ವಿದ್ಯಾರ್ಥಿನಿ ಆತ್ಮಹತ್ಯೆ; ಸ್ನಾನದ ನಗ್ನ ವಿಡಿಯೋ ಲೀಕ್ ಕೇಸ್​ಗೆ ಲಿಂಕ್?

ವಿಶ್ವವಿದ್ಯಾಲಯ

ವಿಶ್ವವಿದ್ಯಾಲಯ

ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಇತ್ತೀಚಿಗಷ್ಟೇ ವಿದ್ಯಾರ್ಥಿನಿಯರ ಸ್ನಾನದ ವಿಡಿಯೋ ಲೀಕ್ ಆದ ಪ್ರಕರಣದ ಸುತ್ತಲೂ ಈ ಆತ್ಮಹತ್ಯೆ ಅನುಮಾನ ಮೂಡಿಸಿದೆ. 

  • Share this:

ಅಮೃತಸರ್: ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯ (LPU) ವಿದ್ಯಾರ್ಥಿಯೊಬ್ಬಳು (Student Suicide) ಆತ್ಮಹತ್ಯೆ ಮಾಡಿಕೊಂಡಿದ್ದು, ಕಾಲೇಜು ಕ್ಯಾಂಪಸ್‌ನ ಸುತ್ತಲೂ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ (Student Protest) ನಡೆಸಿದ್ದಾರೆ. ಆದರೆ, ವೈಯಕ್ತಿಕ ಕಾರಣದಿಂದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.ಬಿ.ಡಿಸೈನ್‌ನ ಪ್ರಥಮ ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (Lovely Professional University) ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.  ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಇತ್ತೀಚಿಗಷ್ಟೇ ವಿದ್ಯಾರ್ಥಿನಿಯರ ಸ್ನಾನದ ವಿಡಿಯೋ ಲೀಕ್ ಆದ ಪ್ರಕರಣದ ಸುತ್ತಲೂ ಈ ಆತ್ಮಹತ್ಯೆ ಅನುಮಾನ ಮೂಡಿಸಿದೆ. 


ನಿನ್ನೆ (ಸೆಪ್ಟೆಂಬರ್ 20) ಸಂಜೆ 5:30 ರ ಸುಮಾರಿಗೆ ಆತ್ಮಹತ್ಯೆಯ ಬಗ್ಗೆ ಕಪುರ್ತಲಾ ಪೊಲೀಸರಿಗೆ ಈ ಆತ್ಮಹತ್ಯೆ ಕುರಿತು ವಿಷಯ ತಿಳಿದಿದೆ. ನಾವು ಘಟನೆಯ ಬಗ್ಗೆ ತಿಳಿದ ತಕ್ಷಣ ಸ್ಥಳಕ್ಕೆ ತಲುಪಿದ್ದೇವೆ. ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿರುವ ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.





ಈ ಆತ್ಮಹತ್ಯೆ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಡಿಎಸ್ಪಿ ಫಗ್ವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (LPU) ಸಹ ಹೇಳಿಕೆಯನ್ನು ನೀಡಿದ್ದು, ಹೆಚ್ಚಿನ ತನಿಖೆಗಾಗಿ ಅಧಿಕಾರಿಗಳಿಗೆ ಸಂಪೂರ್ಣ ಬೆಂಬಲವನ್ನು ನೀಡುತ್ತಿದೆ ಎಂದು ತಿಳಿಸಿದೆ.

First published: