National Herald Case: ಪಾದಯಾತ್ರೆ, ಪ್ರತಿಭಟನೆ, ಮೆರವಣಿಗೆ ನಂತರ ರಾಹುಲ್ ಗಾಂಧಿ ವಿಚಾರಣೆ

ರಾಹುಲ್​ ಗಾಂಧಿ

ರಾಹುಲ್​ ಗಾಂಧಿ

ರಾಹುಲ್ ಗಾಂಧಿ ಅವರಿಗೆ ಬೆಂ‌ಬಲ ನೀಡಲು ಬಂದ ಕಾಂಗ್ರೆಸ್ ನಾಯಕರನ್ನು ಎಐಸಿಸಿ ಕಚೇರಿಗೆ ತೆರಳಲು ಅವಕಾಶ ನೀಡದೆ‌ ಇದ್ದುದಕ್ಕೆ ಮತ್ತು ರಾಹುಲ್ ಗಾಂಧಿ ಅವರ ಜೊತೆ ಇಡಿ ಕಚೇರಿಗೆ ಮೆರವಣಿಗೆ ಮಾಡಲು ಅವಕಾಶ ಕೊಡದ ಪೊಲೀಸರ ಕ್ರಮ ಖಂಡಿಸಿ ಕಾಂಗ್ರೆಸ್ ನಾಯಕರು ಇಡಿ ಕಚೇರಿ ಎದುರು ಪ್ರತಿಭಟನೆ ನಡೆಸಲು ಮುಂದಾದರು.‌ ಆಗ ಪೊಲೀಸರು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸಿದರು.

ಮುಂದೆ ಓದಿ ...
  • Share this:

ನವದೆಹಲಿ, ಜೂ. 13: ಕಾಂಗ್ರೆಸ್ (Congress) ಪಕ್ಷವನ್ನು ಮುಜುಗರಕ್ಕೆ ಇಡುಮಾಡುತ್ತಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (Enforcement Directorate) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ಸಂಸದ ರಾಹುಲ್ ಗಾಂಧಿ (Rahul Gandhi) ಅವರಿಗೆ ಫೆಡರಲ್ ಏಜೆನ್ಸಿ ಮುಂದೆ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಿತ್ತು.‌ ಕೊವಿಡ್ ಪಾಸಿಟಿವ್ (Covid Positive) ಆದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು ವಿಚಾರಣೆಯಿಂದ ವಿನಾಯಿತಿ ಪಡೆದಿದ್ದಾರೆ. ರಾಹುಲ್ ಗಾಂಧಿ ಅವರು ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೆ ಪಾದಯಾತ್ರೆ ಮೂಲಕ ತೆರಳಿ ವಿಚಾರಣೆಗೆ ಹಾಜರಾಗಿದ್ದಾರೆ.


ರಾಹುಲ್ ಗಾಂಧಿ ಪಾದಯಾತ್ರೆ
ಜಾರಿ ನಿರ್ದೇಶನಾಲಯ, ಕೇಂದ್ರ ತನಿಖಾ ಸಂಸ್ಥೆ ಮತ್ತಿತರ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್ ತಮ್ಮ ಪಕ್ಷದ ಎಲ್ಲಾ ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ನಾಯಕರಿಗೆ ಸೂಚನೆ ನೀಡಿತ್ತು. ಆದರೆ ನಾಯಕರು ಎಐಸಿಸಿ ಕಚೇರಿಗೆ ಬರುವ ಮುನ್ನವೇ ಪೊಲೀಸರು ಎಲ್ಲಾ ರಸ್ತೆಗಳನ್ನು ಬಂದ್ ಮಾಡಿದ್ದರು. ಬಳಿಕ ರಾಹುಲ್ ಗಾಂಧಿ ಅವರೊಬ್ಬರೇ ಇಡಿ ಕಚೇರಿಗೆ ಪಾದಯಾತ್ರೆ ಮೂಲಕ ತೆರಳಿದರು.


ಇದನ್ನೂ ಓದಿ: Owaisi: ಆರೋಪಿಯ ಮನೆ ಧ್ವಂಸ: ಯುಪಿ ಸಿಎಂ ಯೋಗಿ ಹೈಕೋರ್ಟ್ ನ್ಯಾಯಾಧೀಶರೇ? ಓವೈಸಿ ಪ್ರಶ್ನೆ


ಕಾಂಗ್ರೆಸ್ ನಾಯಕರ ಬಂಧನ
ರಾಹುಲ್ ಗಾಂಧಿ ಅವರಿಗೆ ಬೆಂ‌ಬಲ ನೀಡಲು ಬಂದ ಕಾಂಗ್ರೆಸ್ ನಾಯಕರನ್ನು ಎಐಸಿಸಿ ಕಚೇರಿಗೆ ತೆರಳಲು ಅವಕಾಶ ನೀಡದೆ‌ ಇದ್ದುದಕ್ಕೆ ಮತ್ತು ರಾಹುಲ್ ಗಾಂಧಿ ಅವರ ಜೊತೆ ಇಡಿ ಕಚೇರಿಗೆ ಮೆರವಣಿಗೆ ಮಾಡಲು ಅವಕಾಶ ಕೊಡದ ಪೊಲೀಸರ ಕ್ರಮ ಖಂಡಿಸಿ ಕಾಂಗ್ರೆಸ್ ನಾಯಕರು ಇಡಿ ಕಚೇರಿ ಎದುರು ಪ್ರತಿಭಟನೆ ನಡೆಸಲು ಮುಂದಾದರು.‌ ಆಗ ಪೊಲೀಸರು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸಿದರು.


ರಾಜ್ಯದ ನಾಯಕರೂ ಭಾಗಿ
ಕರ್ನಾಟಕದ ವತಿಯಿಂದ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭಾ ಸದಸ್ಯರಾದ ನಾಸಿರ್ ಹುಸೇನ್, ಡಾ. ಎಲ್. ಹನುಮಂತಯ್ಯ, ಜಿ.ಸಿ. ಚಂದ್ರಶೇಖರ್, ಲೋಕಸಭಾ ಸದಸ್ಯ ಡಿ.ಕೆ. ಸುರೇಶ್, ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ.‌, ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಎಚ್.ಕೆ. ಪಾಟೀಲ್, ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಭಾಗಿಯಾಗಿದ್ದರು.
ದೆಹಲಿಯ ವಿದ್ಯುತ್ ರಸ್ತೆಯಲ್ಲಿರುವ ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿಯ ಮೂರನೇ ಮಹಡಿಯಲ್ಲಿರುವ ಸಿ ಬ್ಲಾಕ್‌ಗೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ಮೊದಲು ಇಡಿ ನೀಡಿದ್ದ ಸಮನ್ಸ್ ಪ್ರತಿ ಮತ್ತು ಇಂಡೆಟಿಟಿ ಕಾರ್ಡ್ ಗಳ ಪರಿಶೀಲನೆ ಮಾಡಲಾಯಿತು. ನಂತರ ರಾಹುಲ್ ಗಾಂಧಿ ಜೊತೆ ಔಪಚಾರಿಕ ವಿಚಾರಣೆ ಮಾಡಲಾಯಿತು. ಇದಾದ ಮೇಲೆ ಮುಖ್ಯ ವಿಷಯಗಳಿಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

top videos


    ಸುಬ್ರಮಣಿಯನ್ ಸ್ವಾಮಿ ದಾಖಲಿದ್ದ ಪ್ರಕರಣ
    2013ರಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ ಖಾಸಗಿ ಕ್ರಿಮಿನಲ್ ದೂರಿನ ಆಧಾರದ ಮೇಲೆ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ವಿರುದ್ಧದ ಆದಾಯ ತೆರಿಗೆ ಇಲಾಖೆ ತನಿಖೆಯನ್ನು ಆಧರಿಸಿ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿತ್ತು. ಅಸೋಸಿಯೇಟ್ ಜರ್ನಲ್ಸ್ ಲಿಮಿಟೆಡ್ ಕಾಂಗ್ರೆಸ್‌ಗೆ ನೀಡಬೇಕಿದ್ದ 90.25 ಕೋಟಿ ರೂ.ಗಳನ್ನು ವಸೂಲಿ ಮಾಡುವ ಹಕ್ಕನ್ನು ಪಡೆಯಲು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಕೇವಲ 50 ಲಕ್ಷ ರೂಪಾಯಿಗಳನ್ನು ಪಾವತಿಸಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರು ವಂಚನೆ ಮತ್ತು ಹಣವನ್ನು ದುರುಪಯೋಗಪಡಿಸಿಕೊಳ್ಳಲು ಸಂಚು ರೂಪಿಸಿದ್ದಾರೆ ಎಂದು ಸುಬ್ರಹ್ಮಣಿಯನ್ ಸ್ವಾಮಿ ಆರೋಪಿಸಿದ್ದರು.

    First published: