President Polls: ರಾಷ್ಟ್ರಪತಿ ಆಗ್ತಾರಾ ಶರದ್ ಪವಾರ್? ವಿವಿಧ ಪಕ್ಷಗಳಿಂದ ಬೆಂಬಲ

ರಾಷ್ಟ್ರಪತಿ ಚುನಾವಣೆಯಲ್ಲಿ ಯಶವಂತ್ ಸಿನ್ಹಾ ಸಹ ಕಣಕ್ಕಿಳಿಸುವ ಸಾಧ್ಯತೆ ಇದೆ. ಜೂನ್ 15 ರಂದು ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಯಶವಂತ್ ಸಿನ್ಹಾ ಅವರ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಶರದ್ ಪವಾರ್

ಶರದ್ ಪವಾರ್

 • Share this:
  ಭಾರತಕ್ಕೆ ಹೊಸ ರಾಷ್ಟ್ರಪತಿ ಆಯ್ಕೆಯಾಗುವ ಕಾಲ ಬಂದೇಬಿಟ್ಟಿದೆ. ಹೊಸ ರಾಷ್ಟ್ರಪತಿ ಯಾರಾಗಲಿದ್ದಾರೆ (President Polls) ಎಂಬ ಕುತೂಹಲ ಎಲ್ಲರಲ್ಲೂ ಹುಟ್ಟಿಕೊಂಡಿದೆ. ಬಿಜೆಪಿ ಎನ್​ಡಿಎ ಮೈತ್ರಿಕೂಟದಿಂದ (NDA) ಯಾರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಿದೆ? ಕಾಂಗ್ರೆಸ್ ಯಾರಿಗೆ (Congress President Candidate) ಮಣೆ ಹಾಕಲಿದೆ? ಇತರ ಪಕ್ಷಗಳಿಂದ ಯಾರಾದರೂ ಸ್ಪರ್ಧಿಸಲಿದ್ದಾರಾ? ಹೀಗೆಲ್ಲ ಪ್ರಶ್ನೆಗಳ ಮೇಲೆ ಪ್ರಶ್ನೆಗಳು ಹುಟ್ಟಿಕೊಂಡಿವೆ.  ಈ ನಡುವೆಯ ರಾಷ್ಟ್ರಪತಿ ಸ್ಥಾನಕ್ಕೆ ಶರದ್ ಯಾದವ್ (Sharad Pawar) ಹೆಸರು ಕೇಳಿಬಂದಿದೆ. ರಾಷ್ಟ್ರಪತಿ ಹುದ್ದೆಗೆ ಶರದ್ ಪವಾರ್ ಸ್ಪರ್ಧೆಗೆ ಕಾಂಗ್ರೆಸ್ ತನ್ನ ಬೆಂಬಲವನ್ನು ನೀಡಿದೆ ಎಂದು ವರದಿಯಾಗಿದೆ. 

  ರಾಷ್ಟ್ರಪತಿ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳು ಸರಣಿ ಸಭೆಗಳನ್ನು ನಡೆಸುತ್ತಿವೆ. ಈ ಸಭೆಗಳಲ್ಲಿ ಒಮ್ಮತದಿಂದ ರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಕುರಿತು ಚರ್ಚೆ ತೀರ್ವವಾಗಿ ನಡೆಯುತ್ತಿದೆ ಎಂದು ವರದಿಯಾಗಿದೆ. ಅದರಲ್ಲೂ ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರನ್ನು ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಇಳಿಸಲು ವಿರೋಧ ಪಕ್ಷಗಳು ಮುಂದಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

  ಮಲ್ಲಿಕಾರ್ಜುನ ಖರ್ಗೆ- ಶರದ್ ಪವಾರ್ ಭೇಟಿ
  ಕಳೆದ ಗುರುವಾರ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶರದ್ ಪವಾರ್ ಮುಂಬೈನಲ್ಲಿ ಭೇಟಿಯಾಗಿದ್ದರು. ಈ ಭೇಟಿಯಲ್ಲಿ ಕಾಂಗ್ರೆಸ್ ಬೆಂಬಲವನ್ನು ಮಲ್ಲಿಕಾರ್ಜುನ ಖರ್ಗೆ ಖಚಿತಪಡಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರೊಂದಿಗೆ ಶರದ್ ಪವಾರ್ ಸ್ಪರ್ಧೆಯ ಕುರಿತು ಮಾತನಾಡಿದ್ದಾರೆ ಎಂದು ಹೇಳಲಾಗಿದೆ.

  ಆಮ್​ ಆದ್ಮಿಯಿಂದಲೂ ಬೆಂಬಲ
  ಅಲ್ಲದೇ ಭಾನುವಾರ ಶರದ್ ಪವಾರ್​ಗೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಸಹ ಕರೆ ಮಾಡಿ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ.

  ಇದನ್ನೂ ಓದಿ: India-China Border: ಭಾರತ-ಚೀನಾ ಗಡಿಯ ಕೊನೆಯ ಟೀ ಸ್ಟಾಲ್! ಚಹಾಗೋಸ್ಕರ ಮುಗಿಬೀಳ್ತಾರೆ ಜನ

  ರಾಷ್ಟ್ರಪತಿ ಚುನಾವಣೆಗೆ ಜಂಟಿ ಕಾರ್ಯತಂತ್ರದ ಕುರಿತು ಚರ್ಚಿಸಲು ಬುಧವಾರ ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಪ್ರತಿಪಕ್ಷಗಳ ಸಭೆಗೆ ಕರೆದಿರುವ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜೊತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೂರವಾಣಿಯಲ್ಲಿ ಮಾತನಾಡಿದ್ದಾರೆ ಎಂದು ವರದಿಯಾಗಿದೆ. ಇತ್ತ ಉದ್ಧವ್ ಠಾಕ್ರೆ ಸಹ ಶರದ್ ಪವಾರ್​ಗೆ ಬೆಂಬಲ ನೀಡುವ ಸಾಧ್ಯತೆಯಿದೆ.

  ಮೈತ್ರಿಕೂಟ ರಚನೆಯಲ್ಲಿ ಸಿದ್ಧಹಸ್ತ ಶರದ್ ಪವಾರ್
  ಭಾರತದ ಮುಂದಿನ ರಾಷ್ಟ್ರಪತಿ ಆಯ್ಕೆಮಾಡಲು ಜುಲೈ 18 ರಂದು ಚುನಾವಣೆ ನಡೆಯಲಿದೆ. ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಕೊನೆಗೊಳ್ಳಲಿದೆ. ಭಾರತದ ಅತ್ಯಂತ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಶರದ್ ಪವಾರ್ ಅವರು ಅನೇಕ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳಲು ಸಿದ್ಧಹಸ್ತರಾಗಿದ್ದಾರೆ.  ಬಿಜೆಪಿಯ ಸೈದ್ಧಾಂತಿಕವಾಗಿ ವಿರೋಧ ಪಕ್ಷಗಳಾದ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ಗಳನ್ನು ಒಟ್ಟುಗೂಡಿಸಿ ಮಹಾರಾಷ್ಟ್ರದ ಆಡಳಿತ ಒಕ್ಕೂಟವನ್ನು ರಚಿಸಿದ್ದರು.

  ಇದನ್ನೂ ಓದಿ: Student Home Work: ಅಮೆರಿಕಾದ ಶಾಲೆಗಳಲ್ಲೂ ಹೋಮ್​ವರ್ಕ್ ಇರುತ್ತಾ? ಓದಿದವರೇ ಹೇಳ್ತಾರೆ ಕೇಳಿ

  ಯಶವಂತ್ ಸಿನ್ಹಾ ಸ್ಪರ್ಧಿಸಲಿದ್ದಾರಾ?
  ರಾಷ್ಟ್ರಪತಿ ಚುನಾವಣೆಯಲ್ಲಿ ಯಶವಂತ್ ಸಿನ್ಹಾ ಸಹ ಕಣಕ್ಕಿಳಿಸುವ ಸಾಧ್ಯತೆ ಇದೆ. ಜೂನ್ 15 ರಂದು ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಯಶವಂತ್ ಸಿನ್ಹಾ ಅವರ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಯಶವಂತ್ ಸಿನ್ಹಾ ಅವರ ಉಮೇದುವಾರಿಕೆಗೆ ಯಾವುದೇ ವಿರೋಧವಿದ್ದಲ್ಲಿ ಸರ್ವಪಕ್ಷ ಸಭೆಯ ಮುಂದೆ ಅವರ ಬಳಿ ಇನ್ನೂ ಒಂದೆರಡು ಹೆಸರುಗಳಿವೆ ಎಂದು ಮೂಲಗಳು ತಿಳಿಸಿವೆ.
  Published by:guruganesh bhat
  First published: