President Poll: ದೇವೇಗೌಡರು ರಾಷ್ಟ್ರಪತಿ ಆಗಲ್ಲ; ಮಗ, ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

ಹೆಚ್. ಡಿ ದೇವೇಗೌಡ ಅವರಿಗೆ ಜೀವನದಲ್ಲಿ ಒಮ್ಮೆ ಸ್ವತಂತ್ರ ಸರ್ಕಾರ ಬರಬೇಕು ಎಂಬ ಆಸೆ ಇದೆ ಎಂದು ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

 • Share this:
  ಬೆಂಗಳೂರು: ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ದೆಹಲಿಯಲ್ಲಿ ಚರ್ಚೆ ಆಗಿದೆ. ಮಮತಾ ಬ್ಯಾನರ್ಜಿಯವರು (Mamata Banerjee) ನಮ್ಮ ಕುಟುಂಬದ ಬಗ್ಗೆ ಗೌರವ ಇಟ್ಟು ಕರೆ ಮಾಡಿದ್ದರು. 17 ಪಕ್ಷಗಳು ಸಭೆಯಲ್ಲಿ ಭಾಗವಹಿಸಿದ್ದವು. ಆದರೆ ಸಭೆಯಲ್ಲಿ ಯಾವುದೇ ಅಭ್ಯರ್ಥಿ ಫೈನಲ್ ಅಗಿಲ್ಲ.20 ರಂದು ಮತ್ತೊಂದು ಸುತ್ತಿನ ಸಭೆ ಇದೆ. ಅಂದು ಅಭ್ಯರ್ಥಿ ಆಯ್ಕೆ ಫೈನಲ್ ಮಾಡಲಾಗುತ್ತೆ. ರಾಷ್ಟ್ರಪತಿ ಚುನಾವಣೆಗೆ (President Polls) ದೇವೇಗೌಡರ ಹೆಸರು ಪ್ರಸ್ತಾಪವೇ ಆಗಿಲ್ಲ. ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧೆ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಸ್ಪಷ್ಟಪಡಿಸಿದ್ದಾರೆ.   ಹೆಚ್. ಡಿ ದೇವೇಗೌಡ ಅವರಿಗೆ (HD Deve Gowda) ಜೀವನದಲ್ಲಿ ಒಮ್ಮೆ ಸ್ವತಂತ್ರ ಸರ್ಕಾರ ಬರಬೇಕು ಎಂಬ ಆಸೆ ಇದೆ ಎಂದು ಅವರು ತಿಳಿಸಿದ್ದಾರೆ.

  ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24ರಂದು ಮುಕ್ತಾಯವಾಗಲಿದೆ. ಜುಲೈ 18ರಂದು ಹೊಸ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಇದೀಗ ಅಚ್ಚರಿಯ ನಡೆಯೊಂದರಲ್ಲಿ ಮಾಜಿ ಪ್ರಧಾನಿ, ಕರ್ನಾಟಕದ ಹೆಚ್.ಡಿ.ದೇವೇಗೌಡ ಅವರು ರಾಷ್ಟ್ರಪತಿ ಆಗಲಿದ್ದಾರಾ? ಎಂಬ ಪ್ರಶ್ನೆಯೊಂದು ದೆಹಲಿಯಿಂದ ರವಾನೆಯಾಗಿತ್ತು. ಹೆಚ್ ಡಿ ದೇವೇಗೌಡ ಅವರ ಹೆಸರು ರಾಷ್ಟ್ರಪತಿ ರೇಸ್​ನಲ್ಲಿ ತೀವ್ರ ಮುನ್ನೆಲೆಗೆ ಬಂದಿತ್ತು.

  ಕರ್ನಾಟಕದಿಂದ ಇವರಿಗೆ ಮಾತ್ರ ಆಹ್ವಾನ!
  ಈ ಸಭೆಗೆ ಕರ್ನಾಟಕದಿಂದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೂ ಆಹ್ವಾನ ನೀಡಿದ್ದರು ದೀದಿ.

  ಇದನ್ನೂ ಓದಿ: President Poll: ದೇವೇಗೌಡರು ರಾಷ್ಟ್ರಪತಿ ಆಗ್ತಾರಾ? ಮುನ್ನೆಲೆಗೆ ಬಂದಿದೆ ಹೆಸರು, ಹೆಚ್ಚಿದ ಕುತೂಹಲ

  ಶರದ್ ಪವಾರ್ ಸ್ಪರ್ಧಿಸಲ್ಲ
  ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಬೆಂಬಲಿತ ಅಭ್ಯರ್ಥಿಯಾಗಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿತ್ತು. ಇಷ್ಟು ದಿನ ಶರದ್ ಪವಾರ್ ರಾಷ್ಟ್ರಪತಿ ಅಭ್ಯರ್ಥಿ ಎಂದೇ ಬಿಂಬಿತವಾಗುತ್ತಿತ್ತು. ಆದರೆ "ನಾನು ರಾಷ್ಟ್ರಪತಿ ಚುನಾವಣೆಯ ರೇಸ್‌ನಲ್ಲಿ ಇಲ್ಲ, ನಾನು ರಾಷ್ಟ್ರಪತಿ ಹುದ್ದೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗುವುದಿಲ್ಲ" ಅಂತ 81 ವರ್ಷದ ಮಾಜಿ ರಕ್ಷಣಾ ಸಚಿವ, ಹಿರಿಯ ರಾಜಕಾರಣಿ ಶರದ್ ಪವಾರ್ ಹೇಳಿದ್ದಾರೆ.

  ಇದನ್ನೂ ಓದಿ: Heeraben Modi: ನನ್ನಮ್ಮ ಅಂದ್ರೆ ನಂಗೆ ಎಷ್ಟು ಇಷ್ಟ ಅಂದ್ರೆ..! ಪ್ರಧಾನಿ ಮೋದಿ ಬರೆದಿದ್ದಾರೆ ಓದಿ

  ಗಾಂಧಿ ಮೊಮ್ಮಗನ ಹೆಸರು ಪ್ರಸ್ತಾಪ
  ಇನ್ನು ವಿರೋಧ ಪಕ್ಷಗಳು ಒಗ್ಗೂಡಿ 2022 ರ ರಾಷ್ಟ್ರಪತಿ ಚುನಾವಣೆಗೆ ಜಂಟಿ ಅಭ್ಯರ್ಥಿಯನ್ನು ಘೋಷಿಸಲು ತಮ್ಮ ಪ್ರಯತ್ನಗಳನ್ನು ಮುಂದುವರೆಸುತ್ತಿದ್ದು, ಅವರಲ್ಲಿ ಅನೇಕರು ಮಹಾತ್ಮ ಗಾಂಧಿ ಮತ್ತು ಸಿ ರಾಜಗೋಪಾಲಾಚಾರಿ ಅವರ ಮೊಮ್ಮಗ ಗೋಪಾಲಕೃಷ್ಣ ದೇವದಾಸ್ ಗಾಂಧಿ ಅವರನ್ನು ಸಂಪರ್ಕಿಸಿದ್ದಾರೆ.

  ಬಂಗಾಳದ ರಾಜ್ಯಪಾಲರಾಗಿ ಸೇವೆ
  ಸುದ್ದಿ ಸಂಸ್ಥೆ ಪಿಟಿಐ ವರದಿ ಪ್ರಕಾರ, ಹಲವಾರು ವಿರೋಧ ಪಕ್ಷದ ನಾಯಕರು ಗಾಂಧಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ, ರಾಷ್ಟ್ರಪತಿ ಹುದ್ದೆಗೆ ತಮ್ಮ ಜಂಟಿ ಅಭ್ಯರ್ಥಿಯಾಗುವಂತೆ ಒತ್ತಾಯಿಸಿದ್ದಾರೆ. 2004 ರಿಂದ 2009 ರವರೆಗೆ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ಗೋಪಾಲಕೃಷ್ಣ ದೇವದಾಸ್ ಗಾಂಧಿ ಅವರು ಸ್ವಲ್ಪ ಕಾಲಾವಕಾಶ ಕೋರಿದ್ದಾರೆ ಎನ್ನಲಾಗಿದೆ.

  2017 ರಲ್ಲಿ, 77 ವರ್ಷದ ಗಾಂಧಿ ಅವರು ಉಪರಾಷ್ಟ್ರಪತಿ ಹುದ್ದೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗಿದ್ದರು ಆದರೆ ಚುನಾವಣೆಯಲ್ಲಿ ಎಂ ವೆಂಕಯ್ಯ ನಾಯ್ಡು ವಿರುದ್ಧ ಸೋತಿದ್ದರು. ಪಿಟಿಐ ಪ್ರಕಾರ, ಕಳೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಗಾಂಧಿಯವರ ಹೆಸರಿನ ಬಗ್ಗೆ ಈಗಾಗಲೇ ಒಮ್ಮತವಿದ್ದ ಕಾರಣ ಅವರು ರಾಷ್ಟ್ರಪತಿ ಹುದ್ದೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಅವರೇ ನಿಲ್ಲಬಹುದು ಎಂದು ಹೇಳಲಾಗುತ್ತಿದೆ.
  Published by:guruganesh bhat
  First published: