• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Rafale Jets Induction: ಅಂಬಾಲದಲ್ಲಿ ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾದ ರಫೆಲ್​ ಯುದ್ಧ ವಿಮಾನಗಳು

Rafale Jets Induction: ಅಂಬಾಲದಲ್ಲಿ ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾದ ರಫೆಲ್​ ಯುದ್ಧ ವಿಮಾನಗಳು

ರಫೇಲ್​ ಯುದ್ಧ ವಿಮಾನ

ರಫೇಲ್​ ಯುದ್ಧ ವಿಮಾನ

ಫ್ರಾನ್ಸ್‌ನಿಂದ ಹೊರಟಿದ್ದ ಮೊದಲ ಹಂತದ ಐದು ರಫೇಲ್‌ ಯುದ್ಧ ವಿಮಾನಗಳು ಜುಲೈ 29ರ ಮಧ್ಯಾಹ್ನ ಅಂಬಾಲ ವಾಯುನೆಲೆಗೆ ಬಂದಿಳಿದಿದ್ದವು. ಇಂದು ಈ ಯುದ್ಧ ವಿಮಾನಗಳು ಅಧಿಕೃತವಾಗಿ ಭಾರತೀಯ ವಾಯುಪಡೆಗೆ ಸೇರ್ಪಡೆ ಆಗಲಿವೆ.

  • Share this:

ಫ್ರಾನ್ಸ್​​ನಲ್ಲಿ ನಿರ್ಮಾಣವಾಗಿರುವ ರಫೇಲ್ ಯುದ್ಧ ವಿಮಾನಗಳು ಜುಲೈ ತಿಂಗಳಲ್ಲಿ ಭಾರತಕ್ಕೆ ಬಂದಿಳಿದಿದ್ದವು. ಹರಿಯಾಣದ ಅಂಬಾಲ ವಾಯುನೆಲೆಗೆ ತಲುಪಿದ್ದ ಐದು ರಫೇಲ್ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ಆರ್‌ಕೆಎಸ್ ಭದೌರಿಯ ಸ್ವಾಗತಿಸಿದ್ದರು. ಇಂದು ಈ ಯುದ್ಧ ವಿಮಾನಗಳು ಅಧಿಕೃತವಾಗಿ ಭಾರತೀಯ ವಾಯುಪಡೆಗೆ ಸೇರ್ಪಡೆ ಆಗಿವೆ. ಭಾರತ ಹಾಗೂ ಚೀನಾ ಗಡಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ರಫೆಲ್​ ಯುದ್ಧ ವಿಮಾನಗಳು ಭಾರತೀಯ ವಾಯುಪಡೆಗೆ ಸೇರ್ಪಡೆ ಆದವು.


ಫ್ರಾನ್ಸ್‌ನಿಂದ ಹೊರಟಿದ್ದ ಮೊದಲ ಹಂತದ ಐದು ರಫೇಲ್‌ ಯುದ್ಧ ವಿಮಾನಗಳು ಜುಲೈ 29ರ ಮಧ್ಯಾಹ್ನ ಅಂಬಾಲ ವಾಯುನೆಲೆಗೆ ಬಂದಿಳಿದಿದ್ದವು. ಫ್ರಾನ್ಸ್ ಮೂಲದ ಡಸಾಲ್ಟ್ ಕಂಪೆನಿ ನಿರ್ಮಿತ 5 ರಫೇಲ್ ಫೈಟರ್ ಜೆಟ್ ವಿಮಾನಗಳು ಇದಾಗಿವೆ. ಈ ಐದು ಯುದ್ಧ ವಿಮಾನಗಳ ಪೈಕಿ ಎರಡು ವಿಮಾನಗಳು 2 ಸೀಟರ್ ತರಬೇತಿ ವಿಮಾನಗಳಾಗಿದ್ದು, 3 ಸಿಂಗಲ್ ಸೀಟರ್ ಯುದ್ಧ ವಿಮಾನಗಳಾಗಿವೆ. ಇಂದು ಈ ವಿಮಾನಗಳು ಅಧಿಕೃತವಾಗಿ ಭಾರತೀಯ ವಾಯುಪಡೆಗೆ ಸೇರಿವೆ.


ಫ್ರೆಂಚ್‌ ವಿಮಾನ ತಯಾರಿಕಾ ಸಂಸ್ಥೆ ಡಸ್ಸಾಲ್ಟ್ ಏವಿಯೇಶನ್‌ ಕಾರ್ಖಾನೆ ನಿರ್ಮಿಸಿದ ರಫೇಲ್ ಫೈಟರ್‌ ಜೆಟ್‌ಗಳು ದಕ್ಷಿಣ ಫ್ರಾನ್ಸ್‌ನ ಬೋರ್ಡಾಕ್ಸ್‌ ನಗರದ ಮೆರಿಗ್ನಾಕ್‌ ವಾಯು ನೆಲೆಯಿಂದ ಜುಲೈ 27ರಂದು ಭಾರತದತ್ತ ಹೊರಟಿದ್ದವು. ಈ 5 ರಫೇಲ್ ಜೆಟ್‌ಗಳು ಸುಮಾರು 7,000 ಕಿ.ಮೀ ದೂರವನ್ನು ಒಂದೇ ದಿನದಲ್ಲಿ ಕ್ರಮಿಸಿ ಜುಲೈ 28ರಂದು ಯುಎಇ ಗೆ ಆಗಮಿಸಿದ್ದವು. ಜುಲೈ 29ರಂದು ಮಧ್ಯಾಹ್ನ 3.15ರ ಸುಮಾರಿಗೆ ಈ ಯುದ್ಧ ವಿಮಾನಗಳ ಹರಿಯಾಣದ ಅಂಬಾಲ ವಾಯುನೆಲೆಗೆ ಬಂದಿಳಿದಿದ್ದವು.

top videos
    First published: