ಭಾರತಕ್ಕೆ ಕರೆ ತರುವ ಮುನ್ನ ವಿದ್ಯಾರ್ಥಿಗಳಿಂದ Toilet ಕ್ಲೀನ್ ಮಾಡ್ಸಿದ್ದಾರೆ: Rahul Gandhi ಆರೋಪ ನಿಜವೇ?

ಅಸಹಾಯಕ ವಿದ್ಯಾರ್ಥಿಗಳ ಜೊತೆಗೆ ಇಂತಹ ನಾಚಿಕೆಗೇಡಿನ ವರ್ತನೆ ಇಡೀ ದೇಶಕ್ಕೆ ಮಾಡಿದ ಅವಮಾನ. ಆಪರೇಷನ್ ಗಂಗಾದ ಈ ಕಹಿ ಸತ್ಯವು ಮೋದಿ ಸರ್ಕಾರದ ನಿಜವಾದ ಮುಖವನ್ನು ತೋರಿಸಿದೆ.

ರಾಹುಲ್​ ಗಾಂಧಿ

ರಾಹುಲ್​ ಗಾಂಧಿ

 • Share this:
  ಉಕ್ರೇನ್‌ನಲ್ಲಿ (Ukraine) ಶೌಚಾಲಯಗಳನ್ನು ಸ್ವಚ್ಛಗೊಳಿಸುವಂತೆ (Cleaning Toilets) ಭಾರತೀಯ ವಿದ್ಯಾರ್ಥಿಗಳಿಗೆ (Indian Students in Ukraine) ಆದೇಶಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ (Rahul Gandhi Tweet) ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸುವಂತೆ ಭಾರತೀಯ ವಿದ್ಯಾರ್ಥಿಗಳಿಗೆ ಆದೇಶಿಸಲಾಗಿದೆ ಎಂಬ ಮಾಧ್ಯಮಗಳ ವರದಿಗಳನ್ನು ಉಲ್ಲೇಖಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘಟನೆಯನ್ನು ಖಂಡಿಸಿದ್ದಾರೆ ಮತ್ತು ಇದು ಇಡೀ ದೇಶಕ್ಕೆ ಮಾಡಿದ ಅವಮಾನ ಎಂದು ಟ್ವೀಟ್ ಮಾಡಿದ್ದಾರೆ. “ಅಸಹಾಯಕ ವಿದ್ಯಾರ್ಥಿಗಳ ಜೊತೆಗೆ ಇಂತಹ ನಾಚಿಕೆಗೇಡಿನ ವರ್ತನೆ ಇಡೀ ದೇಶಕ್ಕೆ ಮಾಡಿದ ಅವಮಾನ. ಆಪರೇಷನ್ ಗಂಗಾದ ಈ ಕಹಿ ಸತ್ಯವು ಮೋದಿ ಸರ್ಕಾರದ ನಿಜವಾದ ಮುಖವನ್ನು ತೋರಿಸಿದೆ" ಎಂದು ವಯನಾಡ್ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

  ಮೊದಲು ಟಾಯ್ಲೆಟ್​​ ಕ್ಲೀನ್​ ಮಾಡಿದವರನ್ನು ಕರೆತಂದರೇ..? 

  ಶೌಚಾಲಯಗಳನ್ನು ಸ್ವಚ್ಛಗೊಳಿಸಲು ವಿದ್ಯಾರ್ಥಿಗಳಿಗೆ ಕೇಳಲಾಯಿತು ಮತ್ತು ಯಾರು ಮೊದಲು ಅದನ್ನು ಮಾಡುತ್ತಾರೆಯೋ ಅವರು ಮೊದಲು ಭಾರತಕ್ಕೆ ಹಿಂತಿರುಗುತ್ತಾರೆ ಎಂದು ಮಾಧ್ಯಮವೊಂದು ವರದಿಯಾಗಿತ್ತು. ಈ ವರದಿಯನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ ಟ್ವೀಟ್‌ನಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  ರಾಹುಲ್​ ಆರೋಪಗಳೆಲ್ಲಾ ಸುಳ್ಳು 

  ಆದರೆ ರಾಹುಲ್ ಗಾಂಧಿ ಅವರು ಮಾಡಿದ ಟ್ವೀಟ್‌ಗೆ ಅರ್ಥವಿಲ್ಲ ಹಾಗೂ ಇದೊಂದು ಸುಳ್ಳಿನ ಕಂತೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್‌ ಕಿಡಿಕಾರಿದರು. ಉಕ್ರೇನ್‌ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಕುರಿತು ರಾಹುಲ್ ಗಾಂಧಿ ಮಾಡಿದ್ದ ಟ್ವೀಟ್‌ಗಳಿಗೆ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ಮೋದಿ ಅವರು ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುತ್ತಿರುವ ಕಾರ್ಯವನ್ನು ಜನರು ಮೆಚ್ಚುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಎಲ್ಲರೂ ಭಾರತದತ್ತ ನೋಡುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  ಇದನ್ನೂ ಓದಿ: Ukraine ​ಅಧ್ಯಕ್ಷರಿಗೆ PM Modi ಕರೆ; ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರ ಕುರಿತು ಚರ್ಚೆ

  ಕರ್ತವ್ಯವೇ ಹೊರತು ಸರ್ಕಾರ ಮಾಡಿದ ಉಪಕಾರವಲ್ಲ

  ರಷ್ಯಾ – ಉಕ್ರೇನ್ ಯುದ್ಧ ಹಿನ್ನೆಲೆ ಉಕ್ರೇನ್‌ನಿಂದ ಭಾರತೀಯರನ್ನು ಸ್ಥಳಾಂತರಿಸಲಾಗುತ್ತಿದೆ. ಈ ಕಾರ್ಯಾಚರಣೆಗೆ ಕೇಂದ್ರ ಸರ್ಕಾರ ಆಪರೇಷನ್ ಗಂಗಾ ಎಂದು ಹೆಸರಿಸಿದ್ದು, ಈವರೆಗೆ 15 ಸಾವಿರಕ್ಕೂ ಪ್ರಜೆಗಳು, ವಿದ್ಯಾರ್ಥಿಗಳನ್ನು ಭಾರತಕ್ಕೆ ವಾಪಸ್ ಕರೆ ತರುವಲ್ಲಿ ಕೇಂದ್ರ ಯಶಸ್ವಿಯಾಗಿದೆ ಮತ್ತು ತನ್ನ ಕಾರ್ಯಾಚರಣೆಯನ್ನು ಮುಂದುವರಿಸಿದೆ. ಇದಕ್ಕೂ ಮೊದಲು, ಉಕ್ರೇನ್‌ನಲ್ಲಿ ನಡೆಯುತ್ತಿರುವ ರಷ್ಯಾದ ಮಿಲಿಟರಿ ಕಾರ್ಯಾಚರಣೆಗಳ ಮಧ್ಯೆ ಭಾರತೀಯ ಪ್ರಜೆಗಳನ್ನು ದೇಶಕ್ಕೆ ಮರಳಿ ಕರೆತರಲು ಪ್ರಾರಂಭಿಸಲಾದ ಆಪರೇಷನ್ ಗಂಗಾ ಕುರಿತು ಕಾಂಗ್ರೆಸ್ ಸಂಸದರು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡರು. ‘ತೆರವು ಮಾಡುವುದು ಕರ್ತವ್ಯವೇ ಹೊರತು ಸರ್ಕಾರ ಮಾಡಿದ ಉಪಕಾರವಲ್ಲ’ ಎಂದು ಹೇಳಿದ್ದರು.

  ಕೊನೆ ಹಂತದಲ್ಲಿರುವ ಆಪರೇಷನ್​ ಗಂಗಾ

  ಇದರ ಮಧ್ಯೆ ಉಕ್ರೇನ್‌ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಕೇಂದ್ರ ಸರ್ಕಾರ ತನ್ನ ಪ್ರಯತ್ನಗಳನ್ನು ಹೆಚ್ಚಿಸುತ್ತಿದೆ. ಭಾರತೀಯ ಪ್ರಜೆಗಳ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಸಂಘಟಿಸಲು ಮತ್ತು ಮೇಲ್ವಿಚಾರಣೆ ಮಾಡಲು ಉಕ್ರೇನ್ ಗಡಿಯಲ್ಲಿರುವ 4 ನೆರೆಯ ದೇಶಗಳಿಗೆ ಸರ್ಕಾರವು 'ವಿಶೇಷ ರಾಯಭಾರಿಗಳನ್ನು' ನಿಯೋಜಿಸಿದೆ. ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಹಂಗೇರಿಯಲ್ಲಿ, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಸ್ಲೋವಾಕಿಯಾದಲ್ಲಿ, ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ರೊಮೇನಿಯಾದಲ್ಲಿ ಮತ್ತು ಜನರಲ್ ವಿಕೆ ಸಿಂಗ್ ಪೋಲೆಂಡ್‌ನಲ್ಲಿ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಪ್ರಯತ್ನಗಳನ್ನು ನೋಡಿಕೊಳ್ಳುತ್ತಿದ್ದಾರೆ.

  ಉಕ್ರೇನ್‌ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
  Published by:Kavya V
  First published: