ಅಸಂಖ್ಯಾತ ಅನುಯಾಯಿಗಳಿಗೆ ನನ್ನ ಆಳವಾದ ಸಂತಾಪ. ನಮ್ಮ ಇತಿಹಾಸ, ಸಂವಿಧಾನ ಮತ್ತು ಕಾನೂನುಗಳ ಬಗ್ಗೆ ಅವರಿಗಿದ್ದ ಜ್ಞಾನ ಅಪಾರ. ಭಾರತಾಂಭೆ ಸಾಟಿಯಿಲ್ಲದ ರಾಜಕಾರಣಿಯನ್ನು ಕಳೆದುಕೊಂಡಿದೆ" ಎಂದಿದ್ದಾರೆ.
Published by:MAshok Kumar
First published: