ರಾಷ್ಟ್ರಪತಿಗಳಿಂದ ನರೇಂದ್ರ ಮೋದಿ ಪ್ರಧಾನಿಯಾಗಿ ನೇಮಕ; ಮೇ 30ರಂದು ಪ್ರಮಾಣ ವಚನ

ಎನ್​ಡಿಎ ಸಂಸದೀಯ ಮಂಡಳಿಯ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ಒಮ್ಮತದಿಂದ ನಾಯಕನಾಗಿ ಆಯ್ಕೆ ಮಾಡಲಾಯಿತು.

Vijayasarthy SN | news18
Updated:May 25, 2019, 11:09 PM IST
ರಾಷ್ಟ್ರಪತಿಗಳಿಂದ ನರೇಂದ್ರ ಮೋದಿ ಪ್ರಧಾನಿಯಾಗಿ ನೇಮಕ; ಮೇ 30ರಂದು ಪ್ರಮಾಣ ವಚನ
ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್
  • News18
  • Last Updated: May 25, 2019, 11:09 PM IST
  • Share this:
ನವದೆಹಲಿ(ಮೇ 25): ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರನ್ನ ನೇಮಕ ಮಾಡಿದ್ದಾರೆ. ಮೇ 30ರಂದು ಪ್ರಧಾನಿ ಅವರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಇದಕ್ಕೂ ಮುನ್ನ, ನಿರೀಕ್ಷೆಯಂತೆ ನರೇಂದ್ರ ಮೋದಿ ಅವರು ಎನ್​ಡಿಎ ಮೈತ್ರಿಕೂಟದ ನಾಯಕನಾಗಿ ಆಯ್ಕೆಯಾದರು. ಇಂದು ನಡೆದ ಬಿಜೆಪಿ ನೇತೃತ್ವದ ಎನ್​ಡಿಎ ಸಂಸದೀಯ ಪಕ್ಷಗಳ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ನಾಯಕನಾಗಿ ಒಮ್ಮತದಿಂದ ಆರಿಸಲಾಯಿತು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಇಂದು ಸಂಸತ್​ನಲ್ಲಿ ನಡೆದ ಎನ್​ಡಿಎ ಸಂಸದೀಯ ಮಂಡಳಿ ಸಭೆಯಲ್ಲಿ ಮೋದಿ ಅವರನ್ನು ನಾಯಕನಾಗಿ ಪ್ರಸ್ತಾಪ ಮಾಡಿದರು. ಹಿರಿಯ ಬಿಜೆಪಿ ಮುಖಂಡರಾದ ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಅವರು ಈ ಪ್ರಸ್ತಾವಕ್ಕೆ ಅನುಮೋದನೆ ನೀಡಿದರು. ಜೊತೆಗೆ, ಶಿವಸೇನೆ, ಜೆಡಿಯು, ಶಿರೋಮಣಿ ಅಕಾಲಿ ದಳ ಮೊದಲಾದ ಬಿಜೆಪಿ ಮಿತ್ರ ಪಕ್ಷಗಳ ಮುಖಂಡರು ಈ ಪ್ರಸ್ತಾವನೆಗೆ ಬೆಂಬಲ ಸೂಚಿಸಿದರು.

ಇದನ್ನೂ ಓದಿ: ರಾಹುಲ್, ಪ್ರಿಯಾಂಕಾ, ಮೋದಿ, ಅಮೇಥಿ ಬಗ್ಗೆ ಸ್ಮೃತಿ ಇರಾನಿ ಏನು ಹೇಳ್ತಾರೆ? ಇಲ್ಲಿದೆ Exclusive ಸಂದರ್ಶನದ ಹೈಲೈಟ್ಸ್

ಬಿಜೆಪಿಯ ಸರ್ವ ಸಂಸದರೂ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಂಸದೀಯ ಮಂಡಳಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, “ಪ್ರಧಾನಿ ಅವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ತತ್ವಕ್ಕೆ ಬದ್ಧರಾಗಿದ್ದರು. ಇದರಿಂದಾಗಿ ನರೇಂದ್ರ ಮೋದಿ ಅವರು ಇನ್ನೂ 5 ವರ್ಷ ಕಾಲ ಪ್ರಧಾನಿಯಾಗಲು ಸಾಧ್ಯವಾಗಿದೆ. ಎಲ್ಲಾ ವರ್ಗಗಳ ಜನರು ಮೋದಿ ಮತ್ತು ಎನ್​ಡಿಎಗೆ ಹೆಚ್ಚಿನ ಬಹುಮತ ನೀಡಿ ಆಶೀರ್ವದಿಸಿದ್ದಾರೆ. ಒಬ್ಬ ಬಡಕುಟುಂಬದಿಂದ ಬಂದ ವ್ಯಕ್ತಿಯು ಪ್ರಧಾನಿಯಾಗುವ ಹಂತಕ್ಕೇರಿದ್ದು ಪ್ರಜಾತಂತ್ರದ ವೈಶಿಷ್ಟ್ಯತೆಯಾಗಿದೆ” ಎಂದು ಬಣ್ಣಿಸಿದರು.

“ಈ ಚುನಾವಣೆಯಲ್ಲಿ ಜನರು ವಂಶಾಡಳಿತ ಹಾಗೂ ಜಾತಿ ಆಧಾರಿತ ರಾಜಕಾರಣವನ್ನು ತಿರಸ್ಕರಿಸಿದ್ದಾರೆ. ಸರಕಾರದ ಕಾರ್ಯಸಾಧನೆ ಮತ್ತು ಅಭಿವೃದ್ಧಿ ಆಧಾರದ ಮೇಲೆ ಜನರು ಮತ ಹಾಕಿದ್ದಾರೆ” ಎಂದು ಈ ವೇಳೆ ಅಮಿತ್ ಶಾ ಅಭಿಪ್ರಾಯಪಟ್ಟರು.

ಆ ನಂತರ ನರೇಂದ್ರ ಮೋದಿ ಅವರು ಸಂಸದೀಯ ಪಕ್ಷಗಳ ಸಭೆಯಲ್ಲಿ ಮಾತನಾಡಿ, ಅಲ್ಪಸಂಖ್ಯಾತರೂ ಸೇರಿ ದೇಶದ ಸಕಲ ಸಮುದಾಯದ ಏಳಿಗೆಗೆ ಶ್ರಮಿಸುವ ಗುರಿ ಇಟ್ಟುಕೊಳ್ಳಲು ಕರೆ ನೀಡಿದರು.

ನಿಮ್ಮ ನ್ಯೂಸ್ 18 ಕನ್ನಡವನ್ನು ಶೇರ್​​ಚಾಟ್​ನಲ್ಲೂ ಹಿಂಬಾಲಿಸಿ
First published:May 25, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading