Rahul Gandhi: ರಾಹುಲ್ ಗಾಂಧಿ ಕಚೇರಿ ಧ್ವಂಸ! ಪುಡಿಪುಡಿಯಾದ ಆಫೀಸ್ ವಿಡಿಯೋ ವೈರಲ್

ರಾಹುಲ್ ಗಾಂಧಿ ಕಚೇರಿ ಮೇಲಿನ ದಾಳಿಯಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಪಾತ್ರವಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ರಾಹುಲ್ ಗಾಂಧಿ

ರಾಹುಲ್ ಗಾಂಧಿ

 • Share this:
  ಕೇರಳ: ಶುಕ್ರವಾರ, ಜೂನ್ 24 ರಂದು ಕೇರಳದ ವಯನಾಡಿನಲ್ಲಿ ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಸಂಸದ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ. ದಾಳಿಯಲ್ಲಿ(Rahul Gandhi's MP Office Vandalised) ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಪಾತ್ರವಿದೆ ಎಂದು ಕಾಂಗ್ರೆಸ್ ಪಕ್ಷ (Congress) ಆರೋಪಿಸಿದೆ. ರಾಹುಲ್ ಗಾಂಧಿ ಅವರ ವಯನಾಡ್ ಕಚೇರಿ ಮೇಲೆ ನಡೆದ ದಾಳಿಯ ದೃಶ್ಯಗಳನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಸಿಪಿಐ(ಎಂ) ಕಾರ್ಯಕರ್ತರೇ ಹಲ್ಲೆ ನಡೆಸಿದ್ದಾರೆ   ಎಂದು ಸಂಸದ ಶಶಿ ತರೂರ್ ಆರೋಪಿಸಿದ್ದಾರೆ.

  ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರನ್ನು ಟ್ಯಾಗ್ ಮಾಡಿದ ತರೂರ್ ಈ ಆರೋಪ ಮಾಡಿದ್ದಾರೆ.

  Bengaluru Airport: ವಿಶ್ವದ ಟಾಪ್ 100 ವಿಮಾನ ನಿಲ್ದಾಣಗಳಲ್ಲಿ ಬೆಂಗಳೂರಿಗೂ ಸ್ಥಾನ!

  ವಯನಾಡ್​ನ ಕಲ್ಪೆಟ್ಟಾದಲ್ಲಿರುವ ಸಂಸದ ರಾಹುಲ್ ಗಾಂಧಿ ಅವರ ಕಚೇರಿಗೆ ಎಸ್‌ಎಫ್‌ಐ ಕಾರ್ಯಕರ್ತರ ಗುಂಪೊಂದು ಶುಕ್ರವಾರ ಧ್ವಂಸ ಮಾಡಿದೆ ಎಂದು ಆರೋಪಿಸಲಾಗಿದೆ. ವರದಿಗಳ ಪ್ರಕಾರ, ಸಂಸದರ ಕಚೇರಿಗೆ ನಡೆದ ಪ್ರತಿಭಟನಾ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಎಸ್‌ಎಫ್‌ಐ ಕಾರ್ಯಕರ್ತರು ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸದ್ಯ ಸಂಸದ ರಾಹುಲ್ ಗಾಂಧಿ ಅವರ ವಯನಾಡ್ ಕಚೇರಿ ದ್ವಂಸದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

  ಎಂಟು ಮಂದಿ ಬಂಧನ
  ಸಂಸದ ರಾಹುಲ್ ಗಾಂಧಿ ವಯನಾಡ್ ಕಚೇರಿ ಧ್ವಂಸ ಆಗುವಾಗ ಸುಮಾರು 80-100 ಕಾರ್ಯಕರ್ತರು ಇದ್ದರು. ಸದ್ಯಕ್ಕೆ ಅವರಲ್ಲಿ ಎಂಟು ಮಂದಿ ಬಂಧನದಲ್ಲಿದ್ದಾರೆ. ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ.

  ಇದನ್ನೂ ಓದಿ: Uddhav Thackeray Kangana Ranaut: ಮಹಾರಾಷ್ಟ್ರ ಸರ್ಕಾರ ಪತನ; ಕಂಗನಾ ರನೌತ್ ಹಳೆ ವಿಡಿಯೋ ವೈರಲ್!

  ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣ ಏನು?
  ಕೇರಳದ ಗುಡ್ಡಗಾಡು ಪ್ರದೇಶಗಳಲ್ಲಿನ ಅರಣ್ಯಗಳ ಸುತ್ತ ಬಫರ್ ವಲಯಗಳನ್ನು ರಚಿಸುವ ವಿಷಯದಲ್ಲಿ ಸಂಸದ ರಾಹುಲ್ ಗಾಂಧಿ ಮಧ್ಯಪ್ರವೇಶಿಸಲು ವಿಫಲರಾಗಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ ನಡೆಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಪ್ರತಿಭಟನೆಯೇ ಹಿಂಸಾಚಾರಕ್ಕೆ ತಿರುಗಿ ಸಂಸದ ರಾಹುಲ್ ಗಾಂಧಿ ಕಚೇರಿ ಧ್ವಂಸವಾಗಿದೆ ಎಂದು ವರದಿಯಾಗಿದೆ. ಆದರೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಯನಾಡ್​ನ ಕಚೇರಿ ದ್ವಂಸದ ಕುರಿತು ಇನ್ನಷ್ಟೇ ತನಿಖೆ ನಡೆಯಬೇಕಿದೆ. 
  Published by:guruganesh bhat
  First published: