ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಶಾಂತಿಯುತ ಪ್ರತಿಭಟನೆಗಳು ಪ್ರಜಾಪ್ರಭುತ್ವದ ಬೇರುಗಳನ್ನು ಗಟ್ಟಿಗೊಳಿಸಲಿದೆ; ಪ್ರಣಬ್ ಮುಖರ್ಜಿ

ಕಳೆದ ಕೆಲವು ದಿನಗಳಿಂದ ಜನಸಾಮಾನ್ಯರು ಅದರಲ್ಲೂ ಮುಖ್ಯವಾಗಿ ಯುವ ಜನ ಬೀದಿಗಳಿದು ಹೋರಾಡಲು ಮುಂದಾಗಿದ್ದಾರೆ. ತಮ್ಮ ದೃಷ್ಟಿಯಲ್ಲಿ ಮುಖ್ಯವಾದ ವಿಷಯಕ್ಕಾಗಿ ಹೋರಾಟದ ಮೂಲಕ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಮೆಚ್ಚುಗೆ ಸೂಚಿಸಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ.

ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ.

  • Share this:
ನವ ದೆಹಲಿ (ಜನವರಿ 23); ಭಿನ್ನ ದ್ವನಿಯನ್ನೂ ಆಲಿಸುವ, ವಾದಿಸುವ ಹಾಗೂ ಭಿನ್ನಾಭಿಪ್ರಾಯಕ್ಕೂ ಅವಕಾಶ ಕಲ್ಪಿಸುವ ಮೂಲಕ ಮಾತ್ರ ಪ್ರಜಾಪ್ರಭುತ್ವ ಅಭಿವೃದ್ಧಿ ಹೊಂದಲು ಸಾಧ್ಯ. ಅಲ್ಲದೆ, ದೇಶದಾದ್ಯಂತ ಪ್ರಸ್ತುತ ನಡೆಯುತ್ತಿರುವ ಶಾಂತಿಯುತ ಪ್ರತಿಭಟನೆಗಳು ಭಾರತದ ಪ್ರಜಾಪ್ರಭುತ್ವದ ಬೇರುಗಳನ್ನು ಮತ್ತಷ್ಟು ಗಟ್ಟಿಗೊಳಿಸಲು ಸಹಾಯ ಮಾಡುತ್ತಿವೆ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಭಿಪ್ರಾಯಪಟ್ಟಿದ್ದಾರೆ.

ಗುರುವಾರ ಚುನಾವಣಾ ಆಯೋಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಪ್ರಣಬ್ ಮುಖರ್ಜಿ, “ಕಳೆದ ಕೆಲವು ದಿನಗಳಿಂದ ಜನಸಾಮಾನ್ಯರು ಅದರಲ್ಲೂ ಮುಖ್ಯವಾಗಿ ಯುವ ಜನ ಬೀದಿಗಳಿದು ಹೋರಾಡಲು ಮುಂದಾಗಿದ್ದಾರೆ. ತಮ್ಮ ದೃಷ್ಟಿಯಲ್ಲಿ ಮುಖ್ಯವಾದ ವಿಷಯಕ್ಕಾಗಿ ಹೋರಾಟದ ಮೂಲಕ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ” ಎಂದು ಅವರು ಮೆಚ್ಚುಗೆ ಸೂಚಿಸಿದ್ದಾರೆ.

ಅಲ್ಲದೆ, ಇದೇ ವೇಳೆ ಭಾರತ ಸಂವಿಧಾನದ ಪ್ರತಿಪಾದನೆ ಮತ್ತು ನಂಬಿಕೆ ವಿಶೇಷವಾಗಿ ಹೃದಯ ಸ್ಪರ್ಶಿಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಸೌದಿ ಅರೆಬಿಯಾದಲ್ಲಿ ಕೆಲಸ ಮಾಡುವ ಕೇರಳ ನರ್ಸ್​ ದೇಹದಲ್ಲಿ ಕೊರೊನಾವೈರಸ್ ಪತ್ತೆ; ಸೂಕ್ತ ಚಿಕಿತ್ಸೆಗೆ ಸಿಎಂ ಪಿಣರಾಯಿ ವಿಜಯನ್ ಮನವಿ
First published: