ಪಶ್ಚಿಮ ಬಂಗಾಳದಲ್ಲಿ ಪೌರತ್ವ ಕಾಯ್ದೆ ವಿರುದ್ಧ ತೀವ್ರಗೊಂಡ ಪ್ರತಿಭಟನೆ: ಹಲವೆಡೆ ಹಿಂಸಾಚಾರ; ಇಂಟರ್​​ನೆಟ್​ ಸ್ಥಗಿತ

ಇನ್ನು ಸಂವಿಧಾನ ತಜ್ಞರ ಪ್ರಕಾರ, ರಾಜ್ಯ ಸರ್ಕಾರಗಳಿಗೆ ಪೌರತ್ವ ಕಾಯ್ದೆ ಜಾರಿಗೆ ಸಂಬಂಧಿಸಿದಂತೆ ನಿರ್ಣಾಯಕ ಪಾತ್ರವಿಲ್ಲ. ಪಂಜಾಬ್, ಕೇರಳ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ತೆಗೆದುಕೊಂಡ ನಿರ್ಧಾರಗಳಿಗೆ ಯಾವುದೇ ಕಾನೂನಾತ್ಮಕ ಮಾನ್ಯತೆ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪೌರತ್ವದ ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ

ಪೌರತ್ವದ ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ

 • Share this:
  ನವದೆಹಲಿ(ಡಿ.15): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ಮಾಡಲೋರಟ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಭಾರತದ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಮುಂದುವರೆದಿದೆ. ಈ ಪ್ರತಿಭಟನೆ ಪಶ್ಚಿಮ ಬಂಗಾಳಕ್ಕೂ ವಿಸ್ತರಣೆಯಾಗಿದ್ದು, ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾ ಸ್ವರೂಪಪವೀಗ ಹಿಂಸಾಚರಕ್ಕೆ ತಿರುಗಿದೆ. ಹಾಗಾಗಿ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರವೂ ರಾಜ್ಯದ ಹಲವು ಜಿಲ್ಲೆಗಳಲ್ಲಿ 24 ಗಂಟೆಗಳ ಕಾಲ ಇಂಟರ್‌ನೆಟ್ ಸ್ಥಗಿತಗೊಳಿ ಆದೇಶಿಸಿದೆ.

  ಪಶ್ಚಿಮ ಬಂಗಾಳದ ಮಾಲ್ದಾ, ಮುರ್ಶಿದಾಬಾದ್, ಉತ್ತರ ದಿನಜ್‌ಪುರದಲ್ಲಿ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾಕಾರರು ರೈಲು ತಡೆದು ಕಲ್ಲು ತೂರಾಟ ನಡೆಸಿದ್ಧಾರೆ. ರಾಷ್ಟ್ರೀಯ ಹೆದ್ದಾರಿಗಳ ಟೋಕ್​​ ಪ್ಲಾಜಾ ಧ್ವಂಸಕ್ಕೆ ಯತ್ನಿಸಲಾಗಿದೆ. ಮುರ್ಶಿದಾಬಾದ್‌ನಲ್ಲಿ 10-15 ಬಸ್‌ಗಳಿಗೆ ಬೆಂಕ ಹಚ್ಚಲಾಗಿದೆ. ಗಲಭೆ ಪೀಡಿತ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ಥ್ ಕೈಗೊಳ್ಳಲಾಗಿದೆ. ಹಾಗೆಯೇ ಪರಿಸ್ಥಿತಿ ಬಿಗಡಾಯಿಸುತ್ತಿರುವ ಕಡೆ ಎರಡು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

  ದೇಶಾದ್ಯಂತ ತೀವ್ರ ಗಲಭೆಗೆ ಕಾರಣದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಕೇರಳ ಮತ್ತು ಪಂಜಾಬ್ ಸರ್ಕಾರಗಳು ವಿರೋಧ ವ್ಯಕ್ತಪಡಿಸಿವೆ. ಹಾಗೆಯೇ ಪಶ್ಚಿಮ ಬಂಗಾಳ ಸರ್ಕಾರ ಕೂಡ ತನ್ನ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಯ್ದೆ ಜಾರಿಯಾಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಬೆನ್ನಲೇ ಸಿಎಂ ಮಮತಾ ಬ್ಯಾನರ್ಜಿ ಈ ನಿರ್ಧಾರ ಘೋಷಣೆ ಮಾಡಿದ್ದಾರೆ.

  ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಮತ್ತು ವಿಪಕ್ಷ ನಾಯಕ ಸ್ಥಾನದ ಮೇಲೆ ಕಾಂಗ್ರೆಸ್​ ನಾಯಕರ ಕಣ್ಣು; ಹೈಕಮಾಂಡ್​​ ಬಳಿ ಭಾರೀ ಲಾಬಿ

  ಪೌರತ್ವ ಕೇಂದ್ರದ ವ್ಯಾಪ್ತಿಯಲ್ಲಿ ಬರುತ್ತದೆಯಾದರೂ ಶಾಸನ ಜಾರಿಗೊಳಿಸಲೇಬೇಕೆಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಒತ್ತಾಯಿಸುವಂತಿಲ್ಲ. ಈ ಕಾಯ್ದೆಯೂ ಭಾರತದ ಸಂವಿಧಾನಕ್ಕೆ ಧಕ್ಕೆ ಉಂಟುಮಾಡುತ್ತದೆ. ಹಾಗಾಗಿ ತಾವು ಯಾವುದೇ ಕಾರಣಕ್ಕೂ ತಮ್ಮ ರಾಜ್ಯದಲ್ಲಿ ಸಿಎಬಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

  ಇನ್ನು ಸಂವಿಧಾನ ತಜ್ಞರ ಪ್ರಕಾರ, ರಾಜ್ಯ ಸರ್ಕಾರಗಳಿಗೆ ಪೌರತ್ವ ಕಾಯ್ದೆ ಜಾರಿಗೆ ಸಂಬಂಧಿಸಿದಂತೆ ನಿರ್ಣಾಯಕ ಪಾತ್ರವಿಲ್ಲ. ಪಂಜಾಬ್, ಕೇರಳ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ತೆಗೆದುಕೊಂಡ ನಿರ್ಧಾರಗಳಿಗೆ ಯಾವುದೇ ಕಾನೂನಾತ್ಮಕ ಮಾನ್ಯತೆ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
  Published by:Ganesh Nachikethu
  First published: