HOME » NEWS » National-international » PUNE BASED WOMAN SUICIDE CASE MAHARASHTRA FOREST MINISTER QUITS BJP ALLEGES HES LINKED TO SUICIDE CASE MAK

ಪುಣೆ ಮೂಲದ ಯುವತಿ ಆತ್ಮಹತ್ಯೆ ಪ್ರಕರಣ; ಮಹಾರಾಷ್ಟ್ರದ ಅರಣ್ಯ ಸಚಿವ ಸಂಜಯ್ ರಾಥೋಡ್ ರಾಜೀನಾಮೆ

ಸಚಿವ ಸಂಜಯ್ ರಾಥೋಡ್‌ಗೂ ಮೃತ ಯುವತಿಯ ಸಾವಿಗೂ ಸಂಬಂಧವಿದೆ ಎಂದು ಬಿಜೆಪಿ ಆರೋಪಿಸಿ, ಅವರ ಬಂಧನಕ್ಕೆ ಪಕ್ಷ ಒತ್ತಾಯಿಸಿತ್ತು. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸಾವಿನ ಬಗ್ಗೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

news18-kannada
Updated:February 28, 2021, 6:46 PM IST
ಪುಣೆ ಮೂಲದ ಯುವತಿ ಆತ್ಮಹತ್ಯೆ ಪ್ರಕರಣ; ಮಹಾರಾಷ್ಟ್ರದ ಅರಣ್ಯ ಸಚಿವ ಸಂಜಯ್ ರಾಥೋಡ್ ರಾಜೀನಾಮೆ
ಸಚಿವ ಸಂಜಯ್ ರಾಥೋಡ್​-ಮೃತ ಯುವತಿ ಪೂಜಾ ಚೌವ್ಹಾಣ್.
  • Share this:
ಮುಂಬೈ (ಫೆಬ್ರವರಿ 28); ಪೂಜಾ ಚೌವ್ಹಾಣ್ ಎಂಬ ಪುಣೆ ಮೂಲದ 23 ವರ್ಷ ಯುವತಿ ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗಿತ್ತು. ಈ ಸುದ್ದಿ ಮಹಾರಾಷ್ಟ್ರ ರಾಜಕಾರಣಲ್ಲಿ ಇದೀಗ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಅಲ್ಲದೆ, ಈ ಪ್ರಕರಣಕ್ಕೂ ಅರಣ್ಯ ಸಚಿವ ಸಂಜಯ್​ ರಾಥೋಡ್​ ಅವರಿಗೂ ಸಂಬಂಧ ಇದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಪರಿಣಾಮ ಸಚಿವ ಸಂಜಯ್​ ರಾಥೋಡ್​ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿರುವ ಸಚಿವರು "ಕೊಳಕು ರಾಜಕೀಯದಿಂದಾಗಿ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ" ಎಂದು ಸಚಿವ ಸಂಜಯ್ ರಾಥೋಡ್ ಹೇಳಿದ್ದಾರೆ.

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪೂಜಾ ಚೌವ್ಹಾಣ್ ಎಂಬ 23 ವರ್ಷದ ಯುವತಿ ಇಂಗ್ಲಿಷ್ ಸ್ಪೀಕಿಂಗ್ ಕೋರ್ಸ್ ಕಲಿಯಲು ಪುಣೆಯಲ್ಲಿ ತನ್ನ ಸಹೋದರ ಮತ್ತು ಸ್ನೇಹಿತರೊಂದಿಗೆ ವಾಸಿಸುತ್ತಿದ್ದಳು. ಫೆಬ್ರವರಿ 8 ರಂದು ಈ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವತಿಯ ಸಾವಿನ ಎರಡು ದಿನಗಳ ನಂತರ, ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಕ್ಲಿಪ್ ಬಿಡುಗಡೆಯಾಗಿದ್ದು, ಇದರಲ್ಲಿ ಇಬ್ಬರು ವ್ಯಕ್ತಿಗಳು ಯುವತಿಯ ಸಾವಿನ ಬಗ್ಗೆ ಮಾತನಾಡಿದ್ದಾರೆ. ಆಡಿಯೋ ಕ್ಲಿಪ್‌ನಲ್ಲಿರುವ ವ್ಯಕ್ತಿಗಳಲ್ಲಿ ಒಬ್ಬರು ಸಂಜಯ್ ರಾಥೋಡ್ ಎಂದು ಬಿಜೆಪಿ ಆರೋಪಿಸಿದೆ. ಈ ಆರೋಪವನ್ನು ಸಂಜಯ್ ರಾಥೋಡ್ ನಿರಾಕರಿಸಿದ್ದಾರೆ.

ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, "ಆಕೆ ಆತ್ಮಹತ್ಯೆ ಮಾಡಿಕೊಂಡಂತೆ ಕಾಣಿಸಿಕೊಂಡರೂ, ಅದನ್ನು ಕ್ರಿಮಿನಲ್ ಪ್ರಕರಣ ಎಂದು ತನಿಖೆ ನಡೆಸುತ್ತಿದ್ದೇವೆ" ಎಂದು ಕಳೆದ ವಾರ ತಿಳಿಸಿದ್ದಾರೆ.

ಸಚಿವ ಸಂಜಯ್ ರಾಥೋಡ್‌ಗೂ ಮೃತ ಯುವತಿಯ ಸಾವಿಗೂ ಸಂಬಂಧವಿದೆ ಎಂದು ಬಿಜೆಪಿ ಆರೋಪಿಸಿ, ಅವರ ಬಂಧನಕ್ಕೆ ಪಕ್ಷ ಒತ್ತಾಯಿಸಿತ್ತು. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸಾವಿನ ಬಗ್ಗೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಪೂಜಾ ಚೌವಾಣ್ ಆತ್ಮಹತ್ಯೆ ಪ್ರಕರಣದಲ್ಲಿ ಗಂಭೀರ ಆರೋಪ ಹೊಂದಿರುವ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಬೀಡ್ ಜಿಲ್ಲೆಯಲ್ಲಿ ಸಂಜಯ್ ರಾಥೋಡ್ ಅವರ ಪ್ರತಿಮೆಯನ್ನು ಸುಟ್ಟು ಬಿಜೆಪಿ ಪ್ರತಿಭಟನೆ ನಡೆಸಿತ್ತು ಎಂದು ಬಿಜೆಪಿ ಮಹಾರಾಷ್ಟ್ರ ಕಳೆದ ವಾರ ಟ್ವೀಟ್ ಮಾಡಿದೆ.

ಇದನ್ನೂ ಓದಿ: Five State Election; ಪಂಚರಾಜ್ಯ ಚುನಾವಣೆಯಲ್ಲಿ ಯಾರಿಗಾಗಲಿದೆ ಲಾಭ?; ಇಲ್ಲಿದೆ ಸಿ-ವೋಟರ್​ ಸಮೀಕ್ಷಾ ವರದಿ!

ಕಳೆದ ವಾರ ಅರಣ್ಯ ಸಚಿವ ಸಂಜಯ್ ರಾಥೋಡ್ ವಿರುದ್ಧ ಬಿಜೆಪಿಯ ಮಹಿಳಾ ಘಟಕ ಪ್ರತಿಭಟನೆ ನಡೆಸಿತ್ತು. ಆದರೆ ಯುವತಿಯ ಸಾವಿನ ಬಗ್ಗೆ ಆಕೆಯ ಕುಟುಂಬ ಈ ಸಂಬಂಧ ಯಾವುದೇ ದೂರು ನೀಡಿಲ್ಲ.
Youtube Video

"ಸಂಜಯ್ ರಾಥೋಡ್ ವಿರುದ್ಧ ಸಾಕಷ್ಟು ಪುರಾವೆಗಳಿವೆ. ಆದರೂ ಅವರು ಸಚಿವ ಸ್ಥಾನದಲ್ಲಿರುವುದರಿಂದ ಅವರ ವಿರುದ್ದ ಏನೂ ಕ್ರಮ ಕೈಗೊಳ್ಳಲಾಗುತ್ತಿಲ್ಲ. ರಾಜ್ಯದ ಪೊಲೀಸರು ಒತ್ತಡದಲ್ಲಿದ್ದಾರೆ. ಮೊದಲು, ಪೋಲಿಸ್ ತನಿಖೆಯ ಬಗ್ಗೆ ತನಿಖೆ ನಡೆಸಬೇಕಾಗಿದೆ" ಎಂದು ಫಡ್ನವಿಸ್ ಕಳೆದ ವಾರ ಆರೋಪಿಸಿದ್ದರು. ಇದರ ಬೆನ್ನಿಗೆ ಇಂದು ಸಂಜಯ್​ ರಾಥೋಡ್​ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ.
Published by: MAshok Kumar
First published: February 28, 2021, 6:45 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories