Karnataka Congress Leader: 2023ರ ರಾಜ್ಯ ವಿಧಾನಸಭಾ ಚುನಾವಣೆಗೆ ತಯಾರಿ ಆರಂಭಿಸಿದ ಕಾಂಗ್ರೆಸ್

ದೆಹಲಿಯಿಂದ ಒಂದು ಸ್ಟ್ರಾಟ್ಯಜಿ ತಂಡ ಕಳುಹಿಸಿ ಕೊಡುತ್ತೇವೆ. ಅದು ಎಐಸಿಸಿ ಮತ್ತು ಕೆಪಿಸಿಸಿ ನಡುವೆ ಸಮನ್ವಯ ಸಾಧಿಸುತ್ತದೆ. ಆದಷ್ಟು ಬೇಗ ಅಭ್ಯರ್ಥಿಗಳನ್ನು ಗುರುತಿಸುವ ಕೆಲಸ ಮಾಡಿ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್​ ಗಾಂಧಿ

ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್​ ಗಾಂಧಿ

  • Share this:
ನವದೆಹಲಿ, ಫೆ.‌ 23: ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ (Assembly Elections) ಕಾಂಗ್ರೆಸ್ ಪಕ್ಷ ತಯಾರಿನ್ನು ಆರಂಭಿಸಿದೆ. ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸುವುದು, ಬಿಜೆಪಿಯ ಕೋಮು ರಾಜಕೀಯಕ್ಕೆ (BJP's Communal Politics) ಸೂಕ್ತವಾದ ಪ್ರತಿತಂತ್ರ ರೂಪಿಸುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಲೆಂದು ಎಐಸಿಸಿಯ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿ (AICC Former President and Member of Parliment Rahul Gandhi) ಅವರು ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರ ಸಭೆ  ಕರೆದಿದ್ದರು. ಆ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ.

ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖರು
ದೆಹಲಿಯಲ್ಲಿ ಗುರುವಾರ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, ಈಶ್ವರ್ ಖಂಡ್ರೆ ಸತೀಶ್  ಜಾರಕಿಹೊಳಿ, ಆರ್. ಧ್ರುವನಾರಾಯಣ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ.ಬಿ. ಪಾಟೀಲ್, ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗೂಂಡುರಾವ್, ಮಾಜಿ ಕೇಂದ್ರ ಸಚಿವರಾದ ಕೆ.ಹೆಚ್. ಮುನಿಯಪ್ಪ, ಎಂ. ವೀರಪ್ಪ ಮೊಯ್ಲಿ, ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಹೆಚ್.ಕೆ. ಪಾಟೀಲ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ. ಶ್ರೀನಿವಾಸ್ , ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾದ ಯು.ಟಿ. ಖಾದರ್ ಭಾಗವಹಿಸಿದ್ದರು.

ಇದನ್ನು ಓದಿ : ವೈದ್ಯರಾಗುವ ಕನಸ್ಸು ಹೊತ್ತು ಉಕ್ರೇನ್​​ನಲ್ಲಿದ್ದ ರಾಜ್ಯದ ವಿದ್ಯಾರ್ಥಿಗಳು ಅತಂತ್ರ!

ಸಿದ್ದು-ಡಿಕೆಶಿ ಜೋಡಿ ಬಗ್ಗೆ ಸದಾಭಿಪ್ರಾಯ
ರಾಜ್ಯದ ಹಿರಿಯ ನಾಯಕರಿಂದ ಮುಂದಿನ ಚುನಾವಣೆಯನ್ನು ಹೇಗೆ ಎದುರಿಸಬೇಕು ಎಂದು ರಾಹುಲ್ ಗಾಂಧಿ ಅಭಿಪ್ರಾಯ ಕೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜ್ಯದ ನಾಯಕರೆಲ್ಲರು 'ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಗೆಲುವು ನಮ್ಮದೇ' ಎಂದು ತಿಳಿಸಿದ್ದಾರೆ. ಅಲ್ಲದೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆಯಾಗಿ ಮತ್ತು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸದಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯ ನಾಯಕರ ಅಭಿಪ್ರಾಯ ಕೇಳಿ ಖುಷಿಯಾದ ರಾಹುಲ್ ಗಾಂಧಿ ಇದೇ ರೀತಿಯ ಒಗ್ಗಟ್ಟನ್ನು ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿರುವುದಾಗಿ ತಿಳಿದುಬಂದಿದೆ.

ಇದನ್ನು ಓದಿ: ಮತದಾರರಲ್ಲಿ ಜಾಗೃತಿ ವಾರಣಾಸಿಯಲ್ಲಿ Pink Rally; ಭಾನುವಾರ ಕ್ಷೇತ್ರಕ್ಕೆ PM Modi

ದೆಹಲಿಯಿಂದ ರಾಜ್ಯಕ್ಕೆ ಸ್ಟ್ರಾಟರ್ಜಿ ತಂಡ
ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ದೆಹಲಿಯಿಂದ ಒಂದು ಸ್ಟ್ರಾಟ್ಯಜಿ ತಂಡ ಕಳುಹಿಸಿ ಕೊಡುತ್ತೇವೆ. ಅದು ಎಐಸಿಸಿ ಮತ್ತು ಕೆಪಿಸಿಸಿ ನಡುವೆ ಸಮನ್ವಯ ಸಾಧಿಸುತ್ತದೆ. ಆದಷ್ಟು ಬೇಗ ಅಭ್ಯರ್ಥಿಗಳನ್ನು ಗುರುತಿಸುವ ಕೆಲಸ ಮಾಡಿ. ಬಿಜೆಪಿ ಮತ್ತು ಆರ್ ಎಸ್ ಎಸ್ ವಿರುದ್ಧ ಅಗ್ರೆಸೀಟ್ ಹೋರಾಟ ಮಾಡಿ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಒಂದು ತಂಡವಾಗಿ ಚುನಾವಣಾ ಜವಾಬ್ದಾರಿ ನಿರ್ವಹಿಸುವುದು.

ಪ್ರಚಾರ, ಪ್ರಣಾಳಿಕೆ, ಸಂಪನ್ಮೂಲ ಸಂಗ್ರಹ ಮತ್ತಿತರ ವಿಷಯಗಳಲ್ಲಿ ಒಂದಕ್ಕೊಂದು ಸಮನ್ವಯ ಸಾಧಿಸುವುದು. ಆ ಮೂಲಕ ಒಟ್ಟಾರೆ ಪಕ್ಷದ ರಣತಂತ್ರ ವಿಷಯದಲ್ಲಿ ಎಲ್ಲೂ ಎಡವಟ್ಡಾಗದಂತೆ ನೋಡಿಕೊಳ್ಳುವುದು. ಕಾಂಗ್ರೆಸ್ ಪಕ್ಷವೇ ಸ್ವತಃ ಅಜೆಂಡಾವನ್ನು ಸೃಷ್ಟಿ ಮಾಡುವುದು, ಬಿಜೆಪಿ ಸೃಷ್ಟಿಸುವ ಕೋಮು ರಾಜಕಾರಣವನ್ನು ಎಕ್ಸಫೊಸ್ ಮಾಡುವುದು, ಹಿಜಾಬ್ ನಂತಹ ಸೂಕ್ಷ್ಮ ವಿಷಯದಲ್ಲಿ ಎಚ್ಚರಿಕೆಯ ನಡೆ ಇಡುವುದು, ಬಿಜೆಪಿ-ಜೆಡಿಎಸ್ ಅಪವಿತ್ರ ಮೈತ್ರಿಯನ್ನು ಬಹಿರಂಗಗೊಳಿಸುವುದು, ರಾಜ್ಯ ಬಿಜೆಪಿ ಸರ್ಕಾರದ ಅನಿಶ್ಚಿತತೆ, ಭ್ರಷ್ಟಾಚಾರ ಮತ್ತು ದುರಾಡಳಿತಗಳ ಬಗ್ಗೆ ಜನರಿಗೆ ತಿಳಿಸುವುದು ಸೇರಿದಂತೆ ಮತ್ತಿತರ ವಿಷಯಗಳನ್ನು ಕೂಡ ಪ್ರಾಸಂಗಿಕವಾಗಿ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.
Published by:Seema R
First published: