• Home
 • »
 • News
 • »
 • national-international
 • »
 • Padma Awards: ಇಂದು ಸಂಜೆ ರಾಷ್ಟ್ರಪತಿಗಳಿಂದ ಪದ್ಮ ಪ್ರಶಸ್ತಿ ಪ್ರದಾನ

Padma Awards: ಇಂದು ಸಂಜೆ ರಾಷ್ಟ್ರಪತಿಗಳಿಂದ ಪದ್ಮ ಪ್ರಶಸ್ತಿ ಪ್ರದಾನ

ರಾಷ್ಟ್ರಪತಿ ರಾಮನಾಥ್ ಕೋವಿಂದ್

ರಾಷ್ಟ್ರಪತಿ ರಾಮನಾಥ್ ಕೋವಿಂದ್

ಗಣನೀಯ ಸೇವೆ ಸಲ್ಲಿಸಿದ 128 ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಇಂದು ರಾಷ್ಟ್ರಪತಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

 • Share this:

  ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ  ಪದ್ಮವಿಭೂಷಣ, ಪದ್ಮಭೂಷಣ, ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು (Padma Award) ಇಂದು ರಾಷ್ಟ್ರಪತಿ ರಾಮನಾಥ್​ ಕೋವಿಂದ್ (President Ram Nath Kovind) ​ ಅವರು ನೀಡಲಿದ್ದಾರೆ. ಕಳೆದೆರಡು ತಿಂಗಳ ಹಿಂದೆ 2022ನೇ ಸಾಲಿನ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಘೋಷಿಸಲಾಗಿತ್ತು. ಕಲೆ, ಸಾಮಾಜಿಕ ಕಾರ್ಯ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ ಮತ್ತು ಎಂಜಿನಿಯರಿಂಗ್, ವ್ಯಾಪಾರ ಮತ್ತು ಕೈಗಾರಿಕೆ, ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ ಮತ್ತು ನಾಗರಿಕ ಸೇವೆಯಂತಹ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 128 ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಇಂದು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.


  ರಾಷ್ಟ್ರಪತಿ ಭವನದಲ್ಲಿ ಇಂದು ಸಂಜೆ ಈ ಸಮಾರಂಭ ನಡೆಯಲಿದೆ. ಈ ಬಾರಿ 4 ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಪದ್ಮಶ್ರೀ ಪ್ರಶಸ್ತಿಗಳನ್ನು ಘೋಷಣೆ ಮಾಡಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 34 ಮಹಿಳೆಯರು ಮತ್ತು 10 ಮಂದಿಗೆ ಮರಣೋತ್ತರ ಪದ್ಮ ಪ್ರಶಸ್ತಿ ಘೋಷಿಸಲಾಗಿದೆ.


  ಕರ್ನಾಟಕದ ಐವರಿಗೆ ಪದ್ಮ ಪ್ರಶಸ್ತಿ
  ಕರ್ನಾಟಕದ ಐವರಿಗೆ ಈ ಬಾರಿ ಪದ್ಮ ಪ್ರಶಸ್ತಿ ಘೋಷಿಸಲಾಗಿದೆ. ಸೈನ್ಸ್ ಅಂಡ್ ಇಂಜನಿಯರಿಂಗ್ ಕ್ಷೇತ್ರದ ಸೇವೆಗಾಗಿ ಸುಬ್ಬಣ್ಣ ಅಯ್ಯಪನ್, ಕಲಾ ಕ್ಷೇತ್ರಕ್ಕೆ ಎಚ್.ಆರ್. ಕೇಶವಮೂರ್ತಿ, ನಾವಿನ್ಯತೆ ಕ್ಷೇತ್ರಕ್ಕೆ ಅಬ್ದುಲ್ ಖಾದರ್ ನಡಕಟ್ಟಿನ್ , ಕೃಷಿ ಕ್ಷೇತ್ರದ ಸಾಧನೆಗಾಗಿ ಅಮೈ ಮಹಾಲಿಂಗ ನಾಯ್ಕ ಅವರಿಗೆ ಪದ್ಮ ಪ್ರಶಸ್ತಿ ನೀಡಲಾಗಿದ್ದು, ಸಿದ್ದಲಿಂಗಯ್ಯ ಅವರಿಗೆ ಮರಣೋತ್ತರ ಪದ್ಮ ಪ್ರಶಸ್ತಿ ಘೋಷಿಸಲಾಗಿದೆ


  ಮರಣೋತ್ತರ ಪ್ರಶಸ್ತಿ
  ಜನರಲ್ ಬಿಪಿನ್ ರಾವತ್ ಹಾಗೂ ಯೂಪಿ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಹಾಗೂ ಉತ್ತರ ಪ್ರದೇಶದ ರಾಧೇಶ್ಯಾಮ್ ಖೇಮ್ಕಾ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಕಲಾ ಕ್ಷೇತ್ರಕ್ಕೆ ಪ್ರಶಸ್ತಿ ಮಹಾರಾಷ್ಟ್ರದ ಪ್ರಭಾ ಅತ್ರೆಗೂ ಮರಣೋತ್ತರ ಪ್ರಶಸ್ತಿ ಘೋಷಿಸಲಾಗಿದೆ.


  ಇದನ್ನೂ ಓದಿ:  Punjab Cabinet: ಆಪ್ ಸರ್ಕಾರದ 10 ಸಚಿವರಲ್ಲಿ ನಾಲ್ವರು ದಲಿತರು!


  ಪದ್ಮಶ್ರೀ ಸ್ವೀಕರಿಸಲಿರುವವರ ಪಟ್ಟಿ
  ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ, ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಮತ್ತು ಎಸ್‌ಐಐ ಎಂಡಿ ಸೈರಸ್ ಪೂನಾವಾಲಾ, ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಅವರಿಗೂ ಪದ್ಮಭೂಷಣ ಪ್ರಶಸ್ತಿ ಒಲಿದಿದೆ. ಒಲಿಂಪಿಕ್​ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ, ಪ್ರಮೋದ್ ಭಗತ್ ಮತ್ತು ವಂದನಾ ಕಟಾರಿಯಾ ಮತ್ತು ಗಾಯಕ ಸೋನು ನಿಗಮ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ.


  ಇದನ್ನೂ ಓದಿ:  2ನೇ ಬಾರಿಗೆ ಮಣಿಪುರದಲ್ಲಿ ಬಿರೇನ್ ಸಿಂಗ್ ಆಡಳಿತ, ಇಂದು ಸಂಜೆ CM ಆಗಿ ಪ್ರಮಾಣ ವಚನ


  ಪ್ರಶಸ್ತಿ ನಿರಾಕರಿಸಿದ್ದ ಪಶ್ಚಿಮ ಬಂಗಾಳದ ಮೂವರು
  ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ, ಗಾಯಕಿ ಸಂಧ್ಯಾ ಮುಖರ್ಜಿ ಮತ್ತು ತಬಲಾ ವಾದಕ ಅನಿಂದ್ಯಾ ಚಟರ್ಜಿ ಅವರು ಪ್ರಶಸ್ತಿಗಳನ್ನು ಸ್ವೀಕರಿಸಲು ನಿರಾಕರಿಸಿದರು. ಇನ್ನು ಪ್ರಶಸ್ತಿಗೆ ಸ್ವೀಕರಿಸಲು ಅರ್ಹ ವಯಸ್ಸು ನನ್ನದಲ್ಲ ಎಂದಿದ್ದ ಗಾಯಕಿ ಸಂಧ್ಯಾ ಮುಖರ್ಜಿ ಕಳೆದ ತಿಂಗಳು ಕೊನೆಯುಸಿರೆಳೆದಿದ್ದರು

  Published by:Seema R
  First published: