ಚಂಢೀಘಡ (ಮೇ 16); ಕೇಂದ್ರ ಸರ್ಕಾರದ ರೈತ ವಿರೋಧಿ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಕಳೆದ 6 ತಿಂಗಳಿನಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ಪಂಜಾಬ್‌ನಲ್ಲಿ ಕಳೆದ ಸೆಪ್ಟಂಬರ್ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಈ ಬಗ್ಗೆ ತಲೆ ಕೆಡಿಸಿಕೊ ಳ್ಳುತ್ತಿಲ್ಲ. ಇನ್ನೂ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸಹ ಈ ಕಾನೂನುಗಳನ್ನು ಬೆಂಬಲಿಸುತ್ತಿದ್ದಾರೆ. ಹೀಗಾಗಿ ಕಳೆದ ಹಲವು ತಿಂಗಳುಗಳಿಂದ ರೈತರು ಸಿಎಂ ಮನೋಹರ್ ಲಾಲ್ ಖಟ್ಟರ್ ಕಾರ್ಯಕ್ರಮದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದೂ ಸಹ ಅವರು ಹಿಸ್ಸಾರ್ ಜಿಲ್ಲೆಗೆ ಭೇಟಿ ನೀಡುವುದರ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರೈತರ ಮೇಲೆ ಪೊಲೀಸರು ಲಾಠಿಚಾರ್ಚ್ ಮಾಡಿದ್ದಾರೆ. ಇದರಲ್ಲಿ ಹಲವು ರೈತರು ಗಾಯಗೊಂಡಿದ್ದಾರೆ.
ಪೊಲೀಸರು ರೈತರ ವಿರುದ್ಧ ಲಾಠಿ ಚಾರ್ಚ್ ಮಾಡಿದ್ದಾರೆ, ಅಶ್ರುವಾಯು ಪ್ರಯೋಗದ ಜೊತೆಗೆ ಪ್ಲಾಸ್ಟಿಕ್ ಗುಂಡುಗಳನ್ನು ಹಾರಿಸಿದ್ದಾರೆ ಮತ್ತು ಹಲವಾರು ಪ್ರತಿಭಟನಾ ಕಾರರನ್ನು ಬಂಧಿಸಿದ್ದಾರೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ. ಬ್ಯಾರಿಕೇಡ್‌ಗಳನ್ನು ತೆಗೆದ ರೈತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಬಳಸಿದ್ದಾರೆ.ಹಲವು ರೈತರನ್ನು ಬಂಧಿಸಲಾಗಿದೆ.
This happened in Haryana's Hisar today. tear gas shells fired at protesting farmers while they were protesting against CM Manohar Lal Khattar who visited the district to inaugurate a covid hospital. https://t.co/TiYV5zVDNu pic.twitter.com/465wSlmFPX
— Mohammad Ghazali (@ghazalimohammad) May 16, 2021
ಘಟನೆಯ ನಂತರ ಸುಮಾರು ಎರಡು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ 9 ಯನ್ನು ರೈತರು ತಡೆದಿದ್ದರು. ಹಿಸಾರ್‌ಗೆ ಆಗಮಿಸಿದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ಗುರ್ನಮ್ ಸಿಂಗ್ ಚಾರುಣಿ, ಬಂಧಿಸಿರುವ ಎಲ್ಲ ರೈತರನ್ನು ಬಿಡುಗಡೆ ಮಾಡದಿದ್ದರೆ, ಪ್ರತಿಭಟನಾಕಾರರು ಹರಿಯಾಣದ ಎಲ್ಲಾ ಪೊಲೀಸ್ ಠಾಣೆಗಳನ್ನು ಘೇರಾವ್ ಹಾಕಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
The Haryana govt announced extending the lockdown at a time when CM is on a inauguration spree https://t.co/Ghlh7vj0ru
— Mohammad Ghazali (@ghazalimohammad) May 16, 2021
ಇದನ್ನೂ ಓದಿ: ಸುಳ್ಳು ಅತ್ಯಾಚಾರ ಕೇಸ್ನಲ್ಲಿ 31 ವರ್ಷ ಜೈಲು ಶಿಕ್ಷೆ; ನೂರಾರು ಕೋಟಿ ರೂ. ಪರಿಹಾರ ನೀಡಿದ ಕೋರ್ಟ್!
"ಅವರು ಉದ್ದೇಶಪೂರ್ವಕವಾಗಿ ಜಿಲ್ಲೆಗೆ ಬರುತ್ತಿದ್ದಾರೆ. ಅವರು ಕೊರೊನಾ ಹರಡುತ್ತಿದ್ದಾರೆ ಮತ್ತು ಅದಕ್ಕಾಗಿ ನಮ್ಮನ್ನು ದೂಷಿಸುತ್ತಿದ್ದಾರೆ" ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ಗುರ್ನಮ್ ಸಿಂಗ್ ಚಾರುಣಿ ಹಿಸಾರ್‌ಗೆ ಬರುವ ಮೊದಲು ವಿಡಿಯೋ ಸಂದೇಶದಲ್ಲಿ ಹೇಳಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ