HOME » NEWS » National-international » RAFALE FIGHTER JETS REACHED HARYANA RAJNATH SINGH TWEETS RAFALE JET VIDEOS SCT

Rafale Jets: ಭಾರತಕ್ಕೆ ಬಂದಿಳಿದ ರಫೇಲ್ ಯುದ್ಧ ವಿಮಾನಗಳು; ನಮ್ಮ ಸೇನಾ ಇತಿಹಾಸದಲ್ಲಿ ಹೊಸ ಶಕೆ ಆರಂಭ ಎಂದ ರಾಜನಾಥ ಸಿಂಗ್

Rafale Fighter Jets: ಐದು ರಫೇಲ್ ಯುದ್ಧ ವಿಮಾನಗಳು ಹರಿಯಾಣಕ್ಕೆ ತಲುಪಿವೆ. ಈ ಮೂಲಕ ಭಾರತೀಯ ಸೇನೆಯ ಇತಿಹಾಸದಲ್ಲೇ ಹೊಸ ಶಕೆ ಆರಂಭವಾಗಿದೆ ಎಂದು ರಾಜನಾಥ ಸಿಂಗ್ ಟ್ವೀಟ್ ಮಾಡಿದ್ದಾರೆ.

Sushma Chakre | news18-kannada
Updated:July 29, 2020, 3:55 PM IST
Rafale Jets: ಭಾರತಕ್ಕೆ ಬಂದಿಳಿದ ರಫೇಲ್ ಯುದ್ಧ ವಿಮಾನಗಳು; ನಮ್ಮ ಸೇನಾ ಇತಿಹಾಸದಲ್ಲಿ ಹೊಸ ಶಕೆ ಆರಂಭ ಎಂದ ರಾಜನಾಥ ಸಿಂಗ್
ಭಾರತಕ್ಕೆ ಬಂದಿಳಿದ ರಫೇಲ್ ಯುದ್ಧ ವಿಮಾನ
  • Share this:
ನವದೆಹಲಿ (ಜು. 29): ಫ್ರಾನ್ಸ್​ನಿಂದ ನಿರ್ಮಾಣವಾಗಿರುವ ರಫೇಲ್ ಯುದ್ಧ ವಿಮಾನಗಳು ಭಾರತಕ್ಕೆ ಬಂದಿಳಿದಿವೆ. ಹರಿಯಾಣದ ಅಂಬಾಲ ವಾಯುನೆಲೆಗೆ ಐದು ರಫೇಲ್ ಯುದ್ಧ ವಿಮಾನಗಳು ತಲುಪಿದ್ದು, ಆಗಮಿಸಿದ್ದು, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ಆರ್‌ಕೆಎಸ್ ಭದೌರಿಯ ಬಹು ನಿರೀಕ್ಷಿತ ರಫೇಲ್ ವಿಮಾನಗಳನ್ನು ಬರಮಾಡಿಕೊಂಡಿದ್ದಾರೆ. ಅಂಬಾಲ ವಾಯುನೆಲೆಯನ್ನು ಬಿಗಿ ಭದ್ರತೆ ಒದಗಿಸಲಾಗಿದೆ.

ಫ್ರಾನ್ಸ್‌ನಿಂದ ಹೊರಟಿದ್ದ ಮೊದಲ ಹಂತದ ಐದು ರಫೇಲ್‌ ಯುದ್ಧ ವಿಮಾನಗಳು ಇಂದು ಮಧ್ಯಾಹ್ನ ಅಂಬಾಲ ವಾಯುನೆಲೆಗೆ ಬಂದಿಳಿದಿವೆ. ಫ್ರಾನ್ಸ್ ಮೂಲದ ಡಸಾಲ್ಟ್ ಕಂಪೆನಿ ನಿರ್ಮಿತ 5 ರಫೇಲ್ ಫೈಟರ್ ಜೆಟ್ ವಿಮಾನಗಳು ಇದಾಗಿವೆ. ಈ ಐದು ಯುದ್ಧ ವಿಮಾನಗಳ ಪೈಕಿ ಎರಡು ವಿಮಾನಗಳು 2 ಸೀಟರ್ ತರಬೇತಿ ವಿಮಾನಗಳಾಗಿದ್ದು, 3 ಸಿಂಗಲ್ ಸೀಟರ್ ಯುದ್ಧ ವಿಮಾನಗಳಾಗಿವೆ. ಈ ವಾಯುನೆಲೆಯ ಸುತ್ತಮುತ್ತಲಿನ 4 ಗ್ರಾಮಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇದನ್ನೂ ಓದಿ: IAF Rafale: ರಫೇಲ್ ಯುದ್ಧ ವಿಮಾನ ಆಗಮನಕ್ಕೆ ಕ್ಷಣಗಣನೆ; ಇಲ್ಲಿದೆ ಫೈಟರ್‌ ಜೆಟ್‌ ಕುರಿತ ಇತ್ತೀಚಿನ ಮಾಹಿತಿ

ಭಾರತಕ್ಕೆ ಬಂದಿಳಿದ ರಫೇಲ್ ಯುದ್ಧ ವಿಮಾನ
ರಫೇಲ್ ಭಾರತವನ್ನು ತಲುಪಿದ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಐದು ರಫೇಲ್ ಯುದ್ಧ ವಿಮಾನಗಳು ಹರಿಯಾಣಕ್ಕೆ ತಲುಪಿವೆ. ಈ ಮೂಲಕ ಭಾರತೀಯ ಸೇನೆಯ ಇತಿಹಾಸದಲ್ಲೇ ಹೊಸ ಶಕೆ ಆರಂಭವಾಗಲಿದೆ ಎಂದು ರಾಜನಾಥ ಸಿಂಗ್ ಟ್ವೀಟ್ ಮಾಡಿದ್ದಾರೆ.ರಫೇಲ್ ನಮ್ಮ ನೆಲಕ್ಕೆ ಬಂದಿಳಿದಿದೆ. ರಫೇಲ್ ಕುರಿತ ಸುಳ್ಳು ಆರೋಪಗಳಿಗೆಲ್ಲ ಈಗಾಗಲೇ ಉತ್ತರ ನೀಡಿದ್ದೇವೆ. ಇನ್ನೂ ಆ ಬಗ್ಗೆ, ರಫೇಲ್ ಖರೀದಿ ವಿಚಾರದಲ್ಲಿ ಯಾರಿಗಾದರೂ ವಿರೋಧ, ಅಸಮಾಧಾನಗಳಿದ್ದರೆ ನಾವು ಅದಕ್ಕೆ ಸರಿಯಾದ ಉತ್ತರ ನೀಡಲು ಸಿದ್ಧರಿದ್ದೇವೆ.  ನಾನು ಭಾರತೀಯ ವಾಯುಪಡೆಯನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ರಫೇಲ್ ಆಗಮನದ ಮೂಲಕ ವಾಯುಪಡೆಯ ಸಾಮರ್ಥ್ಯ ದುಪ್ಪಟ್ಟುಗೊಂಡಿರುವುದಕ್ಕೆ ನನಗೆ ಬಹಳ ಸಂತೋಷವಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಸಂತೋಷ ವ್ಯಕ್ತಪಡಿಸಿದ್ದಾರೆ.ಫ್ರೆಂಚ್‌ ವಿಮಾನ ತಯಾರಿಕಾ ಸಂಸ್ಥೆ ಡಸ್ಸಾಲ್ಟ್ ಏವಿಯೇಶನ್‌ ಕಾರ್ಖಾನೆ ನಿರ್ಮಿಸಿದ ರಫೇಲ್ ಫೈಟರ್‌ ಜೆಟ್‌ಗಳು ದಕ್ಷಿಣ ಫ್ರಾನ್ಸ್‌ನ ಬೋರ್ಡಾಕ್ಸ್‌ ನಗರದ ಮೆರಿಗ್ನಾಕ್‌ ವಾಯು ನೆಲೆಯಿಂದ ಜುಲೈ 27ರಂದು ಭಾರತದತ್ತ ಹೊರಟಿದ್ದವು. ಈ 5 ರಫೇಲ್ ಜೆಟ್‌ಗಳು ಸುಮಾರು 7,000 ಕಿ.ಮೀ ದೂರವನ್ನು ಒಂದೇ ದಿನದಲ್ಲಿ ಕ್ರಮಿಸಿ ನಿನ್ನೆ ಯುಎಇ ಗೆ ಆಗಮಿಸಿದ್ದವು. ಇಂದು ಮಧ್ಯಾಹ್ನ 3.15ರ ಸುಮಾರಿಗೆ ಈ ಯುದ್ಧ ವಿಮಾನಗಳ ಹರಿಯಾಣದ ಅಂಬಾಲ ವಾಯುನೆಲೆಗೆ ಬಂದಿಳಿದಿವೆ.
Published by: Sushma Chakre
First published: July 29, 2020, 3:38 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories