Vice President Election: ಅಮರೀಂದರ್ ಸಿಂಗ್ ಬಿಜೆಪಿ ಸೇರಿ ಎನ್​ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ ಆಗ್ತಾರಾ?

ಅಮರಿಂದರ್ ಸಿಂಗ್

ಅಮರಿಂದರ್ ಸಿಂಗ್

Amarinder Singh : ಕಳೆದ ವರ್ಷ ಕಾಂಗ್ರೆಸ್ ತೊರೆದಿದ್ದ ಅಮರಿಂದರ್ ಸಿಂಗ್ ಶೀಘ್ರದಲ್ಲೇ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಸಹ ಮೂಲಗಳು ತಿಳಿಸಿವೆ. 80 ವರ್ಷದ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಬೆನ್ನು ಶಸ್ತ್ರಚಿಕಿತ್ಸೆ ಪಡೆಯಲು ಸದ್ಯ ಲಂಡನ್‌ನಲ್ಲಿದ್ದಾರೆ.

  • Share this:

    ಹಾಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು (Venkaiah Naidu) ಅವರ ಅವಧಿ ಮುಗಿಯುತ್ತಿರುವ ಬೆನ್ನಲ್ಲೇ ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ (Vice President Election) ನಡೆಸುವುದಾಗಿ ಚುನಾವಣೆ ಆಯೋಗ ಈಗಾಗಲೇ ಘೋಷಣೆ ಮಾಡಿದೆ. ಕಳೆದ ವರ್ಷ ಕಾಂಗ್ರೆಸ್ ತೊರೆದಿದ್ದ ಅಮರಿಂದರ್ ಸಿಂಗ್ (Amarinder Singh) ಅವರು ಎನ್‌ಡಿಎ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗುವ (NDA Vice Presidential Candidate) ಸಾಧ್ಯತೆಯಿದೆ ಎಂದು ವರದಿಯಾಗಿದೆ. ಕಳೆದ ವರ್ಷ ಕಾಂಗ್ರೆಸ್ ತೊರೆದಿದ್ದ ಅಮರಿಂದರ್ ಸಿಂಗ್ ಶೀಘ್ರದಲ್ಲೇ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಸಹ ಮೂಲಗಳು ತಿಳಿಸಿವೆ. 80 ವರ್ಷದ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಬೆನ್ನು ಶಸ್ತ್ರಚಿಕಿತ್ಸೆ ಪಡೆಯಲು ಸದ್ಯ ಲಂಡನ್‌ನಲ್ಲಿದ್ದಾರೆ.


    ಮುಂದಿನ ವಾರ ಭಾರತಕ್ಕೆ ಹಿಂದಿರುಗಿದ ನಂತರ ಅವರು ತಮ್ಮ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಸಾಧ್ಯತೆಯಿದೆ ಎಂದು ಸಹ ಹೇಳಲಾಗಿದೆ.


    ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ?
    ಅಮರಿಂದರ್ ಸಿಂಗ್ ಲಂಡನ್​ನಲ್ಲಿ  ಶಸ್ತ್ರಚಿಕಿತ್ಸೆ ಪಡೆದ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಮಾತನಾಡಿದ್ದಾರೆ ಎನ್ನಲಾಗಿದೆ.


    ಐದು ದಶಕದಿಂದ ಜೊತೆಗಿದ್ದ ಪಕ್ಷದಿಂದ ಹೊರಬಿದ್ದಿದ್ದ ಕ್ಯಾಪ್ಟನ್
    ಕ್ಯಾಪ್ಟನ್ ಅಮರಿಂದರ್ ಸಿಂಗ್ ಕಳೆದ ವರ್ಷ ಐದು ದಶಕಗಳಿಂದ ಜೊತೆಗಿದ್ದ ಪಕ್ಷವಾದ ಕಾಂಗ್ರೆಸ್‌ನಿಂದ ಹೊರಬಂದಿದ್ದರು. ಪಂಜಾಬ್ ಚುನಾವಣೆಗೆ ಮುಂಚಿತವಾಗಿ ಬದಲಾವಣೆಗೆ ಒತ್ತಾಯಿಸುತ್ತಿದ್ದ ನವಜೋತ್ ಸಿಂಗ್ ಸಿಧು ಅವರೊಂದಿಗಿನ ದ್ವೇಷದ ನಂತರ ಅವರ ಹಠಾತ್ ನಿರ್ಗಮನ ಆಗಿತ್ತು.


    ಇದನ್ನೂ ಓದಿ: Vice President Election: ಯಾರಾಗಲಿದ್ದಾರೆ ಉಪ ರಾಷ್ಟ್ರಪತಿ? ಚುನಾವಣಾ ದಿನಾಂಕ ನಿಗದಿ


    ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬರೆದಿದ್ದ  ಕಾಂಗ್ರೆಸ್ ಉನ್ನತ ನಾಯಕತ್ವದಿಂದ ಮೂರು ಬಾರಿ ಅವಮಾನಕ್ಕೊಳಗಾಗಿದ್ದೇನೆ. ಇನ್ನು ಮುಂದೆ ಅದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಈಮೂಲಕ ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ಮಾತಿಲ್ಲ ಎಂದು ಸ್ಪಷ್ಟಪಡಿಸಿದ್ದರು.


    ಎಂದು ನಡೆಯಲಿದೆ ಉಪ ರಾಷ್ಟ್ರಪತಿ ಚುನಾವಣೆ?
    ಭಾರತದ ಉಪ ರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6 ರಂದು ಚುನಾವಣೆ (Election For Vice President ) ನಡೆಯಲಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ವೆಂಕಯ್ಯ ನಾಯ್ಡು ಅವರು (Venkaiah Naidu) ಪ್ರಸ್ತುತ ಉಪರಾಷ್ಟ್ರಪತಿಯಾಗಿದ್ದು, ಅವರ ಅವಧಿ ಆಗಸ್ಟ್‌ ತಿಂಗಳಿನಲ್ಲಿ ಕೊನೆಗೊಳ್ಳಲಿದೆ. ಉಪಾಧ್ಯಕ್ಷರು ರಾಜ್ಯಸಭೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಾರೆ. ಆಗಸ್ಟ್ 6ರಂದೇ ಉಪ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಕೂಡ ನಡೆಯಲಿದೆ. ಉಪ ರಾಷ್ಟ್ರಪತಿ ಸ್ಥಾನಕ್ಕೆ ನಾಮನಿರ್ದೇಶನಕ್ಕೆ ಜುಲೈ 17 ಕೊನೆಯ ದಿನಾಂಕ ಎಂದು ಅಧಿಕೃತ ಮಾಹಿತಿಯನ್ನು ಚುನಾವಣಾ ಆಯೋಗ ತಿಳಿಸಿದೆ.


    ಇದನ್ನೂ ಓದಿ: Draupadi Murma: ದ್ರೌಪದಿ ಮುರ್ಮು ಯಾರು? ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ಹಿನ್ನೆಲೆ ಇಲ್ಲಿದೆ


    ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಜುಲೈ 22 ಕೊನೆಯ ದಿನವಾಗಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರ ಸಭೆಯಲ್ಲಿ ಉಪ ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಯಿತು.


    ಯಾರಾಗಲಿದ್ದಾರೆ ಅಭ್ಯರ್ಥಿಗಳು?
    ಇದುವರೆಗೆ ವೆಂಕಯ್ಯ ನಾಯ್ಡು ಅವರ ನಂತರ ಭಾರತದ ಉಪ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬ ಸುಳಿವು ಯಾವುದೇ ಪಕ್ಷದಿಂದಲೂ ಹೊರಬಿದ್ದಿಲ್ಲ. ಯಾವುದೇ ರಾಜಕೀಯ ಪಕ್ಷಗಳೂ ತಮ್ಮ ಅಭ್ಯರ್ಥಿಗಳ ಕುರಿತು ಸುಳಿವು ಬಿಟ್ಟುಕೊಟ್ಟಿಲ್ಲ. ಹೀಗಾಗಿ ಮುಂದಿನ ಉಪ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬ ಕುತೂಹಲ ದೇಶದ ಪ್ರಜೆಗಳಲ್ಲಿ ಮನೆಮಾಡಿದೆ.

    Published by:guruganesh bhat
    First published: