ಗಾಂಧೀನಗರ: ಪ್ರಧಾನಿ ನರೇಂದ್ರ ಮೋದಿ ( Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಆರೋಗ್ಯದಲ್ಲಿ ಏರುಪೇರಾಗಿದ ಹಿನ್ನೆಲೆ ಅವರನ್ನು ಗುಜರಾತ್ನ (Gujarat) ಅಹಮದಾಬಾದ್ (Ahamadabad) ನಗರದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮೋದಿ ಅವರು ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಯೋಗ ಕ್ಷೇಮವವನ್ನು ವಿಚಾರಿಸಿದ್ದಾರೆ. ಇಂದು ಬೆಳಗ್ಗೆ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಕೂಡಲೇ ಅವರನ್ನು ಅಹಮದಾಬಾದ್ನ ಯುಎನ್ ಮೆಹ್ತಾಆಸ್ಪತ್ರೆಗೆ (UN Mehtha Hospital) ದಾಖಲಿಸಲಾಗಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಮೋದಿ ಅವರು ಆಸ್ಪತ್ರೆಗೆ ಭೇಟಿ ನೀಡಿ ತಾಯಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಮೋದಿ ಅವರಿಗೆ ವೈದ್ಯರು ಹೀರಾಬೆನ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.
ಮೋದಿ ತಾಯಿ ಚೇತರಿಕೆಗೆ ರಾಹುಲ್ ಗಾಂಧಿ ಟ್ವೀಟ್
ಇನ್ನೂ ಆಸ್ಪತ್ರೆಯ ಸುತ್ತಾಮುತ್ತ ಹೆಚ್ಚಿನ ಭದ್ರತೆ ವಹಿಸಲಾಗಿದ್ದು, ರಾಜಕೀಯ ನಾಯಕರು ಹೀರಾಬೆನ್ ಶೀಘ್ರ ಗುಣಮುಖರಾಗಲಿ ಹಾರೈಸುತ್ತಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೂಡ ಟ್ವೀಟ್ ಮಾಡಿದ್ದು, ತಾಯಿ ಮತ್ತು ಮಗನ ನಡುವಿನ ಪ್ರೀತಿ ಶಾಶ್ವತ ಮತ್ತು ಅಮೂಲ್ಯವಾದುದು. ಮೋದಿ ಜೀ, ಈ ಕಷ್ಟದ ಸಮಯದಲ್ಲಿ ನನ್ನ ಪ್ರೀತಿ ಮತ್ತು ಬೆಂಬಲ ನಿಮ್ಮೊಂದಿಗಿದೆ. ನಿಮ್ಮ ತಾಯಿ ಹೀರಾಬೆನ್ ಮೋದಿ ಅವರು ಬೇಗ ಗುಣಮುಖರಾಗಲಿ ಎಂದು ತಿಳಿಸಿದ್ದಾರೆ.
एक मां और बेटे के बीच का प्यार अनन्त और अनमोल होता है।
मोदी जी, इस कठिन समय में मेरा प्यार और समर्थन आपके साथ है। मैं आशा करता हूं आपकी माताजी जल्द से जल्द स्वस्थ हो जाएं।
— Rahul Gandhi (@RahulGandhi) December 28, 2022
ಮೋದಿ ತಾಯಿ ಶೀಘ್ರ ಗುಣಮುಖರಾಗಲಿ ಅಂದ ಖರ್ಗೆ
ಮತ್ತೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ ಮತ್ತು ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಟ್ವೀಟ್ ಮಾಡಿದ್ದಾರೆ.
प्रधानमंत्री @narendramodi जी की माताजी के स्वास्थ्य लाभ की हम कामना करते हैं।
आशा है कि वे जल्द से जल्द स्वस्थ हो जाएँ।
— Mallikarjun Kharge (@kharge) December 28, 2022
ಮಂಗಳವಾರ ಮೋದಿ ಸಹೋದರ ಕುಟುಂಬಸ್ಥರಿಗೆ ಅಪಘಾತ
ಮಂಗಳವಾರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಕುಟುಂಬದವರ ಕಾರು ಮೈಸೂರಿನ ಕಡಕೊಳ ಬಳಿ ಅಪಘಾತಕ್ಕೀಡಾಗಿತ್ತು. ಸದ್ಯ ಅವರು ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಮೋದಿಯವರ ತಾಯಿಯ ಆರೋಗ್ಯವೂ ಹದಗೆಟ್ಟಿದೆ.
ತಾಯಿ ಚೇತರಿಕೆಗಾಗಿ ಚಾಮುಂಡಿ ಬೆಟ್ಟಕ್ಕೆ ಪ್ರಹ್ಲಾದ್ ಜೋಶಿ ಭೇಟಿ
ಇದೀಗ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಪ್ರಹ್ಲಾದ್ ಮೋದಿ ಮತ್ತು ಕುಟುಂಬಸ್ಥರು, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ಅಲ್ಲದೇ ತಾಯಿ ಹೀರಾಬೆನ್ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: PM Modi Mother Health Updates: ಹದಗೆಟ್ಟ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಮೋದಿ ಆರೋಗ್ಯ, ಆಸ್ಪತ್ರೆಗೆ ದಾಖಲು
ಈ ವರ್ಷದ ಜೂನ್ನಲ್ಲಿ ಹೀರಾಬೆನ್ ಅವರು 100ನೇ ವಸಂತಕ್ಕೆ ಕಾಲಿಟ್ಟಿದ್ದರು. ಈ ವೇಳೆ ತಾಯಿಯ ಪಾದಪೂಜೆ ಮಾಡಿ ಮೋದಿ ಅವರು ಆಶೀರ್ವಾದ ಪಡೆದುಕೊಂಡಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ