Congress President: ರಾಹುಲ್ ಗಾಂಧಿಯೇ ಕಾಂಗ್ರೆಸ್ ಅಧ್ಯಕ್ಷ; ನಿರ್ಣಯ ಅಂಗೀಕಾರ

ಕಾಂಗ್ರೆಸ್ ಅಧ್ಯಕ್ಷರಾಗಿ ಯಾರನ್ನು ಆಯ್ಕೆ ಮಾಡುತ್ತಾರೆ ಎಂಬುದು ಭಾರತದ ರಾಜಕೀಯದಲ್ಲಿ ಸದ್ಯದ ಮಿಲಿಯನ್ ಡಾಲರ್ ಪ್ರಶ್ನೆ.

ರಾಹುಲ್ ಗಾಂಧಿ

ರಾಹುಲ್ ಗಾಂಧಿ

  • Share this:
ಜೈಪುರ: ಕಾಂಗ್ರೆಸ್​ನ ಮುಂದಿನ ಅಧ್ಯಕ್ಷ ಯಾರಾಗಬೇಕು ಎಂಬ ಚರ್ಚೆಯ ನಡುವೆಯೇ ಸಂಸದ ರಾಹುಲ್ ಗಾಂಧಿ ಅವರನ್ನು (Rahul Gandhi) ಪಕ್ಷದ ಅಧ್ಯಕ್ಷರನ್ನಾಗಿ ಮಾಡಬೇಕೆಂದು ರಾಜಸ್ಥಾನ ಕಾಂಗ್ರೆಸ್ ನಿರ್ಣಯ ಅಂಗೀಕರಿಸಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ರಾಜಸ್ಥಾನ ಸಚಿವ ಪಿ.ಎಸ್.ಖಚರಿಯಾವಾಸ್, ರಾಜ್ಯಾಧ್ಯಕ್ಷರ ನೇಮಕ ಸೇರಿದಂತೆ ರಾಷ್ಟ್ರೀಯ ಅಧ್ಯಕ್ಷರು ಏನೇ ತೀರ್ಮಾನ ಕೈಗೊಳ್ಳುತ್ತಾರೋ ಅದಕ್ಕೆ ಎಲ್ಲರೂ ಬದ್ಧರಾಗುತ್ತಾರೆ ಎಂಬ ನಿರ್ಣಯವನ್ನು ಅಂಗೀಕರಿಸಲಾಗಿದೆ. ಜೊತೆಗೆ ರಾಹುಲ್ ಗಾಂಧಿ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ (Congress President) ನೇಮಿಸಲು ಸಿಎಂ ಅಶೋಕ್ ಗೆಹ್ಲೋಟ್ ಅವರು ಮಂಡಿಸಿದ ಮತ್ತೊಂದು ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ದೇಶದ ವಿವಿಧ ರಾಜ್ಯಗಳಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿಗಳ ಸಭೆ ನಡೆಯುತ್ತಿದೆ. ಈ ಸಭೆಯಗಳಲ್ಲಿ ಕಾಂಗ್ರೆಸ್ ಅಧ್ಯಕ್ಷರಿಗೆ ಎಐಸಿಸಿ ಸೇರಿದಂತೆ ವಿವಿಧ ಸಮಿತಿಗಳ ಸದಸ್ಯರನ್ನು ನೇಮಿಸುವ ಅಧಿಕಾರ ನೀಡುವ ನಿರ್ಣಯವನ್ನು ಮಂಡಿಸಿ ಅಂಗೀಕರಿಸಲಾಗುತ್ತಿದೆ. ರಾಜಸ್ಥಾನದಲ್ಲಿ ಈ ನಿರ್ಣಯದ ಜೊತೆಗೆ ರಾಹುಲ್ ಗಾಂಧಿ ಅವರನ್ನೇ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವ ನಿರ್ಣಯವನ್ನೂ ಸಹ ಅಂಗೀಕರಿಸಲಾಗಿದೆ.

ಮಿಲಿಯನ್ ಡಾಲರ್ ಪ್ರಶ್ನೆ
ಕಾಂಗ್ರೆಸ್ ಅಧ್ಯಕ್ಷರಾಗಿ ಯಾರನ್ನು ಆಯ್ಕೆ ಮಾಡುತ್ತಾರೆ ಎಂಬುದು ಭಾರತದ ರಾಜಕೀಯದಲ್ಲಿ ಸದ್ಯದ ಮಿಲಿಯನ್ ಡಾಲರ್ ಪ್ರಶ್ನೆ. ಸೋನಿಯಾ ಗಾಂಧಿ ಅವರ ನಂತರ ವಯನಾಡ್ ಸಂಸದ, ಅವರ ಮಗ ರಾಹುಲ್ ಗಾಂಧಿ ಅವರನ್ನೇ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲು ಅನೇಕ ನಾಯಕರ ವಿರೋಧವಿದೆ. ಆದರೆ ಅದಕ್ಕಿಂತ ಹೆಚ್ಚು ನಾಯಕರ ಬೆಂಬಲವೂ ಇದೆ. 

ರಾಹುಲ್ ಗಾಂಧಿ ಯಾರನ್ನು ಮದುವೆಯಾಗ್ತಾರೆ?
ಕಾಂಗ್ರೆಸ್ ಹಮ್ಮಿಕೊಂಡಿರುವ 150 ದಿನಗಳ ಭಾರತ್ ಜೋಡೋ ಯಾತ್ರೆಯಲ್ಲಿ  ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಮದುವೆ ಬಗ್ಗೆ ಸುದ್ದಿಯಾಗಿದೆ. ಸದ್ಯ ತಮಿಳುನಾಡಿನಲ್ಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ವಿವಿಧ ಸಮುದಾಯ, ವರ್ಗಗಳ ಜೊತೆ ಸಂವಾದ ನಡೆಸುತ್ತಿದ್ದಾರೆ. ಅದೇ ರೀತಿ ಪ್ರಧಾನಮಂತ್ರಿ ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರ ಜೊತೆ ಸಂವಾದದ ವೇಳೆ ರಾಹುಲ್ ಗಾಂಧಿ ಮದುವೆ ಕುರಿತು ಪ್ರಸ್ತಾಪ ಬಂದಿದೆ.

ಇದನ್ನೂ ಓದಿ:Video: ಹಿಜಾಬ್ ಹಾಕದ್ದಕ್ಕೆ ಹಿಗ್ಗಾಮುಗ್ಗಾ ಥಳಿಸಿ ಯುವತಿಯ ಕೊಲೆ

ಕನ್ಯಾಕುಮಾರಿಯ ಮಾರ್ತಾಂಡಂನಲ್ಲಿ ಪ್ರಧಾನಮಂತ್ರಿ ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರೊಬ್ಬರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬಳಿ ಮದುವೆ ಬಗ್ಗೆ ಮಾತೆತ್ತಿದ್ದಾರೆ. ರಾಹುಲ್ ಗಾಂಧಿ ಜೊತೆ ಭಾರತ್ ಜೋಡೋ ಯಾತ್ರೆಯಲ್ಲಿ ಜೊತೆಗಿರುವ ಸಂಸದ ಜೈರಾಮ್ ರಮೇಶ್, ರಾಹುಲ್ ಗಾಂಧಿ ತಮಿಳುನಾಡಿನ ಮೇಲೆ ಭಾರೀ ಪ್ರೀತಿ ಇಟ್ಟಿದ್ದಾರೆ ಎಂದು ಆ ಮಹಿಳೆ ಹೇಳಿದ್ದಾಗಿ ತಿಳಿಸಿದ್ದಾರೆ.

ರಾಹುಲ್ ಗಾಂಧಿಗೆ ಹುಡುಗಿ ಹುಡುಕಲು ಸಿದ್ಧ
ಅಲ್ಲದೇ ತಮಿಳು ಹುಡುಗಿಯನ್ನು ರಾಹುಲ್ ಗಾಂಧಿಗಾಗಿ ಹುಡುಕಲು ತಾವು ಸಿದ್ಧರಿರುವುದಾಗಿಯೂ ಆ ಮಹಿಳೆ ಹೇಳಿದ್ದಾಗಿ ಸಂಸದ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ. ಜೊತೆಗೆ ರಾಹುಲ್ ಗಾಂಧಿ ಆ ಮಹಿಳೆಯ ಜೊತೆ ಚರ್ಚೆ ನಡೆಸುತ್ತಿರುವ ಫೋಟೋಗಳನ್ನು ಸಹ ಅವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: National Wife Appreciation Day: ಇಂದು ಹೆಂಡತಿಯನ್ನು ಹೊಗಳುವ ರಾಷ್ಟ್ರೀಯ ದಿನ! ಮದುವೆಯಾದ ಗಂಡಸರಿಗೆ ಆಲ್ ದಿ ಬೆಸ್ಟ್

ಮದುವೆ ಪ್ರಸ್ತಾಪದಿಂದ ಉಲ್ಲಾಸಭರಿತರಾದ ರಾಹುಲ್ ಗಾಂಧಿ
ಮದುವೆ ಪ್ರಸ್ತಾಪ ಎತ್ತುತ್ತಿದ್ದಂತೆ ರಾಹುಲ್ ಗಾಂಧಿ ಉಲ್ಲಾಸಭರಿತರಾದರು. ಖುಷಿ ಖುಷಿಯಿಂದ ಆ ಮಹಿಳೆಯ ಜೊತೆ ಚರ್ಚೆ ನಡೆಸಿದರು ಎಂದು ಕಾಂಗ್ರೆಸ್ ಸಂಸದ್ ಜೈರಾಮ್ ರಮೇಶ್ ತಿಳಿಸಿದ್ದಾರೆ.
Published by:ಗುರುಗಣೇಶ ಡಬ್ಗುಳಿ
First published: