Rahul Gandhi ED Summons: ರಾಹುಲ್ ಗಾಂಧಿಗೆ ಮತ್ತೆ ಸಮನ್ಸ್! ಮತ್ತೆ ವಿಚಾರಣೆಗೆ ಹಾಜರಾಗಿ ಎಂದ ಇಡಿ

ಜಾರಿ ನಿರ್ದೇಶನಾಲಯದ  ವಿಚಾರಣೆ ವಿರೋಧಿಸಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. 

ರಾಹುಲ್​ ಗಾಂಧಿ

ರಾಹುಲ್​ ಗಾಂಧಿ

  • Share this:
    ದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 40 ಗಂಟೆಗಳ ವಿಚಾರಣೆ ಬಳಿಕ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿಗೆ ನಾಳೆ (ಜೂನ್ 21) ಮತ್ತೆ ಸಮನ್ಸ್ ಜಾರಿಯಾಗಿದೆ.  ಕೇಂದ್ರ ಸರ್ಕಾರವು ಹೊಸದಾಗಿ ಮಿಲಿಟರಿ ನೇಮಕಾತಿಗಾಗಿ ರೂಪಿಸಿರುವ ಅಗ್ನಿಪಥ ಯೋಜನೆಯನ್ನು  (Agneepath) ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಮುಂದುವರೆಯುತ್ತಿದೆ. ಈ ಬಗ್ಗೆ ನಿನ್ನೆಯಿಂದ (ಜೂನ್ 19) ದೆಹಲಿಯ ಜಂತರ್ ಮಂತರ್ ನಲ್ಲಿ (Janthar Mantar) ಸತ್ಯಾಗ್ರಹ ಹಮ್ಮಿಕೊಂಡಿರುವ ಕಾಂಗ್ರೆಸ್ ಇಂದು ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಇನ್ನೊಂದೆಡೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ (National Herald Case) ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಜಾರಿ ನಿರ್ದೇಶನಾಲಯದ  ವಿಚಾರಣೆ ವಿರೋಧಿಸಿ ಕೂಡ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ದೇಶಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ. 

    3 ದಿನದ ಬಳಿಕ  ರಾಹುಲ್ ಗಾಂಧಿಗೆ ಅವರಿಗೆ ಒಂದು ದಿನದ ವಿನಾಯಿತಿ ಸಿಕ್ಕಿತ್ತು. ಜೂನ್ 17ರಂದು ಮತ್ತೆ ವಿಚಾರಣೆಗೆ ಬರುವಂತೆ ಅವರಿಗೆ ಸೂಚನೆ ನೀಡಲಾಗಿದತ್ತು. ಆದರೆ ರಾಹುಲ್ ಗಾಂಧಿ ಅವರು ವಿಚಾರಣೆಯಿಂದ ವಿನಾಯಿತಿ ನೀಡುವಂತೆ ಕೇಳಿಕೊಂಡಿದ್ದಾರೆ ಎಂದು ತಿಳಿದುಬಂದಿತ್ತು.

    ಇಡಿಗೆ ಪತ್ರ ಬರೆದ ರಾಹುಲ್ ಗಾಂಧಿ
    ಇಡಿ ಅಧಿಕಾರಿಗಳಿಗೆ ರಾಹುಲ್ ಗಾಂಧಿ ಪತ್ರ ಬರೆದಿದ್ದರು. “ತಮ್ಮ ತಾಯಿ, ಎಐಸಿಸಿ ಅಧ್ಯಕ್ಷೆ‌ ಸೋನಿಯಾ ಗಾಂಧಿ ಅವರು ದೆಹಲಿಯ ಗಂಗಾರಾಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಅವರನ್ನು ನೋಡಬೇಕಿದೆ. ಅದಲ್ಲದೆ ಜೂನ್ ‌19ರಂದು ತಮ್ಮ ಹುಟ್ಟುಹಬ್ಬದ ಆಚರಣೆ ಇದೆ.‌ ಈ‌ ಹಿನ್ನೆಲೆಯಲ್ಲಿ ವಿಚಾರಣೆಯಿಂದ ವಿನಾಯಿತಿ ನೀಡಿ. ಸೋಮವಾರ ಅಂದರೆ ಜೂನ್ 20ರಂದು ವಿಚಾರಣೆಗೆ ಹಾಜರಾಗುತ್ತೇನೆ” ಅಂತ ಪತ್ರದಲ್ಲಿ ರಾಹುಲ್ ಗಾಂಧಿ ಅವರು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಮನವಿ ಮಾಡಿದ್ದರು.

    ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವೈಫಲ್ಯಗಳನ್ನು, ಅದರಲ್ಲೂ ಚೀನಾದ ಸೇನೆ ಭಾರತದ ಗಡಿಯೊಳಗೆ ನುಸುಳುತ್ತಿರುವ ಬಗ್ಗೆ, ಮೋದಿ ಸರ್ಕಾರದ ಕೆಟ್ಟ ಆರ್ಥಿಕ ನೀತಿಯ ಬಗ್ಗೆ, ನಿರುದ್ಯೋಗದ ಬಗ್ಗೆ, ಆರ್‌ಎಸ್‌ಎಸ್ ನಿಲುವಿನ ಬಗ್ಗೆ ಗಟ್ಟಿ ದನಿಯಲ್ಲಿ ಮಾತನಾಡುತ್ತಾರೆ. ಅದೇ ಕಾರಣಕ್ಕೆ ಅವರ ವಿರುದ್ಧ ದ್ವೇಷ ಸಾಧಿಸುತ್ತಿರುವ ಕೇಂದ್ರ ಸರ್ಕಾರ ಈಗ ಅನಾವಶ್ಯಕವಾಗಿ ಕಿರುಕುಳ ನೀಡಲೆಂದೇ ಇಡಿ ವಿಚಾರಣೆ ನಡೆಸುತ್ತಿದೆ ಅಂತ ಕಾಂಗ್ರೆಸ್ ಆರೋಪಿಸಿದೆ.

    ಇದನ್ನೂ ಓದಿ: Marriage Age: ಬಾಲ್ಯ ವಿವಾಹ ಎತ್ತಿ ಹಿಡಿದ ಕೋರ್ಟ್! ಮುಸ್ಲಿಂ ಯುವತಿಗೆ 16 ವರ್ಷಕ್ಕೆ ಮದುವೆಗೆ ಅನುಮತಿ

    ಪ್ರತಿ ದಿನ 10 ಗಂಟೆಗೂ ಹೆಚ್ಚು ಕಾಲ 3 ದಿನ ವಿಚಾರಣೆ ಮಾಡಲಾಗಿದೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ, ಕೇಂದ್ರ ತನಿಖಾ ಸಂಸ್ಥೆ (CBI), ಆದಾಯ ತೆರಿಗೆ ಇಲಾಖೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

    ಕೇಂದ್ರ ಸರ್ಕಾರದ ನಡೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ
    ರಾಜಕೀಯ ದ್ವೇಷಕ್ಕಾಗಿ ತನಿಖಾ ಸಂಸ್ಥೆಗಳನ್ನು ವ ಕೇಂದ್ರ ಸರ್ಕಾ ದುರುಪಯೋಗ ಮಾಡಿಕೊಳ್ಳುತ್ತಿದೆ ಅಂತ ಆರೋಪಿಸಿ ಇಂದೂ ಕೂಡ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.

    ಇದನ್ನೂ ಓದಿ: PM Modi Childhood Friend: ಪ್ರಧಾನಿ ಮೋದಿ ಬಾಲ್ಯದ ಗೆಳೆಯ ಅಬ್ಬಾಸ್ ಈಗೆಲ್ಲಿದ್ದಾರೆ? ಮೋದಿಗೆ ಗೆಳೆಯನ ನೆನಪಿದೆಯೇ?

    ದೂರು ನೀಡಿದ ಕಾಂಗ್ರೆಸ್ ಸಂಸದರು
    ಕಾಂಗ್ರೆಸ್ ಸಂಸದರಿಗೆ ದೆಹಲಿಯಲ್ಲಿ ಪ್ರತಿಭಟನೆ ಮಾಡಲು ಅವಕಾಶ ನೀಡುತ್ತಿಲ್ಲ. ಪ್ರತಿಭಟನೆ ಮಾಡಲು ಮುಂದಾಗುವವರನ್ನು ಬಂಧಿಸಲಾಗುತ್ತಿದೆ. ಸಂಸದರ ಮೇಲೆ‌ ಮ್ಯಾನ್ ಹ್ಯಾಂಡಲ್ ಮಾಡಲಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಲೋಕಸಭಾ ಸದಸ್ಯರು ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ‌ ದೂರು‌ ನೀಡಿದರು.‌
    Published by:guruganesh bhat
    First published: